Site icon Vistara News

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Missing Case

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಯುವತಿಯರ ನಾಪತ್ತೆ ಪ್ರಕರಣಗಳು (Missing Case) ಹೆಚ್ಚಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಇಬ್ಬರು ಯುವತಿಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವುದು ಕಂಡುಬಂದಿದೆ. ನಂದಿ ಗ್ರಾಮದ ಸಿ. ಶಿಲ್ಪಾ(20), ಕಲ್ಲುಕುಂಟೆ ಗ್ರಾಮದ ತೇಜಸ್ವಿನಿ(20) ನಾಪತ್ತೆಯಾದ ಯುವತಿಯರು.

ವಿಲ್ ಕಾರ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ, ಎರಡನೇ ವರ್ಷದ ಬಿಎ ಓದುತ್ತಿರುವ ವಿದ್ಯಾರ್ಥಿನಿ ತೇಜಸ್ವಿನಿ ನಾಪತ್ತೆಯಾಗಿದ್ದಾರೆ. ಯುವತಿಯರು ನಾಪತ್ತೆಯಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮ ಹಾಗೂ ಕಲ್ಲುಕುಂಟೆ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ | Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

ಮತ್ತೊಂದೆಡೆ ಪೊಲೀಸರಿಗೂ ಯುವತಿಯರ ನಾಪತ್ತೆ ಪ್ರಕರಣಗಳು ತಲೆನೋವಾಗಿದೆ. ಹೀಗಾಗಿ ಯುವತಿಯರ ಪತ್ತೆಗೆ ಪೊಲೀಸರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇಬ್ಬರು ಯುವತಿಯರ ಪತ್ತೆಗೆ ಪೋಷಕರಿಂದ ಮಿಸ್ಸಿಂಗ್ ಕಂಪ್ಲೇಂಟ್‌ ನೀಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

ಮಂಗಳೂರು: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ (love jihad) ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parishad) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

ಆದರೆ ಈ ʼಲವ್ ಜಿಹಾದ್ʼ ಹಿಂದೆ ಕೇರಳದ ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರವಿದೆ; ಮುಸ್ಲಿಂ ಲೀಗ್ ನೇತಾರನೊಬ್ಬ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ. ಆ ನೆಪದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಹಿಂದೂ ಯುವತಿಯರನ್ನು ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ. ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ನೀಡುತ್ತಿದೆ. ಲವ್ ಜಿಹಾದ್‌ಗೆ ಬದಿಯಡ್ಕ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ ಎಂದು ವಿಎಹಿಂಪ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ.

Exit mobile version