Site icon Vistara News

ಮಳವಳ್ಳಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ

Rape

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪೈಶಾಚಿಕ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ 65 ವರ್ಷದ ವೃದ್ಧ ಅತ್ಯಾಚಾರ ಮಾಡಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯ ಸಹೋದರಿ ಹಲಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಳವಳ್ಳಿ ತಾಲೂಕಿನ‌ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ವೃದ್ಧನೊಬ್ಬ ಕೃತ್ಯ ಎಸಗಿದ್ದಾನೆ. ಬಾಲಕಿಗೆ ತಿಂಡಿ, ಊಟ ಕೊಡಿಸುವುದಾಗಿ ಪುಸಲಾಯಿಸಿ ಬಸವನಹಳ್ಳಿ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಬಾಲಕಿಯ ಸಹೋದರಿ ನೀಡಿದ ದೂರಿನ ಮೇರೆಗೆ ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಮಳವಳ್ಳಿ ಬಾಲಕಿ ಕೊಲೆ | ಅತ್ಯಾಚಾರ ಎಸಗಿ ಕೊಂದ ಕಾಮಪಿಪಾಸು ಶಿಕ್ಷಕ

Exit mobile version