Site icon Vistara News

Vijayanagara News: ವಿಜಯನಗರ ಮಾದರಿ ಜಿಲ್ಲೆಯಾಗಿಸುವ ಸಂಕಲ್ಪ: ಸಚಿವ ಜಮೀರ್ ಅಹ್ಮದ್‌ ಖಾನ್‌

Vijayanagara district incharge Minister Jameer Ahmed Khan statement

ಹೊಸಪೇಟೆ: ವಿಜಯನಗರ ಜಿಲ್ಲೆಯನ್ನು (Vijayanagara district) ಮಾದರಿ ಜಿಲ್ಲೆಯನ್ನಾಗಿಸುವ (model district) ಸಂಕಲ್ಪ ತೊಟ್ಟಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಬಳಿಕ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ನಂಬಿಕೆ ಇಟ್ಟು ಈ ಜಿಲ್ಲಾ ಉಸ್ತುವಾರಿ ನೀಡಿದ್ದು ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ ಎಂದು ಹೇಳಿದರು.

ಜಿಲ್ಲೆಯ ಪ್ರತಿ ತಾಲೂಕಿನ ಸಮಸ್ಯೆ ಅರಿಯಲು ಕೆಡಿಪಿ ಸಭೆ ನಡೆಸುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಹಾಕಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ: Mahila Satyagraha Smaraka: ಧೀರ ಮಹಿಳೆಯರ ಹೋರಾಟ ನೆನಪಿಸುವ ಮಾವಿನಗುಂಡಿಯ ಮಹಿಳಾ ಸತ್ಯಾಗ್ರಹ ಸ್ಮಾರಕ

ಶ್ರೀಕೃಷ್ಣದೇವರಾಯರ ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ ಪರಂಪರೆ ಹೊಂದಿರುವ ನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಉಸ್ತುವಾರಿ ಸಚಿವನಾಗಿರುವುದು ನನ್ನ ಪುಣ್ಯ. ವಿಜಯನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರದ ಮಹತ್ತರ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನ ಭಾಗ್ಯ ಇಂದು ಕೋಟ್ಯಂತರ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸುತ್ತಿದೆ. ಸರ್ಕಾರದ ಐದು ಮಹತ್ತರ ಯೋಜನೆಗಳಲ್ಲಿ ನಾಲ್ಕು ಜಾರಿ ಮಾಡಿದ್ದು, ಯುವ ನಿಧಿ ಸಹ ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಇದು ನಮ್ಮ ಬದ್ಧತೆ ಹಾಗೂ ಜನಪರ ನಿಲುವು ಹೌದು.

ಸರ್ಕಾರದ ಯೋಜನೆಗಳ ಮೂಲಕ ಪ್ರಗತಿಯತ್ತ ಸಾಗಲು ತಾವೆಲ್ಲರೂ ನಮ್ಮೊಂದಿಗೆ ಕೈ ಜೋಡಿಸಿ ಈ ಜಿಲ್ಲೆಯನ್ನು ಅಭಿವೃದ್ದಿಯತ್ತ ಕೊಂಡ್ಯೊಯಲು ಸಂಕಲ್ಪ ತೊಡೋಣಾ ಎಂದು ವಿನಂತಿಸುತ್ತೇನೆ ಎಂದು ಹೇಳಿದರು.

ನವೆಂಬರ್‌ನಲ್ಲೇ ಹಂಪಿ ಉತ್ಸವ

ಐತಿಹಾಸಿಕ ಹಂಪಿ ಉತ್ಸವ ನವೆಂಬರ್‌ನಲ್ಲೇ ಮಾಡಲು ತೀರ್ಮಾನ ಮಾಡಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಈ ಬಗ್ಗೆ ಸಭೆ ನಡೆಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸ್ವಾತಂತ್ರೋತ್ಸವದ ಪ್ರಯುಕ್ತ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃ ತಿಕ ಕಾರ್ಯಕ್ರಮ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ, ಪಿಯುಸಿ ಯಲ್ಲಿ ಶೇ. 92 ಅಂಕ ಪಡೆದಿದ್ದ ವಿಶೇಷ ಚೇತನ ವಿದ್ಯಾರ್ಥಿ ಕೊಟ್ಟೂರಿನ ಖುಷ್ ನಾಯ್ಕ್ ಗೆ ಉನ್ನತ ವ್ಯಾಸಂಗಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ನೆರವು ನೀಡಿದರು.

ಇದನ್ನೂ ಓದಿ: Weather Report : ರಾಜ್ಯದ ಹಲವೆಡೆ 50-50 ಮಳೆಯಾಟ!

ಈ ವೇಳೆ ಸಂಸದ ದೇವೇಂದ್ರಪ್ಪ, ಶಾಸಕ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಎಸ್ಪಿ ಹರಿಬಾಬು, ಜಿಲ್ಹಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಎಡಿಸಿ ಅನುರಾಧ ಉಪಸ್ಥಿತರಿದ್ದರು.

Exit mobile version