Site icon Vistara News

ಜೂ.18ಕ್ಕೆ ಚಿತ್ರದುರ್ಗದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ : ಸಚಿವ ಶ್ರೀರಾಮುಲು

ಶ್ರೀರಾಮುಲು

ಚಿತ್ರದುರ್ಗ: ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯದ ಗ್ರಾಮ ಗ್ರಾಮಕ್ಕೂ ತಲುಪಿಸುವ ಉದ್ದೇಶದಿಂದ ಜೂನ್‌ 18ರಂದು ಮಧ್ಯಾಹ್ನ 3.30ಕ್ಕೆ ನಗರದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉದ್ಘಾಟಿಸಲಿದ್ದು, ಬಿಜೆಪಿಯ ಗ್ರಾಮ ಪಂಚಾಯತಿ ಸದಸ್ಯರು, ಪುರಸಭೆ ಸದಸ್ಯರು, ಎಂಎಲ್‌ಸಿಗಳು, ಶಾಸಕರು, ಸಚಿವರು ಸೇರಿ ಒಟ್ಟು 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಉಪ್ಪು ತಿಂದವರು ನೀರು ಕುಡಿಯಲೇ ಬೇಕು!

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಬಹಳ ಹಳೆಯ ಕೇಸ್‌, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ವಿರುದ್ಧ ರಾಜಕೀಯ ದ್ವೇಷಕ್ಕಾಗಿ ಇ.ಡಿ. ವಿಚಾರಣೆ ನಡೆಸುತ್ತಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಶ್ರೀರಾಮಲು ಪ್ರತಿಕ್ರಿಯಿಸಿದ್ದಾರೆ. ರಾಹುಲ್‌ ಗಾಂಧಿ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಅವರು ಹರಿಹಾಯ್ದರು.

ಆದಾಯ ತೆರಿಗೆ(ಐಟಿ) ಹಾಗೂ ಜಾರಿ ನಿರ್ದೇಶನಾಲಯದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರು ಇತಿಹಾಸ ಮರೆತಂತೆ ಕಾಣುತ್ತಿದೆ. ರಾಜಕೀಯ ಬೆಳವಣಿಗೆಗಾಗಿ ಕಾಂಗ್ರೆಸ್‌ ಎಂತಹ ಕೆಲಸಗಳನ್ನು ಮಾಡಿದೆ ಎಂಬುವುದು ಗೊತ್ತು. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌, ಇತರ ಪಕ್ಷಗಳ ನಾಯಕರಿಗೆ ಕಿರುಕುಳ ನೀಡಿದೆ. ಆ ನೋವು ಏನೆಂಬುದು ಅವರಿಗೂ ಗೊತ್ತಾಗಬೇಕು. ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದು ಸಹಜ ಎಂದು ಹೇಳಿದರು.

ಇದನ್ನೂ ಓದಿ | ಮುಂದಿನ ಸಿಎಂ ಶ್ರೀರಾಮುಲು ಎಂದು ಎತ್ತಿನ ಮೇಲೆ ಬರೆದ ರೈತ, ಫೋಟೊ ವೈರಲ್

Exit mobile version