Site icon Vistara News

ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು; ಸರ್ಕಾರಿ ಶಾಲೆಗೆ ಕಲ್ಲೆಸೆದು ವಿಕೃತಿ

miscreants

ಹಾಸನ/ಗದಗ: ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಪಿಎಸ್‌ಐ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಕೊಣನೂರು ಪೊಲೀಸ್ ಠಾಣೆಯ (Konanur Police Station) ಪಿಎಸ್ಐ (PSI) ಶೋಭಾ ಬರಮಕ್ಕನವರ್ ಅವರು ಇದ್ದ ಬಾಡಿಗೆ ಮನೆಗೆ ಬೆಂಕಿ ಹಾಕಲಾಗಿದೆ.

ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ರಜೆ‌ ಮೇಲೆ ಊರಿಗೆ ತೆರೆಳಿದ್ದಾಗ ದುಷ್ಕರ್ಮಿಗಳು ಮನೆಯ ಕಿಟಿಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ ಸೇರಿ ಪೀಠೋಪಕರಣಗಳು ಬೆಂಕಿಗಾಹುತಿ ಆಗಿವೆ. ಬುಧವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಹೋಗಿರುವ ಸಾಧ್ಯತೆ ಇದೆ.

ಪಿಎಸ್‌ಐ ಶೋಭಾ ಅವರ ಬಾಡಿಗೆ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೂ ಕುಂಡಗಳನ್ನು ಒಡೆದು ದುಷ್ಕೃತ್ಯ

ಸರ್ಕಾರಿ ಶಾಲೆ ಧ್ವಂಸ ಮಾಡಿ ವಿಕೃತಿ

ಗದಗ: ಇಲ್ಲಿನ ಮುಂಡರಗಿ ತಾಲೂಕಿನ ಬಿದರಳ್ಳಿ ಗ್ರಾಮದ ಹೊರವಲಯದಲ್ಲಿ ಕಿಡಿಗೇಡಿಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಾನಿ ಮಾಡಿದ್ದಾರೆ. ಶಾಲಾ ಆವರಣದಲ್ಲಿದ್ದ ಹೂವಿನ ಕುಂಡ, ಶಾಲಾ ಕೊಠಡಿಗಳ ಕಿಟಕಿಗಳನ್ನು ಒಡೆದು ದುಷ್ಕೃತ್ಯ ಮೆರೆದಿದ್ದಾರೆ.

ಇದನ್ನೂ ಓದಿ: Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕಲ್ಲಿನಿಂದ ಎಲ್ಲ‌ ಕೊಠಡಿಗಳ ಕಿಟಕಿಗಳ ಗಾಜು ಪುಡಿ‌ಪುಡಿ ಮಾಡಿದ್ದಾರೆ. ಶಾಲಾ ಮುಂಭಾಗದಲ್ಲಿ ಜೋಡಿಸಿದ್ದ ಟೈಲ್ಸ್‌ಗಳನ್ನೂ‌ ಸಹ ಕಿತ್ತು ಹಾಕಿದ್ದಾರೆ. ಕಷ್ಟಪಟ್ಟು ಶಾಲಾ ಶಿಕ್ಷಕರು ಹಾಗೂ ಮಕ್ಕಳು ಕೈ ತೋಟದಲ್ಲಿ ಬೆಳೆದಿದ್ದ ಗಿಡಗಳನ್ನು ಕಿತ್ತು ವಿಕೃತಿ ಮೆರೆದಿದ್ದಾರೆ. ಇಡೀ ಶಾಲಾ ಆವರಣವನ್ನೇ ಧ್ವಂಸ‌ ಮಾಡಿದ್ದು, ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version