Site icon Vistara News

Bharat Jodo | ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ಸ್ಥಳ ಸ್ವಚ್ಛಗೊಳಿಸಿದ ಸಚಿವ ಶ್ರೀರಾಮುಲು

Bharat jodo

ಬಳ್ಳಾರಿ: ನಗರದಲ್ಲಿ ಕಾಂಗ್ರೆಸ್‌ನಿಂದ ನಡೆದ ಭಾರತ್‌ ಜೋಡೊ(Bharat Jodo) ಬೃಹತ್ ಸಮಾವೇಶದ ಸ್ಥಳವನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಮತ್ತು ಶಾಸಕ ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸ್ವಚ್ಛಗೊಳಿಸಿದರು. ಸಮಾವೇಶದ ಸ್ಥಳದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್‌, ಪೇಪರ್ ಇತರ ತ್ಯಾಜ್ಯವನ್ನು ಸ್ವಚ್ಛ ಮಾಡಲಾಯಿತು.

ಸಚಿವ ಬಿ.ಶ್ರೀರಾಮುಲು ಮಾತನಾಡಿ, ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ನಡೆದ ಭಾರತ್ ಜೋಡೊ ಸಮಾವೇಶದಲ್ಲಿ ದೊಡ್ಡ ದೊಡ್ಡ ಭಾಷಣ ಬಿಗಿದು‌, ವೀರಾವೇಶದ ಮಾತುಗಳನ್ನಾಡಿದ್ದ ಕಾಂಗ್ರೆಸ್ ನಾಯಕರಿಗೆ ಕನಿಷ್ಠ ಪಕ್ಷ ತಾವು ಮಾಡಿದ್ದ ಹೊಲಸನ್ನು ಸ್ವಚ್ಛಗೊಳಿಸಬೇಕು ಎಂಬ ಸಾಮಾನ್ಯ ಜ್ಞಾನವೂ ಇದ್ದಂತೆ ಕಾಣಲಿಲ್ಲ. ಸ್ವತಃ ನಾನು ಹಾಗೂ ನಮ್ಮ ಪಕ್ಷದ ಮುಖಂಡರು ಸ್ವಚ್ಛಗೊಳಿಸುವ ಮೂಲಕ ಕೈ ಕೊಳಕನ್ನು ತೆಗೆದುಹಾಕಿದೆವು ಎಂದು ಕಿಡಿ ಕಾರಿದರು. ಸ್ವಚ್ಛತಾ ಕಾರ್ಯದ ವೇಳೆ ಸಚಿವ ಶ್ರೀರಾಮುಲುಗೆ, ಶಾಸಕರು, ಮಾಜಿ ಸಂಸದರು ಹಾಗೂ ಬಿಜೆಪಿ ಜಿಲ್ಲಾ ಘಟಕದ ಮುಖಂಡರು ಸಾಥ್ ನೀಡಿದರು.

ಇದನ್ನೂ ಓದಿ | ಪೆದ್ದ ನಾನಲ್ಲ, ಸಿದ್ದರಾಮಯ್ಯನೇ ಪೆದ್ದ: ದುಷ್ಟ ರಾಜಕಾರಣಿ, ಶಕುನಿ, ಸ್ವಾರ್ಥಿ ಎಂದೆಲ್ಲ ಬೈದ ಶ್ರೀರಾಮುಲು

Exit mobile version