Site icon Vistara News

ಪಂಚಮಸಾಲಿ ಮೀಸಲಾತಿ; ಶ್ರೀ ವಚನಾನಂದ ಸ್ವಾಮೀಜಿ ಜತೆ ಸಚಿವ ಸಿ.ಸಿ.ಪಾಟೀಲ ಚರ್ಚೆ

ಪಂಚಮಸಾಲಿ

ಬೆಂಗಳೂರು: ನಗರದ ಶ್ವಾಸಯೋಗ ಸಂಸ್ಥೆಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಲೋಕೊಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಭೇಟಿಯಾಗಿ ಆಶೀರ್ವಾದ ಪಡೆದು, ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಚರ್ಚಿಸಿದರು.

ಪಂಚಮಸಾಲಿ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಯುವಕರಿಗೆ ಉದ್ಯೋಗದಲ್ಲಿ ಮೀಸಲು ಸಿಗಲು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆ ಹಾಗೂ ರಾಜ್ಯ ಸರ್ಕಾರದ ಒಬಿಸಿ 2ಎ ಮೀಸಲಾತಿ ನೀಡುವ ವಿಚಾರವಾಗಿ ಸ್ವಾಮೀಜಿ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶ್ರೀ ಜಯಪ್ರಕಾಶ್ ಹೆಗಡೆ ಅವರು ಕುಲಶಾಸ್ತ್ರ ಅಧ್ಯಯನ ವರದಿ ಸಲ್ಲಿಸಿದ ನಂತರ ಬೊಮ್ಮಾಯಿ ಸರ್ಕಾರವು ಪಂಚಮಸಾಲಿ ಸಮುದಾಯಕ್ಕೆ ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕವಾದ ಮೀಸಲಾತಿ ನೀಡಲು ಬದ್ಧವಾಗಿದೆ ಎಂದು ಸಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಿಗರಹಳ್ಳಿಯ ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಉಪಸ್ಥಿತರಿದ್ದರು.

ಇದನ್ನೂ ಓದಿ | Voting right| ಮೇಲ್ಮನೆ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಹೈಕೋರ್ಟ್

Exit mobile version