ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ: Education News: ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಕರ್ನಾಟಕದ 148 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಎಬಿಬಿ ಇಂಡಿಯಾ ನೆರವು
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೆ 187 ಕೋಟಿ ರೂಪಾಯಿ ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಜೋಶಿ ದೂರಿದರು.
ಸಿಎಂಗೂ ನೀಡಲಿ ನೋಟಿಸ್
ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ ಎಸ್‌ಐಟಿ ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರಲ್ಹಾದ್ ಜೋಶಿ ಒತ್ತಾಯಿಸಿದರು.
ಸಿಎಂ ನೇರ ಹೊಣೆ
ಇನ್ನು, ಮುಡಾ ಹಗರಣದಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ 2 ಹೊಸ ಫೋಲ್ಡೆಬಲ್ ಫೋನ್ ಬಿಡುಗಡೆ; ವಿಶೇಷತೆ ಏನೇನು?
ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಅವರ ಭಾಗಿತ್ವ ಇಲ್ಲದೇ ಈ ಮಟ್ಟದ ಭ್ರಷ್ಟಾಚಾರ ಅಸಾಧ್ಯ. ಅವರಿಗೆ ಗೊತ್ತಿದ್ದೆ ವಂಚನೆ ನಡೆದಿದೆ ಎಂದು ಆರೋಪಿಸಿದ ಸಚಿವರು, ಮುಡಾ ಹಗರಣದಲ್ಲಿ ಸಿಎಂ ನೈತಿಕ ಹೊಣೆ ಹೊರಬೇಕು. ಈ ಎರಡೂ ಬಹು ದೊಡ್ಡ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆ ಆಗಬೇಕು ಎಂದು ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದರು.