ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ - Vistara News

Latest

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೃಷ್ಣಗಿರಿ: ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿ ಮಾತು ತಪ್ಪಿದ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಯುವಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಚಿದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ವಚನಭ್ರಷ್ಟವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣಗಿರಿಯಲ್ಲಿಂದು ಕಾಂಗ್ರೆಸ್ -ಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದೇಶದಿಂದ ಕಪ್ಪುಹಣ ತರುವುದಾಗಿ, 2022ರ ಹೊತ್ತಿಗೆ ಸರ್ವರಿಗೂ ಸೂರು ಎಂದು ಘೋಷಿಸಿದ ಪ್ರಧಾನಿ ನುಡಿದಂತೆ ನಡೆಯಲೇ ಇಲ್ಲ ಎಂದು ಟೀಕಿಸಿದರು.

ಕೇಂದ್ರ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಗಳಾದ ಇ.ಡಿ, ಸಿಬಿಐ, ಐ.ಟಿ. ಮೊದಲಾದ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ದಕ್ಷಿಣ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ದಕ್ಷಿಣ ರಾಜ್ಯಗಳಿಗೆ ಅದರಲ್ಲೂ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಕ್ಕೆ ತೆರಿಗೆಯ ಪಾಲು, ಅನುದಾನ, ಜಿಎಸ್ಟಿ ಪರಿಹಾರ, ಬರ, ಪ್ರವಾಹ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದೂ ದೂಷಿಸಿದರು.
ಪ್ರಧಾನಿ ಮೋದಿ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಕಡಿತ ಮಾಡುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡಲು ಸಂಚು ನಡೆಸಿತ್ತು. ಈಗ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಸಾಮಾಜಿಕ ಸಂರಚನೆಯನ್ನೇ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ, ಸಮಾಜವನ್ನು ಭಾಷೆ, ಧರ್ಮದ ಹೆಸರಲ್ಲಿ ಒಡೆಯಲು ಪ್ರಯತ್ನಿಸುತ್ತಿದೆ. ಇದು ಸಂವಿಧಾನಕ್ಕೆ ಅಪಾಯಕಾರಿ ಎಂದರು.

ರಾಜಕೀಯ ಲಾಭಕ್ಕಾಗಿ ನಾಟಕ ಮಾಡುವ, ಸುಳ್ಳು ಹೇಳುವ ಭಾರತೀಯ ಜನತಾ ಪಕ್ಷ ಹಾಗೂ ಮಿತ್ರಪಕ್ಷಗಳ ನಿಜಬಣ್ಣ ಈಗ ಬಯಲಾಗಿದೆ. ಜನರು ಜಾಗೃತರಾಗಿದ್ದಾರೆ. ಹೀಗಾಗಿ ತಮಿಳುನಾಡು ಜನತೆ ಸಾಮಾಜಿಕ ನ್ಯಾಯಕ್ಕಾಗಿ, ತಮ್ಮ ನಾಡಿನ ಹಿರಿಮೆ, ಸಂಸ್ಕೃತಿ, ಸಂಪ್ರದಾಯ ಮತ್ತು ಭಾಷೆಯ ರಕ್ಷಣೆಗಾಗಿ ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಕೂಟಕ್ಕೆ ಮತನೀಡುತ್ತಾರೆ ಎಂದು ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ನಮ್ಮ ಸರ್ಕಾರ ಎಲ್ಲ 5 ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 53 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಈ ಗ್ಯಾರಂಟಿಗಳಿಂದ 1 ಕೋಟಿ ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬಂದಿವೆ. ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಕರ್ನಾಟಕದ ತಲಾದಾಯ ದೇಶದಲ್ಲೇ ಅತ್ಯುತ್ತಮವಾಗಿರುವುದಕ್ಕೆ ಈ ಗ್ಯಾರಂಟಿಗಳು ಕಾರಣ ಎಂದರು.

ರಾಜಕೀಯ ಸ್ವಾರ್ಥಕ್ಕಾಗಿ ಸಮಾಜದ ಸ್ವಾಸ್ಥ್ಯ ಕದಡುವ ಶಕ್ತಿಗಳನ್ನು ತಮಿಳುನಾಡು ಜನತೆ ದೂರ ಇಡುತ್ತಾರೆ. ದೆಹಲಿಯಿಂದ ಪರೋಕ್ಷವಾಗಿ ಆಡಳಿತ ನಡೆಸುವ ವ್ಯವಸ್ಥೆ ಅವರಿಗೆ ಬೇಕಿಲ್ಲ. ಈ ಬಾರಿ ಮತ್ತೆ ಡಿಎಂ.ಕೆ, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೃಷ್ಣಗಿರಿ ಕಾಂಗ್ರೆಸ್ ಅಭ್ಯರ್ಥಿ ಚಲ್ಲಕುಮಾರ್, ಹಿರಿಯ ನಾಯಕರಾಗಿದ್ದು, ಸಂಸತ್ ಸದಸ್ಯರಾಗಿ ಅದ್ಭುತ ಕಾರ್ಯ ಮಾಡಿದ್ದಾರೆ. ರೈಲ್ವೆ, ಹೆದ್ದಾರಿ, ಸೇತುವೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪ್ರಾಮಾಣಿಕತೆ, ದಕ್ಷತೆಗೆ ಹೆಸರಾದ ಚಲ್ಲಕುಮಾರ್ ಗೆಲ್ಲಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಚಲ್ಲಕುಮಾರ್, ರೇಣುಕಾಪ್ರಸನ್ನ ಮತ್ತಿತರರು ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಹುಣಸೂರು: ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನಪರವಾದ ಕೆಲಸ ಮಾಡಿದ್ದು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕಾದರೆ ಬಸವಣ್ಣ, ಅಂಬೇಡ್ಕರ್, ಗಾಂಧೀಜಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶ. ಎಲ್ಲರಿಗೂ ಸಮಾನ ಅವಕಾಶಗಳು, ಜಾತಿ ವರ್ಗ ರಹಿತವಾದ ಸಮಾಜ ನಿರ್ಮಾಣವಾಗಬೇಕೆನ್ನುವುದು ನಮ್ಮ ಸರ್ಕಾರದ ಉದ್ದೇಶ. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮೌಢ್ಯಗಳಿಂದ ದೂರವಿದ್ದು, ಜಾತಿ, ವರ್ಗಗಳನ್ನು ಬಿಟ್ಟಾಗ ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಬಸವಣ್ಣನವರು ಸಮಾಜದ ಜಾತಿವ್ಯವಸ್ಥೆ ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು. ಮೌಢ್ಯಗಳಿಂದ ದೂರವಿರುವ , ಜಾತಿ ಮತ್ತು ವರ್ಗರಹಿತ ಸಮಾಜ ನಿರ್ಮಾಣವನ್ನು ಅವರು ಬಯಸಿದ್ದರು. ಬಸವಣ್ಣನವರು ಮೇಲ್ಜಾತಿಗೆ ಸೇರಿದವರಾದರೂ, ಸಮಾಜದ ಕಟ್ಟಕಡೆಯ ಅಸ್ಪೃಶ್ಯತೆಯ ಜಾತಿಯಲ್ಲಿ ಹುಟ್ಟಿದವನು ಎಂದು ಹೇಳಿಕೊಳ್ಳುತ್ತಿದ್ದರು. ಬಸವಾದಿ ಶರಣರು ಸಮಾಜ ಪರಿವರ್ತನೆಗೆ ಪೂರ್ಣ ಪ್ರಮಾಣದಲ್ಲಿ ಸಫಲರಾಗಲಿಲ್ಲ. ಬಸವ ವಿಚಾರಗಳು ಹಿಂದೆಯೂ, ಇಂದಿಗೂ, ಭವಿಷ್ಯದಲ್ಲಿಯೂ ಪ್ರಸ್ತುತವಾಗಿದೆ. ಮನುಷ್ಯ ಸಮಾಜ ನಿರ್ಮಾಣ ಮಾಡಲು ಬಯಸಿದ ಬಸವಣ್ಣನವರು ಒಬ್ಬ ಮಾನವತಾವಾದಿ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಸವಣ್ಣನವರು ಪ್ರತಿಪಾದಿಸುತ್ತಿದ್ದರು ಮತ್ತು ಇವುಗಳನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತವೆ ಎಂದು ವಿವರಿಸಿದರು.

Continue Reading

Latest

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

VISTARANEWS.COM


on

ಬೆಂಗಳೂರು: ಕಳೆದ ವರ್ಷ ಸಿಇಟಿ ಪರೀಕ್ಷೆ (CET) ನಡೆದಾಗ ಜನಿವಾರದ ಘಟನೆ ಕೋಲಾಹಲವನ್ನೇ ಸೃಷ್ಟಿಸಿತ್ತು. ಹೀಗಾಗಿ ಈ ಬಾರಿ ಮುನ್ನೆಚ್ಚರಿಕೆ ವಹಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಏಪ್ರಿಲ್​ 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಬಾರಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಸ್ತ್ರ ಸಂಹಿತೆ ಅಧಿಕಾರಿ ನೇಮಕ: ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಪ್ರಾಧಿಕಾರ ಎಲ್ಲ 750 ಪರೀಕ್ಷೆ ಕೇಂದ್ರಗಳಲ್ಲಿಯೂ ವಸ್ತ್ರ ಸಂಹಿತೆ ಅಧಿಕಾರಿಗಳನ್ನ ನೇಮಕ ಮಾಡಲು ನಿರ್ಧರಿಸಿದೆ. ಡ್ರೆಸ್ ಕೋಡ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಆಯಾ ಕಾಲೇಜಿನ ಹಿರಿಯ ಪ್ರಾಧ್ಯಾಪಕರಿಗೆ ಡ್ರೆಸ್ ಕೂಡ ವಿಚಾರವಾಗಿ ಈಗಾಗಲೇ ವಿಶೇಷ ತರಬೇತಿ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.

ವಸ್ತ್ರ ಸಂಹಿತೆ ಹೀಗಿರಲಿದೆ:
ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್, ಸರಳವಾದ ಪ್ಯಾಂಟ್ ಧರಿಸಬಹುದು. ಆದರೆ ಡಿಸೈನ್‌ ಬಟನ್, ಜಿಪ್ ಪಾಕೆಟ್ ಅಥವಾ ಹೆಚ್ಚಿನ ಕಸೂತಿ​ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಶೂಗಳಿಗೆ ಬದಲಾಗಿ ಚಪ್ಪಲಿ ಧರಿಸಬೇಕು. ಯಾವುದೇ ಸರ, ಕಿವಿಯೋಲೆ, ಉಂಗುರ ಅಥವಾ ಕಡಗಗಳಂತಹ ಯಾವುದೇ ಲೋಹದ ಆಭರಣಗಳನ್ನು ಧರಿಸುವಂತಿಲ್ಲ.

ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಡಿಸೈನ್​, ಹೂ, ಬ್ರೂಚ್‌ ಗಳು ಅಥವಾ ಬಟನ್‌ ಗಳನ್ನು ಹೊಂದಿರುವ ಡ್ರೆಸ್‌ ಅನ್ನು ನಿಷೇಧಿಸಲಾಗಿದೆ. ಪೂರ್ಣ ತೋಳಿನ ಟಾಪ್‌, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಹೀಲ್ಡ್​ ಶೂ, ಹೀಲ್ಡ್​ ಚಪ್ಪಲಿಗೂ ಅವಕಾಶ ಇಲ್ಲ. ಪ್ರತಿ ಕೇಂದ್ರದಲ್ಲೂ ಸಿಸಿ ಕ್ಯಾಮೆರಾ ಮತ್ತು ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ.

ನಿಷೇಧಿತ ವಸ್ತುಗಳು:
ಮೊಬೈಲ್, ಪೆನ್ ಡ್ರೈವ್, ಬ್ಲೂಟೂತ್, ಇಯರ್ ಫೋನ್ ಹಾಗೂ ಯಾವುದೇ ರೀತಿಯ ವಾಚ್; ಪೆನ್ಸಿಲ್, ಎರೇಸರ್, ಜಿಯೋಮೆಟ್ರಿ ಬಾಕ್ಸ್, ಪೇಪರ್ ಅಥವಾ ಲಾಗ್ ಟೇಬಲ್; ಟೋಪಿ, ಮಾಸ್ಕ್, ಬಣ್ಣದ ಅಥವಾ ಲೋಹದ ನೀರಿನ ಬಾಟಲಿ ಹಾಗೂ ತಿಂಡಿ ತಿನಿಸುಗಳನ್ನು ತರುವಂತಿಲ್ಲ.
ಅಭ್ಯರ್ಥಿಗಳು ಈ ಸೂಚನೆಗಳನ್ನು ಪಾಲಿಸಿದರೆ ಸರಾಗವಾಗಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದೆ ಪರೀಕ್ಷೆ ಬರೆಯಬಹುದು. ಇಲ್ಲವಾದಲ್ಲಿ ಗೊಂದಲಕ್ಕೆ ಈಡಾಗಿ ವಿನಾಕಾರಣ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬೇಕಾದೀತು.

Continue Reading

Latest

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ

VISTARANEWS.COM


on

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ವಜಾಗೊಳಿಸಿರುವ ನ್ಯಾಯಾಲಯ, ಹಳೆಯ ಪದ್ಧತಿಯಂತೆ ಕಡ್ಡಾಯವಾಗಿ ಅಂಕಗಳನ್ನೇ ನೀಡಬೇಕು ಎಂದು ಆದೇಶಿಸಿದೆ. ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಪರೀಕ್ಷಾ ಮೌಲ್ಯಮಾಪನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಹಿಂದಿ ವಿಷಯದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ ಎಂಬ ಕಾರಣ ನೀಡಿ ಶಿಕ್ಷಣ ಇಲಾಖೆಯು ಅಂಕಗಳ ಬದಲಿಗೆ ಗ್ರೇಡ್ ಪದ್ಧತಿ ಜಾರಿಗೆ ತರಲು ಮುಂದಾಗಿತ್ತು. ಇದರಿಂದ ಒಟ್ಟು 625 ಅಂಕಗಳ ಪರೀಕ್ಷೆಯು 525 ಅಂಕಗಳಿಗೆ ಇಳಿಕೆಯಾಗುತ್ತಿತ್ತು. ಆದರೆ, ಸರ್ಕಾರದ ಈ ದಿಢೀರ್ ಬದಲಾವಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ, ವಿಶೇಷವಾಗಿ ಯುಪಿಎಸ್‌ಸಿ ಮತ್ತು ಬ್ಯಾಂಕಿಂಗ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ವಾದಿಸಿದ್ದರು. ಕೋರ್ಟ್ ಅಭಿಪ್ರಾಯವೇನು?”ಆಟದ ಮಧ್ಯೆ ನಿಯಮ ಬದಲಿಸುವುದು ಸರಿಯಲ್ಲ” ಎಂದು ಮಾರ್ಮಿಕವಾಗಿ ನುಡಿದ ಹೈಕೋರ್ಟ್, ಶೈಕ್ಷಣಿಕ ವರ್ಷದ ಆರಂಭದಲ್ಲಿದ್ದ ನಿಯಮಗಳನ್ನೇ ಪಾಲಿಸಬೇಕು ಎಂದು ಹೇಳಿದೆ. ಈ ಆದೇಶದಿಂದಾಗಿ ವಿದ್ಯಾರ್ಥಿಗಳ ಒಟ್ಟು ಫಲಿತಾಂಶದಲ್ಲಿ ಹಿಂದಿ ಅಂಕಗಳು ಕೂಡ ಸೇರ್ಪಡೆಯಾಗಲಿದ್ದು, ಹೆಚ್ಚಿನ ಅಂಕ ಗಳಿಸಿದವರಿಗೆ ಇದು ರ‍್ಯಾಂಕ್ ಲಿಸ್ಟ್‌ನಲ್ಲಿ ಸಹಕಾರಿಯಾಗಲಿದೆ. ಏಪ್ರಿಲ್ ಅಂತ್ಯಕ್ಕೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದ್ದು, ಈ ಆದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮವಹಿಸಲು ಸರ್ಕಾರ ಮುಂದಾಗಿದೆ.

Continue Reading

Latest

ಬೆಂಗಳೂರಿಗರಿಗೆ ಬಿಗ್ ಅಲರ್ಟ್: ನಗರದಲ್ಲಿ ‘ಹೀಟ್ ವೇವ್’ ಭೀತಿ, ಮಧ್ಯಾಹ್ನ ಹೊರಬರುವ ಮುನ್ನ ಎಚ್ಚರ!

VISTARANEWS.COM


on

ಬೆಂಗಳೂರಿಗರಿಗೆ ಬಿಗ್ ಅಲರ್ಟ್: ನಗರದಲ್ಲಿ ‘ಹೀಟ್ ವೇವ್’ ಭೀತಿ, ಮಧ್ಯಾಹ್ನ ಹೊರಬರುವ ಮುನ್ನ ಎಚ್ಚರ!

ಬೆಂಗಳೂರು: ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಜನರನ್ನು ಬಿಸಿಗಾಳಿ (Heatwave) ಕಂಗಾಲಾಗುವಂತೆ ಮಾಡಿದೆ. ಹವಾಮಾನ ಇಲಾಖೆಯ ಪ್ರಕಾರ, ನಗರದ ಉಷ್ಣಾಂಶವು ಸಾಮಾನ್ಯಕ್ಕಿಂತ ಗಣನೀಯವಾಗಿ ಹೆಚ್ಚಾಗಿದ್ದು, ಮಧ್ಯಾಹ್ನದ ಸಮಯದಲ್ಲಿ ಹೊರಬರುವವರಿಗೆ ಬಿಸಿಲಿನ ತಾಪ ತೀವ್ರವಾಗಿ ತಟ್ಟುತ್ತಿದೆ. ಮಳೆಯ ನಿರೀಕ್ಷೆಯಿದ್ದರೂ ಸಹ, ಸದ್ಯಕ್ಕೆ ಬಿಸಿಗಾಳಿಯ ಆರ್ಭಟ ಕಡಿಮೆಯಾಗದ ಕಾರಣ ನಗರವಾಸಿಗಳು ಹೈರಾಣಾಗಿದ್ದಾರೆ.

ಮಧ್ಯಾಹ್ನ ಹೊರಹೋಗುವ ಮುನ್ನ ಜಾಗರೂಕರಾಗಿರಿ
ಬಿಸಿಗಾಳಿಯ ಅಪಾಯದ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸೂರ್ಯನ ಕಿರಣಗಳು ತೀವ್ರವಾಗಿರುವುದರಿಂದ, ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಹೋಗುವುದನ್ನು ತಪ್ಪಿಸಿ. ಒಂದು ವೇಳೆ ಅನಿವಾರ್ಯವಾಗಿ ಹೊರಹೋಗಬೇಕಾದಲ್ಲಿ ಛತ್ರಿ, ಟೋಪಿ ಮತ್ತು ಸನ್‌ಗ್ಲಾಸ್‌ಗಳನ್ನು ಬಳಸುವುದು ಸೂಕ್ತ. ಈ ಬಿಸಿಲಿನಿಂದಾಗಿ ನಿರ್ಜಲೀಕರಣ (Dehydration) ಮತ್ತು ಸನ್‌ಸ್ಟ್ರೋಕ್ ಆಗುವ ಸಂಭವ ಹೆಚ್ಚಿರುತ್ತದೆ.

ಆರೋಗ್ಯ ರಕ್ಷಣೆಗೆ ಸರಳ ಕ್ರಮಗಳು
ಬಿಸಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ದೇಹವನ್ನು ಸದಾ ಹೈಡ್ರೇಟೆಡ್ ಆಗಿಟ್ಟುಕೊಳ್ಳುವುದು ಅತ್ಯಗತ್ಯ. ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯುವುದು, ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳನ್ನು ಸೇವಿಸುವುದು ಒಳ್ಳೆಯದು. ಹಗುರವಾದ ಮತ್ತು ನೂಲಿನ (Cotton) ಬಟ್ಟೆಗಳನ್ನು ಧರಿಸುವುದು ನಿಮ್ಮ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಈ ಸಮಯದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest6 ನಿಮಿಷಗಳು ago

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

Latest19 ನಿಮಿಷಗಳು ago

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

Latest31 ನಿಮಿಷಗಳು ago

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

Latest52 ನಿಮಿಷಗಳು ago

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ

Latest2 ಗಂಟೆಗಳು ago

ಬೆಂಗಳೂರಿಗರಿಗೆ ಬಿಗ್ ಅಲರ್ಟ್: ನಗರದಲ್ಲಿ ‘ಹೀಟ್ ವೇವ್’ ಭೀತಿ, ಮಧ್ಯಾಹ್ನ ಹೊರಬರುವ ಮುನ್ನ ಎಚ್ಚರ!

Latest3 ಗಂಟೆಗಳು ago

ಅಕ್ಷಯ ತೃತೀಯದಂದು ದಾಖಲೆ ಮಟ್ಟಕ್ಕೆ ಚಿನ್ನ ಖರೀದಿ! ಸೇಲ್‌ ಆದ ಬಂಗಾರ ಎಷ್ಟು ಕೆಜಿ ಗೊತ್ತಾ?

Latest21 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest22 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ22 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ22 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌