Site icon Vistara News

KSDL Bangalore: ಸಿಎಂಗೆ ಕೆಎಸ್‌ಡಿಎಲ್ ಲಾಭಾಂಶ ಚೆಕ್‌ ಹಸ್ತಾಂತರಿಸಿದ ಎಂ.ಬಿ. ಪಾಟೀಲ್‌

KSDL MB Patil

ಬೆಳಗಾವಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯ (KSDL Bangalore) ಲಾಭಾಂಶದ 54.74 ಕೋಟಿ ರೂ. ಚೆಕ್ ಅನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಸುವರ್ಣ ಸೌಧದಲ್ಲಿ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಪರಿಹಾರ‌ ನಿಧಿಗೂ 5 ಕೋಟಿ ರೂಪಾಯಿಯ ಚೆಕ್ ಅನ್ನು ಸಚಿವರು ನೀಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಕೆಎಸ್ಡಿಎಲ್ ಸಿಬ್ಬಂದಿ, ಕಾರ್ಮಿಕ ಸಂಘದ ಮುಖಂಡರು ಇದ್ದರು.

ಇದನ್ನೂ ಓದಿ | Belagavi Winter Session: ಬಾಲ್ಯ ವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕ್ತೇವೆ: ಲಕ್ಷ್ಮಿ ಹೆಬ್ಬಾಳ್ಕರ್‌

ರಾಜ್ಯದಲ್ಲಿ 34,115 ಕೋಟಿ ಹೂಡಿಕೆಗೆ ಅನುಮೋದನೆ; 13,308 ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ (Job Creation) ದೊರೆಯುವ ನಿರೀಕ್ಷೆ ಇದೆ.

ಈ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಮಾಹಿತಿ ನೀಡಿದ್ದು, ಹೆಚ್ಚುವರಿ ರೂ. 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ ಎಂದು ತಿಳಿಸಿದರು.

ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (4,960 ಕೋಟಿ ರೂ.), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (3,804 ಕೋಟಿ ರೂ.), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (3237.30 ಕೋಟಿ ರೂ.), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (3273 ಕೋಟಿ ರೂ. ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (607 ಕೋಟಿ ರೂ. ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ | Job Alert: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು 9,461 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ’ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ” ಎಂದು ಸಚಿವ ಎಂ.ಬಿ.ಪಾಟೀಲ್‌ ಮಾಹಿತಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version