Site icon Vistara News

ಸಿದ್ದರಾಮಯ್ಯ ಪದಗ್ರಹಣ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಸಿಎಂ ಸ್ಟಾಲಿನ್‌; ಮಮತಾ ಬ್ಯಾನರ್ಜಿ ಭಾಗವಹಿಸಲ್ಲ

M K Stalin

M K Stalin

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಗಣ್ಯರ ದಂಡೇ ಬೆಂಗಳೂರಿಗೆ ಆಗಮಿಸಿದೆ. ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇನ್ನು ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ.

ಎಂ.ಕೆ.ಸ್ಟಾಲಿನ್‌ ಅವರು ಬೆಂಗಳೂರಿಗೆ ಆಗಮಿಸುತ್ತಲೇ ಅವರ ಅಭಿಮಾನಿಗಳು ಏರ್‌ಪೋರ್ಟ್‌ನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ಸ್ಟಾಲಿನ್‌ ಅವರಿಗೆ ಹೂಗುಚ್ಛ ನೀಡಿ ಅಭಿಮಾನಿಗಳು ಸ್ವಾಗತ ಕೋರಿದರು. ಇನ್ನು ಮಮತಾ ಬ್ಯಾನರ್ಜಿ ಅವರು ಅನ್ಯ ಕಾರಣಗಳಿಂದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ದೀದಿ ಅವರು ತಮ್ಮ ಪಕ್ಷದ ನಾಯಕರನ್ನು ಕಾರ್ಯಕ್ರಮಕ್ಕೆ ಕಳುಹಿಸಿದ್ದಾರೆ.

ಹೇಗಿದೆ ಸಿದ್ಧತೆ?

ಸಿದ್ದರಾಮಯ್ಯ ಅವರು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಅದ್ಧೂರಿ ಸಿದ್ಧತೆ ಕೈಗೊಳ್ಳಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ಸಿದ್ಧತೆ ನಡೆದಿದೆ. ವೇದಿಕೆ ಮೇಲೆ 30 ಗಣ್ಯರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಶಾಸಕರು, ಶಾಸಕರ ಕುಟುಂಬದವರು, ವಿವಿಐಪಿಗಳು ಹಾಗೂ ಅಧಿಕಾರಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Karnataka Election: ಸಿದ್ದರಾಮಯ್ಯ, ಡಿಕೆಶಿ ಜತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ 26 ಸಚಿವರು; ಯಾರವರು?

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಸ್ಟೇಡಿಯಂ ಮದ್ಯ ಭಾಗದಲ್ಲಿ ಸುಮಾರು 40 ಸಾವಿರ ಆಸನ ವ್ಯವಸ್ಥೆ ಹಾಗೂ ಸ್ಟೇಡಿಯಂ ಗ್ಯಾಲರಿಯಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಒಳಭಾಗದಲ್ಲಿ ಹತ್ತು ಬೃಹತ್ ಎಲ್ಇಡಿಗಳ ಅಳವಡಿಕೆ ಜತೆಗೆ ಹೊರಗಡೆಯೂ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.

Exit mobile version