Site icon Vistara News

Yadgiri News: ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಸ್ವಾವಲಂಬಿ ಬದುಕು: ಶಾಸಕ ಚನ್ನಾರೆಡ್ಡಿ ಪಾಟೀಲ

MLA Channareddy Patil drives for Gruha Lakshmi Scheme implementation program in Yadgiri

ಯಾದಗಿರಿ: ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಜಾರಿಯಿಂದ ರಾಜ್ಯದಲ್ಲಿನ ಮಹಿಳೆಯರು (Womens) ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅಭಿಪ್ರಾಯಪಟ್ಟರು.

ಜಿಲ್ಲೆಯ ವಡಗೇರಾ ಪಟ್ಟಣದ ಬನದ ರಾಚೂಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದುಕೊಳ್ಳುವ ಸರ್ಕಾರವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Vijayanagara News: ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ

ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ರಕ್ಷಾ ಬಂಧನ ಹಬ್ಬದ ಹಿನ್ನಲೆಯಲ್ಲಿ ಶಾಸಕರಿಗೆ ಇದೇ ವೇಳೆ ಮಹಿಳೆಯರು ರಾಖಿಯನ್ನು ಕಟ್ಟಿದರು.

ಇದನ್ನೂ ಓದಿ: Asia Cup 2023: ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ ನಡೆಯುವುದೇ ಅನುಮಾನ!

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಸಾಹುಕಾರ ಕರಣಿಗಿ, ಉಪಾಧ್ಯಕ್ಷೆ ರಂಗಮ್ಮ ಹುಲಿ, ತಹಸೀಲ್ದಾರ್‌ ಹಲಿಮಾ ಬೇಗಂ, ತಾಲೂಕು ಪಂಚಾಯಿತಿ ಇಓ ಮಲ್ಲಿಕಾರ್ಜುನ ಸಂಗವಾರ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಮೀನಾಕ್ಷಿ ಪಾಟೀಲ್, ಪಿಡಿಓ ಮಲ್ಲಿಕಾರ್ಜುನ ಗಿರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Exit mobile version