Site icon Vistara News

ಅಕ್ಟೋಬರ್‌ 1ರಂದು ಸಿಇಟಿ ಪರಿಷ್ಕೃತ ರ‍್ಯಾಂಕ್‌ ಪಟ್ಟಿ ಪ್ರಕಟ: ಸಚಿವ ಸಿ.ಎನ್. ಅಶ್ವತ್ಥನಾರಾಯಣ

ಸಿಇಟಿ

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿಯನ್ನು ಅಕ್ಟೋಬರ್ 1ರಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ karresults.nic.inನಲ್ಲಿ ನೋಡಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಿಇಟಿ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದ ಹಿನ್ನೆಲೆಯಲ್ಲಿ ರ‍್ಯಾಂಕಿಂಗ್‌ನಲ್ಲಿ ಅನ್ಯಾಯವಾಗಿದೆ ಎಂದು ರಿಪೀಟರ್ಸ್‌ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ.50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ. 50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಹೇಳಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ | B.C Nagesh | ಒಂದೇ ಆವರಣದೊಳಗೆ 2 ಶಾಲೆ ನಡೆಸುವಂತಿಲ್ಲ; ಶಿಕ್ಷಣ ಸಚಿವರ ಸೂಚನೆ

Exit mobile version