Site icon Vistara News

Koppala News: ಕನಕಗಿರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಚಿವ ಶಿವರಾಜ್ ತಂಗಡಗಿ

Minister Shivraj S Thangadagi listened to the grievances of the public in Kanakagiri

ಕನಕಗಿರಿ: ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ (Visit) ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ, ಸಾರ್ವಜನಿಕರ (Public) ಕುಂದು ಕೊರತೆಗಳನ್ನು ಆಲಿಸಿದರು.

“ಅಭಯಹಸ್ತ” ಹೆಸರಿನಡಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಕಾರ್ಯಕ್ರಮದೊಂದಿಗೆ ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಮಾತನಾಡಿದ ಸಚಿವರು, ಬಹುದಿನಗಳಿಂದ ಬಾಕಿ ಉಳಿದಿರುವ 17ನೇ ವಾರ್ಡಿನ ನಿವಾಸಿಗಳಿಗೆ ಮನೆಗಳ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಪಟ್ಟಣ ಪಂಚಾಯಿತಿಯ ಅಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Diamond Cross 11: ಸದ್ಯದಲ್ಲೇ ತೆರೆಗೆ ಬರಲಿದೆ ಡೈಮಂಡ್ ಕ್ರಾಸ್ 11 ಸಿನಿಮಾ

ಪಟ್ಟಣದ ಪ್ರಮುಖ ರಸ್ತೆಗಳು ಹದಗೆಟ್ಟಿದ್ದು, ಸಿಸಿ ರಸ್ತೆ, ಚರಂಡಿಗಳನ್ನು ನಿರ್ಮಿಸಬೇಕಾಗಿದೆ. ದುರಸ್ತಿಯಲ್ಲಿರುವ ವಿದ್ಯುತ್ ಕಂಬಗಳನ್ನು ತೆಗೆದು ಹೊಸ ಕಂಬಗಳನ್ನು ಅಳವಡಿಸಿಕೊಡುವ ಬಗ್ಗೆ ಹಾಗೂ ಜನರ ಕುಂದು-ಕೊರತೆಗಳನ್ನು ಆಲಿಸಿ, ಸಮಾಲೋಚಿಸಿ ಜನತೆಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಒತ್ತು ನೀಡುವುದಾಗಿ ಸಚಿವರು ತಿಳಿಸಿದರು.

ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಜ್ ಎಸ್ ತಂಗಡಗಿ, ಪಟ್ಟಣದ ನಿವಾಸಿಗಳ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ವಹಿಸಲು ಸೂಚಿಸಿದರು.

ಇದನ್ನೂ ಓದಿ: Namma Metro: ವರ್ಷಾಂತ್ಯಕ್ಕೆ ಜಯದೇವ ಜಂಕ್ಷನ್‌ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣ ಆರಂಭ

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಂಜಯ್ ಕಾಂಬ್ಳೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಕಂದುಕೂರು, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ದತ್ತಾತ್ರೇಯ ಹೆಗಡೆ, ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ ಕೆ.ಜಿ, ಪಿಎಸ್ಐ ಕಾಸಿಂಸಾಬ್ ಹಾಗೂ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳು, ವಿದ್ಯುತ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

Exit mobile version