Site icon Vistara News

Medical Negligence: ನಿರ್ಲಕ್ಷ್ಯದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ: ದಿನೇಶ್ ಗುಂಡೂರಾವ್ ವಾರ್ನಿಂಗ್

Dinesh Gundu Rao meeting

#image_title

ಬೆಂಗಳೂರು: ರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡಬೇಕು. ರಾಜ್ಯದ ಯಾವುದೇ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾವು ನೋವುಗಳಾದರೆ ಸಹಿಸಲ್ಲ ಎಂದು ಆರೋಗ್ಯಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ನಗರದ ಆರೋಗ್ಯ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ಸಚಿವರು, ಆರೋಗ್ಯ ಇಲಾಖೆ ಸಾರ್ವಜನಿಕ ವಲಯದಲ್ಲಿ ಅತ್ಯಂತ ಸೂಕ್ಷ್ಮತೆ ಹೊಂದಿರುವ ಇಲಾಖೆ. ಇಲ್ಲಿ ತುರ್ತಾಗಿ ರೋಗಿಗಳಿಗೆ ಸ್ಪಂದಿಸಬೇಕು. ಕೆಲವು ತಪ್ಪುಗಳಿಂದ ರೋಗಿಗಳಿಗೆ ಸಮಸ್ಯೆಗಳಾಗುವುದನ್ನು ನೋಡುತ್ತಿದ್ದೇನೆ. ಆದರೆ, ನಿರ್ಲಕ್ಷ್ಯದಿಂದ ರೋಗಿಗಳಿಗೆ ತೊಂದರೆ ಆಗಬಾರದು ಸೂಚಿಸಿದರು.

ತಪ್ಪುಗಳನ್ನು ಸರಿಪಡಿಸೊಣ‌. ಆದರೆ ನಿರ್ಲಕ್ಷ್ಯ ತೋರಬಾರದು. ಇದು ಅಕ್ಷಮ್ಯ. ಆ ರೀತಿಯ ಪ್ರಕರಣಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಸಚಿವರು, ಕ್ರಮ ಕೈಗೊಂಡ ಬಳಿಕ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡ ಹಾಕಿದರೆ, ನಾನು ಮಣಿಯುವವನಲ್ಲ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಸಾರ್ವಜನಿಕ ಸಂಪರ್ಕಾಧಿಕಾರಿ ರೀತಿಯಲ್ಲೂ ಕೆಲಸ ಮಾಡಬೇಕು. ರೋಗಿಗಳಿಗೆ ಆತ್ಮಸ್ಥರ್ಯ ತುಂಬಬೇಕು. ನೀವೇ ಉದಾಸೀನ ಮಾಡಿದರೆ ರೋಗಿಗಳಿಗೆ ನೆಮ್ಮದಿಯೇ ಇಲ್ಲದಂತಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ | Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

ರಾಜ್ಯದಾದ್ಯಂತ ಬೇರೆ ಬೇರೆ ಪ್ರಾದೇಶಿಕ ವಿಭಾಗಗಳಲ್ಲಿ ಪ್ರವಾಸ ಮಾಡುವುದಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ ದಿನೇಶ್‌ ಗುಂಡೂರಾವ್ ಅವರು, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತೇನೆ. ಆಸ್ಪತ್ರೆಗಳಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಒಳ್ಳೆಯ ಹೆಸರು ಪಡೆಯುವಂತೆ ಕೆಲಸ ಮಾಡಬೇಕು. ಯಾರು ಒಳ್ಳೆಯ ಕೆಲಸ ಮಾಡುತ್ತಾರೋ ಅವರ ಪರ ನಾನಿರುತ್ತೇನೆ. ಸರ್ಕಾರದಿಂದ ಕೂಡ ಸಂಪೂರ್ಣ ಸಹಕಾರ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾವಾರು ಪ್ರತಿಯೊಬ್ಬ ಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳುಗೆ ಸೂಚಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಜಿಲ್ಲಾವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಏನೆಲ್ಲಾ ಬದಲಾವಣೆಗಳಾಗಿದೆ. ಎಷ್ಟು ಪ್ರಗತಿ ಕಂಡಿದ್ದೇವೆ. ಏಲ್ಲಿ ಸರಿದಾರಿಯಲ್ಲಿ ಹೋಗುತ್ತಿಲ್ಲ. ಎಲ್ಲ ಮಾಹಿತಿ ನೀಡುವಂತೆ ಸೂಚನೆ ನೀಡಿದರು. .

ಇದನ್ನೂ ಓದಿ | Loksabha 2024: ಲೋಕಸಭೆಯಲ್ಲೂ ಬಿಜೆಪಿಯನ್ನು ಸೋಲಿಸಲು ʼಭೀಮ ಸಂಕಲ್ಪʼ: ನಗಾರಿ ಬಾರಿಸಿದ ಸಿದ್ದರಾಮಯ್ಯ

ರಾಷ್ಟ್ರೀಯ ಹೆಲ್ತ್ ಮಿಷನ್ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಡಯಾಬಿಟೀಸ್ ಸಮೀಕ್ಷಾ ವರದಿಗಳ ಕುರಿತು ಚರ್ಚೆ ನಡೆಸಿದರು. ಹಲವು ಜಿಲ್ಲೆಗಳಲ್ಲಿ ಡಯಾಬಿಟಿಸ್ 1 ರಿಂದ 2 ಪರ್ಸೆಂಟ್ ಇದೆ ಎಂದು ಸಮೀಕ್ಷೆಯಲ್ಲಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಜೀರೋ ಪರ್ಸೆಂಟ್ ಅಂತ ವರದಿ ನೀಡಿದ್ದಾರೆ. ಆದರೆ, ಯಾದಗಿರಿ ಡಿ.ಎಚ್‌ಒ ಅವರಿಗೇ ಡಯಾಬಿಟೀಸ್ ಇದ್ದ ಹಾಗಿದೆ ಎಂದು ಸಚಿವರು ಹಾಸ್ಯ ಚಟಾಕಿ ಹಾರಿಸಿದರು. ಎಲ್ಲರೂ ಕ್ರಿಯೇಟಿವ್ ಆಗಿ, ಉತ್ತಮವಾಗಿ ಕೆಲಸ ಮಾಡಿ. ಸಾರ್ವಜನಿಕರಿಗೆ ನೀವು ಒಳ್ಳೆಯದು ಮಾಡಿದರೆ, ನಿಮಗೂ ಒಳ್ಳೆಯದಾಗಲಿದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

Exit mobile version