Pocso case | ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದ ಹೈಸ್ಕೂಲ್‌ ವಿದ್ಯಾರ್ಥಿನಿ ಗರ್ಭಿಣಿ: ಇಬ್ಬರು ಯುವಕರ ಸೆರೆ - Vistara News

ಉತ್ತರ ಕನ್ನಡ

Pocso case | ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದ ಹೈಸ್ಕೂಲ್‌ ವಿದ್ಯಾರ್ಥಿನಿ ಗರ್ಭಿಣಿ: ಇಬ್ಬರು ಯುವಕರ ಸೆರೆ

ಇಬ್ಬರು ಯುವಕರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಕಂಗಾಲಾದ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

VISTARANEWS.COM


on

ಕುಮಟಾ ಪೊಲೀಸ್‌ ಸ್ಟೇಷನ್‌ ಅತ್ಯಾಚಾರ ಪ್ರಕರಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಕುಮಟಾ ಪಟ್ಟಣದ ಪ್ರತಿಷ್ಠಿತ ಹೈಸ್ಕೂಲ್‌ನ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕೋನಳ್ಳಿಯ ನಿವಾಸಿ ಅಖಿಲ್ ಅಡಿಗುಂಡಿ ಹಾಗೂ ಹೊನ್ನಾವರ ಕಡತೋಕಾದ ಹೆಬ್ಳೆಕೊಪ್ಪ ನಿವಾಸಿ ಸಮರ್ಥ ಮುಕ್ರಿ (20) ಬಂಧಿತ ಯುವಕರು. ಇವರಿಬ್ಬರು 8ನೇ ತರಗತಿಯ ವಿದ್ಯಾರ್ಥಿಯನ್ನು ಪುಸಲಾಯಿಸಿಕೊಂಡು ಆಟೋ ಮೇಲೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಎರಡು ಬಾರಿ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿ ದೂರು ನೀಡಿದ್ದಾರೆ. ಬಾಲಕಿಯ ಹೇಳಿಕೆ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲಾ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ | Pocso case | ದೇವಸ್ಥಾನದ ಪೂಜಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Karnataka Rain: ಸೋಮವಾರ ಜೋರಾಗಿ ಸುರಿದ ಗಾಳಿ ಮಳೆಗೆ ಮನೆಗಳ ಚಾವಣಿ ಹಾರಿಹೋದರೆ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ವಿದ್ಯುತ್‌ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗೆ ರಿವರ್‌ ರ‍್ಯಾಫ್ಟಿಂಗ್‌ ತಂಡ ಸಾಥ್‌ ಕೊಟ್ಟಿದ್ದಾರೆ.

VISTARANEWS.COM


on

By

karnataka Rain
Koo

ಕಾರವಾರ: ಕರಾವಳಿಯಲ್ಲಿ ವರುಣನ ಅಬ್ಬರ (Karnataka Rain) ಮತ್ತಷ್ಟು ಹೆಚ್ಚಿದೆ. ಭಾರೀ ಗಾಳಿಗೆ 20ಕ್ಕೂ ಅಧಿಕ ಮನೆಗಳ ಚಾವಣಿ ಹಾರಿಹೋಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಾರವಾಡ ಸೀಬರ್ಡ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಸುಧಾ ಹರಿಕಾಂತ, ನಿರ್ಮಲಾ ದುರ್ಗೇಕರ್, ಶೋಭಾ ದುರ್ಗೇಕರ್ ಸೇರಿ 20ಕ್ಕೂ ಅಧಿಕ ನಿವಾಸಿಗಳ ಮನೆಗಳ ಚಾವಣಿಗೆ ಹಾನಿಯಾಗಿದೆ. ತಡರಾತ್ರಿ ಬೀಸಿದ ಭಾರೀ ಗಾಳಿಗೆ ತಗಡಿನ ಶೀಟ್‌ಗಳು ಹಾರಿಹೋಗಿದೆ. ಕೆಲವರ ಹೆಂಚಿನ ಮನೆಗಳಿಗೂ ಹಾನಿಯಾಗಿದೆ. ಕೆಲವರು ಹೆಂಚಿನ ತುಂಡು ತಲೆಗೆ ಬಿದ್ದು ಗಾಯಗೊಂಡಿದ್ದಾರೆ. ಚಾವಣಿ ಹಾರಿಹೋದ ಪರಿಣಾಮ ಮಳೆ ನೀರು ಬಿದ್ದು ಮನೆಯ ವಸ್ತುಗಳಿಗೂ ಹಾನಿಯಾಗಿದೆ.

ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಮತ್ತೆ ಭೂಕುಸಿತ ಉಂಟಾಗಿದೆ. ಶಿರಾಡಿಘಾಟ್ ರಸ್ತೆ 75 ರಲ್ಲಿ ಭೂಕುಸಿತದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕಾಂಕ್ರಿಟ್ ರಸ್ತೆ ಗುತ್ತಿಗೆ ಪಡೆದಿರುವ ಕಂಪನಿಯ ಸಿಬ್ಬಂದಿ ಮಣ್ಣು ತೆರವುಗೊಳಿಸುತ್ತಿದ್ದಾರೆ. ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಸವಾರರು ಕಿಡಿಕಾರಿದ್ದಾರೆ. ಮಣ್ಣು ತೆರವು ಮಾಡುತ್ತಿರುವುದು ವಿಳಂಬವಾಗುತ್ತಿದೆ, ಬೇಸಿಗೆ ಕಾಲದಲ್ಲಿ ಕೆಲಸ ಮಾಡುವುದು ಬಿಟ್ಟು ಮಳೆಗಾಲದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹೆಸ್ಕಾಂ ಸಿಬ್ಬಂದಿಗೆ ಸಾಥ್‌ ಕೊಟ್ಟ ರಿವರ್‌ ರ‍್ಯಾಫ್ಟಿಂಗ್‌ ತಂಡ

ಭಾರಿ ಮಳೆಗೆ ಹಲವಡೆ ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಕರೆಂಟ್‌ ಇಲ್ಲದೇ ಜನರು ಕಂಗಲಾಗಿದ್ದಾರೆ. ಹೀಗಾಗಿ ವಿದ್ಯುತ್ ಸಂಪರ್ಕ ನೀಡಲು ಹೆಸ್ಕಾಂ ಸಿಬ್ಬಂದಿಗೆ ರಿವರ್ ರ‍್ಯಾಫ್ಟಿಂಗ್ ತಂಡ ನೆರವಾಗಿದೆ. ಉತ್ತರ ಕನ್ನಡದ ಜೋಯಿಡಾದ ಅಸು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಾಂದೇವಾಡಿ ಗ್ರಾಮದಲ್ಲಿ ವಿದ್ಯುತ್ ತಂತಿ ಮೇಲೆ ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ಬಜಾರಕುಣಂಗ್, ಕ್ಯಾಸಲ್‌ರಾಕ್, ಅಸು, ಅಕೇತಿ ಪಂಚಾಯತ್ ವ್ಯಾಪ್ತಿಯ ಹತ್ತಾರು ಗ್ರಾಮಗಳು ಕತ್ತಲೇಯಲ್ಲೇ ಕಾಲ ಕಳೆಯುತ್ತಿದ್ದವು.

ಚಾಂದೇವಾಡಿ ಗ್ರಾಮವು ಭಾರೀ ಮಳೆಯಿಂದ ಪಾಂಡ್ರಿ ನದಿ ಉಕ್ಕಿ ಸಂಪರ್ಕ ಕಡಿದುಕೊಂಡಿತ್ತು. ಇತ್ತ ವಿದ್ಯುತ್ ಸಂಪರ್ಕ ಸರಿಪಡಿಸಲು ಮುಂದಾಗಿದ್ದ ಹೆಸ್ಕಾಂ, ಕೆಪಿಟಿಸಿಎಲ್‌ (KPTCL) ಸಿಬ್ಬಂದಿ ನದಿ ಹರಿವು ಹೆಚ್ಚಿದ್ದರಿಂದ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದರು. ಗ್ರಾಮಸ್ಥರು, ರಿವರ್ ರ‍್ಯಾಫ್ಟಿಂಗ್ ಸಹಾಯದಿಂದ ಚಾಂದೇವಾಡಿ ಗ್ರಾಮಕ್ಕೆ ತಲುಪಿದ್ದಾರೆ. 13 ಮಂದಿ ಹೆಸ್ಕಾಂ ಸಿಬ್ಬಂದಿ, 6 ಮಂದಿ ರ‍್ಯಾಫ್ಟಿಂಗ್ ತಂಡದ ಸದಸ್ಯರಿಂದ ಕಾರ್ಯಾಚರಣೆ ನಡೆಸಿ ಸುಮಾರು 600 ಮೀಟರ್ ಬೋಟ್‌ನಲ್ಲಿ ತೆರಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡಿದ್ದಾರೆ. ದಾಂಡೇಲಿ ವಿಭಾಗದ ಸೂಪಾ-ಅನಮೋಡ್ 110 ಕೆವಿ ವಿದ್ಯುತ್ ಮಾರ್ಗ ಸರಿಪಡಿದ್ದಾರೆ. ಹೆಸ್ಕಾಂ, ಕೆಪಿಟಿಸಿಎಲ್ ಸಿಬ್ಬಂದಿ ಕಾರ್ಯವೈಖರಿಗೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಇದನ್ನೂ ಓದಿ: Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಕೃಷ್ಣಾ ನದಿಯ ಆರ್ಭಟಕ್ಕೆ ಜನರು ತತ್ತರ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನದಿ ತೀರದ ಪ್ರದೇಶಗಳಿಗೆ ಕೃಷ್ಣಾ ನದಿ ನೀರು ನುಗ್ಗಿದೆ. ಗ್ರಾಮದ ಬಸ್ ನಿಲ್ದಾಣ, ಬಸ್ ನಿಲ್ದಾಣ ಸಮೀಪದ 15 ಕ್ಕೂ ಹೆಚ್ಚು ಅಂಗಡಿಗಳು, ಪ್ರೌಢ ಶಾಲೆ ಆವರಣ ಜಲಾವೃತಗೊಂಡಿದೆ.

ಇನ್ನೂ ಹಾವೇರಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಕುಮದ್ವತಿ ನದಿ ಉಕ್ಕಿ ಹರಿಯುತ್ತಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಬಾಂದಾರ ಕೊಚ್ಚಿ ಹೋಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕುಡಪಲಿ- ಬಡಸಂಗಾಪುರ ಗ್ರಾಮದ ಬಳಿ ಕಟ್ಟಿದ್ದ ಬಾಂದರ್ ಕಾಣದಂತಾಗಿದೆ. ಸ್ಥಳಕ್ಕೆ ಹಿರೇಕೆರೂರ ಶಾಸಕ ಯುಬಿ ಬಣಕಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತರಿಗೆ ಹಾವುಗಳ ಕಾಟ

ನಿರಂತರ ಮಳೆಯಿಂದಾಗಿ ನದಿಗಳ ಮಟ್ಟ ಏರಿಕೆ ಹಿನ್ನೆಲೆ ನದಿ ಪಾತ್ರದ ರೈತರು ಮೋಟಾರ್, ಪಂಪ್‌ಸೆಟ್‌ ಹಾಗೂ ವಿದ್ಯುತ್ ಸರಬರಾಜಿನ ಡಬ್ಬಿಗಳನ್ನು ಸ್ಥಳಾಂತರಿಸುತ್ತಿದ್ದಾರೆ. ಈ ನಡುವೆ ರೈತರಿಗೆ ಹಾವುಗಳ ಕಾಟ ಪ್ರಾರಂಭವಾಗಿದೆ. ರೈತರೊಬ್ಬರು ವಿದ್ಯುತ್ ಡಬ್ಬಿ ಸ್ಥಳಾಂತರಿಸುವಾಗ ಹಾವು ಪ್ರತ್ಯಕ್ಷಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಬಳಿ ಘಟನೆ ನಡೆದಿದೆ. ಯಕ್ಸಂಬಾ ಗ್ರಾಮದ ಹೊರವಲಯದ ದೂದ್‌ಗಂಗಾ ನದಿಯ ದಂಡೆಯ ಮೇಲೆ ಅಲ್ಲಲ್ಲಿ ಹಾವುಗಳ ಪ್ರತ್ಯಕ್ಷಗೊಳ್ಳುತ್ತಿರುವುದರಿಂದ ರೈತರು ಭಯಭೀತರಾಗಿದ್ದಾರೆ.

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವ ಪತ್ತೆ

ಬಾಗಲಕೋಟೆ ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ ರೈತ ಸಿದ್ದಪ್ಪ ಅಡಹಳ್ಳಿ(60) ಶವವಾಗಿ ಪತ್ತೆಯಾಗಿದ್ದಾರೆ. ಕೊಚ್ಚಿ ಹೋದ ಸಿದ್ದಪ್ಪನಿಗಾಗಿ ಶೋಧ ಕಾರ್ಯ ನಡೆದಿತ್ತು. ಸೋಮವಾರ ಬಬಲೇಶ್ವರ ತಾಲೂಕಿನ ಶಿರಗೂರ ಗ್ರಾಮದ ಬಳಿ ಶವ ಪತ್ತೆಯಾಗಿದೆ. ಶವ ಇದ್ದ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೇವು ಮಾಡಿಕೊಂಡು ಮರಳಿ‌ ಬರುವಾಗ ಆಲಗೂರ ಗ್ರಾಮದ ಸಿದ್ದಪ್ಪ ಅಡಹಳ್ಳಿ 3 ದಿನದ ಹಿಂದೆ ನದಿ ಪಾಲಾಗಿದ್ದರು.

ಕಾವೇರಿ ನದಿಗೆ ಹಾರಿದ ನೌಕರನ ಮೃತದೇಹ ಪತ್ತೆ

ಕೊಡಗಿನ ಕುಶಾಲನಗರದಲ್ಲಿ ಸರಕಾರಿ ನೌಕರನೊಬ್ಬ ಕಾವೇರಿ‌ ನದಿಗೆ ಹಾರಿದ್ದ. 5 ದಿನಗಳ ಬಳಿಕ‌ ಸೋಮವಾರ ಮೃತದೇಹ ಪತ್ತೆಯಾಗಿದೆ. ಎಸಿ ಕಚೇರಿ ಪ್ರಥಮ ದರ್ಜೆ ನೌಕರ ಅರುಣ್(52) ಮೃತ ದುರ್ದೈವಿ. ಕೊಪ್ಪ ಸೇತುವೆಯಿಂದ ಕಾವೇರಿ ನದಿಗೆ ಹಾರಿದ್ದ ಅರುಣ್, ಸೇತುವೆಯಿಂದ 5 ಕಿ.ಮೀ ದೂರದಲ್ಲಿ ಶವ ಪತ್ತೆಯಾಗಿದೆ. ಮೃತದೇಹಕ್ಕಾಗಿ ರ‍್ಯಾಫ್ಟಿಂಗ್ ತಂಡ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ

ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾಗಿ, ಕೊಡಗು ಸುತ್ತಮುತ್ತ ವಿಪರೀತ ಮಳೆಯಾಗಲಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Karnataka rain: ಮಳೆಯು ನಾನಾ ಅವಾಂತರವೇ ಸೃಷ್ಟಿಯಾಗಿದೆ. ಹಳ್ಳ-ಕೊಳ್ಳದಲ್ಲಿ ಎಮ್ಮೆಗಳ ಕಳೇಬರ ಪತ್ತೆಯಾಗಿದೆ. ಒಂಟಗೋಡಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಬೆಳಗಾವಿಯ ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಜಲಾವೃತ, ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಸತತ ಮಳೆಗೆ (Karnataka rain) ಹಲವು ಜಿಲ್ಲೆಗಳು ನಲುಗಿ ಹೋಗಿವೆ. ಗುಡ್ಡ ಕುಸಿತ, ಸೇತುವೆಗಳು ಮುಳುಗಡೆ, ಮನೆಗಳು ಕುಸಿದು ಬೀಳುವ ಸಾಧ್ಯತೆ ಇದೆ. ಈ ನಡುವೆ ಪ್ರವಾಹದ ಭೀಕರತೆಗೆ ಜನರು ಬೆಚ್ಚಿ ಬೀಳುವಂತಾಗಿದೆ. ಹಳ್ಳ-ಕೊಳ್ಳಗಳಲ್ಲಿ ಎಮ್ಮೆಗಳ ಕಳೇಬರ ತೇಲಿ ಬರುತ್ತಿವೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಹಳ್ಳದಲ್ಲಿ ಎಮ್ಮೆಗಳ ಮೃತದೇಹ ತೇಲಿ ಬಂದಿದೆ. ಮೂರು ಎಮ್ಮೆಗಳು ತೇಲಿ ಬಂದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನದಿ ದಾಟಲು ಹೋಗಿ ಅಥವಾ ನೀರು ಹೆಚ್ಚಾಗಿ ಕೊಚ್ಚಿಕೊಂಡು ಬಂದಿರುವ ಶಂಕೆ ಇದೆ.

ತೆರವುಗೊಳಿಸಿದ ಜಾಗದಲ್ಲೆ ಮಣ್ಣು ಕುಸಿತ

ಕೊಡಗು ಜಿಲ್ಲೆಯಾದ್ಯಂತ ಮಳೆ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆ ಅನಾಹುತ ಇನ್ನೂ ನಿಂತಿಲ್ಲ. ಮಡಿಕೇರಿ ಮಾದಪು ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಮಾದಪುರದಿಂದ 2ಕಿ.ಮೀ ದೂರದಲ್ಲಿ ಗುಡ್ಡದ ಮಣ್ಣು ಕುಸಿಯುತ್ತಿದೆ. ಮಣ್ಣು ತೆರವು ಗೊಳಿಸಿದ ಜಾಗದಲ್ಲೆ ಪದೆಪದೇ ಮಣ್ಣು ಬೀಳುತ್ತಿದೆ. 2018ರಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಹಾನಿಯಾಗಿದ್ದ ಸ್ಥಳದಲ್ಲೆ ಮತ್ತೆ ಅಪಾಯ ಎದುರಾಗಿದೆ. ಮಳೆ ಹೆಚ್ಚಾಗಿ ಮತ್ತಷ್ಟು ಮಣ್ಣು‌ಕುಸಿದಲ್ಲಿ ಮಾದಪುರ ಮಡಿಕೇರಿ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ.

ಟಿಬಿ ಡ್ಯಾಂನಲ್ಲಿ ಪ್ರವಾಸಿಗರ ಹುಚ್ಚಾಟ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿತುಂಗಭದ್ರಾ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಆದರೆ ಜಲಾಶಯದ ಹಿನ್ನೀರಿನಲ್ಲಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ನೀರಿಗಿಳಿದು ಹುಚ್ಚಾಟ ತೋರುತ್ತಿದ್ದಾರೆ. ರಭಸವಾಗಿ ನೀರು ಬರುತ್ತಿದ್ದರೂ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಒಂಟಗೋಡಿ ಗ್ರಾಮಕ್ಕೆ ನುಗ್ಗಿದ ಘಟಪ್ರಭಾ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಬ್ಬರ ಜೋರಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದಲ್ಲಿ ಹತ್ತಾರು ಮನೆಗಳು ಜಲಾವೃತಗೊಂಡಿದ್ದು, ಸರಕಾರಿ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಶಾಲೆ ಮೈದಾನ ನೀರಿಂದ ಭರ್ತಿಯಾಗಿದ್ದು, ಕೆರೆಯಂತಾಗಿದೆ.

ಬೆಳಗಾವಿಯ ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಜಲಾವೃತ

ಇತ್ತ ಮಲಪ್ರಭಾ ನದಿ ಅಬ್ಬರ ರಾಮದುರ್ಗ ಪಟ್ಟಣ ಸೇರಿ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಾಮದುರ್ಗ ಪಟ್ಟಣದ ತೇರ ಬಜಾರ್ ಬಳಿಯ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಮುಳುಗಿದ ಸೇತುವೆ ಮೇಲೆ ಕಾಲೇಜು ವಿದ್ಯಾರ್ಥಿಗಳು, ಶಾಲಾ ವಾಹನ, ಜನರ ಓಡಾಡುವಂತಾಗಿದೆ. ಖಾನಾಪುರ, ಕಣಕುಂಬಿ ಭಾಗದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಐದು ಸಾವಿರ ಕ್ಯೂಸೆಕ್ ನೀರು ಮಲಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತ

ಪಶ್ಚಿಮ ಘಟ್ಟಗಳಲ್ಲಿ ಮಳೆ ಅಬ್ಬರ ಕೊಂಚ ತಣ್ಣಗಾಗಿದೆ. ಬೆಳಗಾವಿಯ ಒಂದು ಸೇತುವೆ ಸಂಚಾರಕ್ಕೆ ಮುಕ್ತ ವಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಹೊರವಲಯದ ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಲೋಕೊಪಯೋಗಿ,ಕಂದಾಯ,ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಪರಿಸ್ಥಿತಿಯ ಪರಿಶೀಲಿಸಿದ ನಂತರ ಭಾರಿ ವಾಹನಕ್ಕೆ ಅವಕಾಶ ನೀಡಲಿದ್ದಾರೆ. ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರ ವಲಯದ ಕೃಷ್ಣ ನದಿಯಲ್ಲಿ ಬೃಹತ್ ಗಾತ್ರದ ಮೀನು ಕಾಣಿಸಿಕೊಂಡಿದೆ. ಸುಮಾರು 500 ಕೆ.ಜಿ ತೂಕವಿರುವ ಸಾಧ್ಯತೆ ಇದೆ. ಸ್ಥಳೀಯರ ಮೊಬೈಲ್‌ನಲ್ಲಿ ಬೃಹತ್ ಗಾತ್ರದ ಮೀನು ಸೆರೆಯಾಗಿದೆ.

ಘಟಪ್ರಭೆಯ ಅಬ್ಬರಕ್ಕೆ ನಲುಗುತ್ತಿರುವ ಕುಟುಂಬಗಳು

ಘಟಪ್ರಭೆಯ ಅಬ್ಬರಕ್ಕೆ ಕುಟುಂಬಗಳು ನಲುಗುತ್ತಿವೆ. ಬೆಳಗಾವಿಯ ಗೋಕಾಕ ನಗರಕ್ಕೆ ನೀರು ನುಗ್ಗಿದ್ದರಿಂದ ಉಟ್ಟ ಬಟ್ಟೆಯಲ್ಲಿ ಮನೆ ಬಿಟ್ಟ ಅಜ್ಜಿ ಕುಟುಂಬ ಕಣ್ಣೀರು ಹಾಕುತ್ತಿದೆ. ಗೋಕಾಕ ನಗರದ ಬೋಜಗರ್ ಗಲ್ಲಿಯಲ್ಲಿರುವ ಮೈರಾಬಿ ಬೋಜಗಾ ಎಂಬುವವರು ಮೊಮ್ಮಮ್ಮಕ್ಕಳು ಮಗಳ ಜತೆಗೆ ಕಾಳಜಿ ಕೇಂದ್ರದಲ್ಲಿದ್ದಾರೆ.

ತನ್ನೆರಡು ಗಂಡು ಮಕ್ಕಳ ಅಕಾಲಿಕ ಸಾವಿನಿಂದ ಕಂಗೆಟ್ಟಿರುವ ಅಜ್ಜಿ ಮೈರಾಬಿ, ಗಂಡು ಮಕ್ಕಳಿದಿದ್ದರೆ ಮನೆಯ ವಸ್ತುಗಳೆಲ್ಲ ಹೊರಗೆ ತರುತ್ತಿದ್ದರು. ನನ್ನ ಮಕ್ಕಳು ತೀರಿ ಹೋಗಿದ್ದಾರೆ, ಮನೆಯ ವಸ್ತುಗಳು ನೀರಲ್ಲಿವೆ ಎಂದು ರೋಧಿಸಿದ್ದಾರೆ. ಚುರುಮುರಿ ಭಟ್ಟಿಯಲ್ಲಿ ಕೆಲಸ ಮಾಡಿ ಬಡ ಕುಟುಂಬ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಕಾಳಜಿ ‌ಕೇಂದ್ರದಲ್ಲಿ ದಿಕ್ಕೆ ತೋಚದಂತ ಸ್ಥಿತಿಯಲ್ಲಿದ್ದಾರೆ.

ಕೃಷ್ಣಾ ನದಿ ತೀರದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಇಟ್ಟಂಗಿ ನಿರ್ಮಾಣ ಘಟಕಗಳು ಜಲಾವೃತಗೊಂಡಿದೆ. ನೀರಿನ ಒಳ ಹರಿವು ಹೆಚ್ಚಾದರೇ ಮಾಂಜರಿ ಗ್ರಾಮಕ್ಕೂ ನೀರು ನುಗ್ಗಲಿದೆ. ಹುಣಶ್ಯಾಳ ಪಿ ಜಿ ಗ್ರಾಮದ ಲಕ್ಷ್ಮಿ ದೇವಾಲಯ ಸೇರಿ 200ಕ್ಕೂ ಅಧಿಕ ಮನೆಗಳು ‌ನೀರಿನಲ್ಲಿ ಮುಳುಗಡೆಯಾಗಿದೆ. ಐದು ಕಾಳಜಿ ಕೇಂದ್ರ ಓಪನ್ ಮಾಡಿ ಇಡೀ ಗ್ರಾಮದ ಜನರನ್ನು ರವಾನಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಿರ್ಜಿವು ನಲುಗಿ ಹೋಗಿದೆ. ಮಿರ್ಜಿ ಗ್ರಾಮಕ್ಕೆ ನದಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. 87ಕ್ಕೂ ಹೆಚ್ಚು ಮನೆಗಳು ನೀರಲ್ಲಿ ಜಲಾವೃತಗೊಂಡಿದೆ. 87 ಕುಟುಂಬಗಳ 300ಕ್ಕೂ ಹೆಚ್ಚು ಜನರು ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮಿರ್ಜಿ ಗ್ರಾಮದ ಎತ್ತರ ಪ್ರದೇಶದಲ್ಲಿರುವ ಬಿಬಿ ಮುಧೋಳ, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಕಾಳಜಿ ಕೇಂದ್ರಗಳನ್ನು ತೆರಯಲಾಗಿದೆ. ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಉದ್ದು, ಸೇರಿ ಹಲವು ಬೆಳೆಗಳು ಮುಳುಗಡೆಯಾಗಿದೆ. ಶಾಶ್ವತ ಸ್ಥಳಾಂತರಕ್ಕೆ ಮಿರ್ಜಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

Train services: ಯಡಕುಮೇರಿ ನಡುವೆ ಭೂಕುಸಿತ (landslide) ಸಂಭವಿಸಿದ ಕಾರಣ ಸುಮಾರು 14 ರೈಲುಗಳ ಸಂಚಾರವನ್ನು ಆಗಸ್ಟ್‌ 4ರವರೆಗೆ ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಕಡಗರವಳ್ಳಿ ವಿಭಾಗದ ಅಧಿಕಾರಿಗಳು (trains are Cancelled) ತಿಳಿಸಿದ್ದಾರೆ.

VISTARANEWS.COM


on

By

train service
Koo

ಹಾಸನ/ಮೈಸೂರು: ಕಳೆದ ಜು.27ರಂದು ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟಕ್ಕೆ (Karnataka Rain News) ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು (landslide) ಕುಸಿದಿತ್ತು. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದ ಪರಿಣಾಮ ರೈಲು ಓಡಾಟ ಬಂದ್‌ (Train services) ಆಗಿದೆ.

Train Services
train services

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಕಾರಣಕ್ಕೆ ಆ.4ರವರೆಗೆ 14 ರೈಲುಗಳ ಓಡಾಟ (trains are Cancelled) ರದ್ದುಪಡಿಸಲಾಗಿದೆ. ಯಾವ್ಯಾವ ರೈಲುಗಳ ಓಡಾಟ ಸ್ಥಗಿತವಾಗಿದೆ ಎಂಬುದರ ಮಾಹಿತಿ ಇಲ್ಲಿದೆ..

train services
train services

ಇದನ್ನೂ ಓದಿ: Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

  1. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು – ಕಣ್ಣೂರು ರೈಲು ಜು. 29 ರಿಂದ ಆ.03ರವರೆಗೆ ರದ್ದು
  2. ರೈಲು ಸಂಖ್ಯೆ 16512 ಕಣ್ಣೂರು – ಕೆಎಸ್ಆರ್ ಬೆಂಗಳೂರು 30.07.2024 ರಿಂದ 04.08.2024 ರದ್ದು
  3. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು – ಕಾರವಾರ 29.07.2024 ರಿಂದ 03.08.2024 ರದ್ದು
  4. ರೈಲು ಸಂಖ್ಯೆ 16596 ಕಾರವಾರ – ಕೆಎಸ್ಆರ್ ಬೆಂಗಳೂರು 30.07.2024 ರಿಂದ 04.08.2024 ರದ್ದು
  5. ರೈಲು ಸಂಖ್ಯೆ 16585 SMVT ಬೆಂಗಳೂರು – ಮುರ್ಡೇಶ್ವರ 29.07.2024 ರಿಂದ 03.08.2024 ರದ್ದು
  6. ರೈಲು ಸಂಖ್ಯೆ 16586 ಮುರ್ಡೇಶ್ವರ – SMVT ಬೆಂಗಳೂರು 30.07.2024 ರಿಂದ 04.08.2024 ರದ್ದು
  7. ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಕೇಂದ್ರ 29.07.2024 ರಿಂದ 03.08.2024 ರದ್ದು
Train services
train services
  1. ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ 30.07.2024 ರಿಂದ 04.08.2024 ರದ್ದು
  2. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ 29.07.2024, 31.07.2024 & 02.08.2024 ರದ್ದುಗೊಂಡಿದೆ
  3. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ 30.07.2024, 01.08.2024 &03.08.2024 ರದ್ದುಗೊಂಡಿದೆ
  4. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ 30.07.2024 ಮತ್ತು 01.08.2024 ರದ್ದು
  5. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್ – ಯಶವಂತಪುರ 31.07.2024 ಮತ್ತು 02.08.2024 ರದ್ದು
  6. ರೈಲು ಸಂಖ್ಯೆ 16539 ಯಶವಂತಪುರ – ಮಂಗಳೂರು ಜಂಕ್ಷನ್ 03.08.2024 ರದ್ದು
  7. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ 04.08.2024 ರದ್ದು
train services
train services

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಒಳನಾಡಿನಲ್ಲಿ ಬ್ರೇಕ್‌ ಕೊಟ್ಟು, ಕರಾವಳಿ- ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

Karnataka Weather Forecast : ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆರಾಯ ಬ್ರೇಕ್‌ (Rain News) ಕೊಟ್ಟಿದ್ದು, ಕರಾವಳಿ-ಮಲೆನಾಡಿನಲ್ಲಿ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ. ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾದರೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಬೆಳಗಾವಿಯಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,40-50 ಕಿ.ಮೀದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEET-UG
ಪ್ರಮುಖ ಸುದ್ದಿ4 hours ago

NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ವೈರಲ್ ನ್ಯೂಸ್4 hours ago

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Paris Olympics 2024
ಕ್ರೀಡೆ4 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

Asia Cup cricket
ಪ್ರಮುಖ ಸುದ್ದಿ4 hours ago

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Viral video
ವೈರಲ್ ನ್ಯೂಸ್5 hours ago

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Rohan Bopanna
ಕ್ರೀಡೆ5 hours ago

Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

CM Siddaramaiah demands to Pm for drop the Nirmala Sitharaman from the cabinet
ಕರ್ನಾಟಕ5 hours ago

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

Parliament session
ದೇಶ5 hours ago

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Minister Lakshmi Hebbalkar reviewed the flood situation and provided individual financial assistance to the victims
ಕರ್ನಾಟಕ5 hours ago

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Union Minister Pralhad Joshi statement on tomato price
ಕರ್ನಾಟಕ5 hours ago

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ10 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ11 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ14 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌