Site icon Vistara News

Lokayukta Raid: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು; ವಕೀಲರ ಸಂಘ ಆಕ್ಷೇಪ, ಸಿಜೆಐಗೆ ಪತ್ರ

Madal Virupakshappa

ಬೆಂಗಳೂರು: ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದಕ್ಕೆ ಬೆಂಗಳೂರಿನ ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದ್ದು, ಉಚ್ಚ ನ್ಯಾಯಾಲಯದ (Lokayukta Raid) ಈ ನಡೆಯಿಂದ ದಿಗ್ಭ್ರಮೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ,ಚಂದ್ರಚೂಡ್‌ ಅವರಿಗೆ ಪತ್ರ ಬರೆದಿದೆ.

ಅಪರಾಧ ಪ್ರಕರಣಗಳಲ್ಲಿ ಸಾಮಾನ್ಯರು ಜಾಮೀನು ಪಡೆಯಬೇಕೆಂದರೆ ವಾರ ಅಥವಾ ತಿಂಗಳುಗಟ್ಟಲೇ ಸಮಯ ತೆಗೆದುಕೊಳ್ಳುತ್ತದೆ. ಆದರೆ, ವಿಐಪಿಗಳು, ಜನಪ್ರತಿನಿಧಿಗಳು ಹಾಗೂ ಶ್ರೀಮಂತರಿಗಾದರೆ ರಾತ್ರೋ ರಾತ್ರಿ ಜಾಮೀನು ಸಿಗುತ್ತದೆ. ಇದರಿಂದ ಜನಸಾಮಾನ್ಯರಿಗೆ ನ್ಯಾಯ ವ್ಯವಸ್ಥೆ ಮೇಲೆ ನಂಬಿಕೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ವಕೀಲರ ಸಂಘ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ | Lokayukta Raid: ನಾನು ಮಾಡಾಳು ಮನೆಯಲ್ಲೇ ಇದ್ದೆ; ನಾನೊಬ್ಬ ಸಜ್ಜನ ರಾಜಕಾರಣಿ: ಮಾಡಾಳು ವಿರೂಪಾಕ್ಷಪ್ಪ ಸಮರ್ಥನೆ

ನ್ಯಾಯ ದೇಗುಲದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಹೀಗಿದ್ದಾಗ ಮಾತ್ರ ನ್ಯಾಯ ವ್ಯವಸ್ಥೆ ಮೇಲೆ ಜನ ಸಾಮಾನ್ಯರಿಗೆ ಇರುವ ನಂಬಿಕೆ ಉಳಿಯುತ್ತದೆ ಎಂದು ಬೆಂಗಳೂರು ವಕೀಲರ ಸಂಘ ಅಭಿಪ್ರಾಯ ವ್ಯಕ್ತಪಡಿಸಿದೆ.

Exit mobile version