Site icon Vistara News

Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

Minister Lakshmi Hebbalkar has alleged that the Central Government intention is to destabilize non BJP governments in the country

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ ಆಧಿಕಾರಿಗಳ ವರ್ತನೆ ವಿರೋಧಿಸಿ, ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಮಂಗಳವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಇ.ಡಿಯನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮ ಸರ್ಕಾರವನ್ನು ಅಸ್ಥಿರ ಗೊಳಿಸುವುದೇ ಕೇಂದ್ರ ಸರ್ಕಾರದ ಮೂಲ ಉದ್ದೇಶ ಎಂದು ದೂರಿದರು.

ಇದನ್ನೂ ಓದಿ: Karnataka Rain : ಹಾವೇರಿಯಲ್ಲಿ ಮಳೆಯಾರ್ಭಟಕ್ಕೆ ಮರ ಬಿದ್ದು ಬಲಿಯಾದ ಹಸು; ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ವಾಲ್ಮೀಕಿ ನಿಗಮದ ಹಗರಣದಲ್ಲಿ ನ್ಯಾಷನಲ್ ಬ್ಯಾಂಕ್‌ಗಳ ಪಾತ್ರ ಕಂಡು ಬಂದಿದೆ. ಹಾಗಿದ್ದರೆ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ರಾಜೀನಾಮೆ ನೀಡಲಿ. ನಾವು ಯಾವ ತನಿಖೆಗೂ ಹೆದರಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬ್ರಿಟೀಷರಿಗೆ ಹೆದರದ ಕಾಂಗ್ರೆಸ್ ಪಕ್ಷ ಕೇಂದ್ರದ ಇ.ಡಿಗೆ ಹೆದರುತ್ತಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್‌ಐಟಿ ಮೂಲಕ ತನಿಖೆಯನ್ನು ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

ಇದನ್ನೂ ಓದಿ: Bengaluru Police: ಪೊಲೀಸರು ಇನ್ಮುಂದೆ ರೀಲ್ಸ್‌ ಮಾಡುವಂತಿಲ್ಲ: ಕಮಿಷನರ್ ಖಡಕ್‌ ಎಚ್ಚರಿಕೆ

ನಾವು ಸದನದ ಹೊರಗೆ ಒಳಗೆ ಹೋರಾಡುತ್ತೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Exit mobile version