ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ (Umesh Katti) ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಘು ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ, ತುರ್ತು ನಿಗಾ ಘಟಕ (ICU)ದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಬೆಳಗಾವಿ ಜಿಲ್ಲೆ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.
ಮನೆಯಲ್ಲಿಯೇ ಉಮೇಶ್ ಕತ್ತಿ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಸಚಿವರ ಆರೋಗ್ಯದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ನಿಗಾ ವಹಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.