MLA Rupali urges PM Modi rally to be unprecedented Modi in Karnataka updates Modi in Karnataka: ಮೇ 3ಕ್ಕೆ ಪ್ರಧಾನಿ ಮೋದಿ ಕಾರ್ಯಕ್ರಮ; ಐತಿಹಾಸಿಕ ಸಮಾವೇಶವಾಗಿಸಲು ರೂಪಾಲಿ ನಾಯ್ಕ ಕರೆ Vistara News
Connect with us

ಉತ್ತರ ಕನ್ನಡ

Modi in Karnataka: ಮೇ 3ಕ್ಕೆ ಪ್ರಧಾನಿ ಮೋದಿ ಕಾರ್ಯಕ್ರಮ; ಐತಿಹಾಸಿಕ ಸಮಾವೇಶವಾಗಿಸಲು ರೂಪಾಲಿ ನಾಯ್ಕ ಕರೆ

Assembly Election: ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದ ಹಟ್ಟಿಕೇರಿಯಲ್ಲಿ ಮೇ 3ರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಅಭೂತಪೂರ್ವಗೊಳಿಸಲು ಶಾಸಕಿ ರೂಪಾಲಿ ನಾಯ್ಕ ಕರೆ ನೀಡಿದ್ದಾರೆ.

VISTARANEWS.COM


on

MLA Rupali urges PM Modi rally to be unprecedented Modi in Karnataka updates
ಬೇರೆ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡ ಶಾಸಕಿ ರೂಪಾಲಿ ನಾಯ್ಕ
Koo

ಕಾರವಾರ: ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಬುಧವಾರ ಆಗಮಿಸುತ್ತಿರುವುದು ಇಡಿ ಕ್ಷೇತ್ರಕ್ಕೆ ಹಾಗೂ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು.

ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ದೇಶದ ಪ್ರಧಾನಿಯೊಬ್ಬರು ಆಗಮಿಸುತ್ತಿದ್ದಾರೆ. ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದ ಹಟ್ಟಿಕೇರಿಯಲ್ಲಿ ಮೇ 3ರ ಮಧ್ಯಾಹ್ನ 12 ಗಂಟೆಗೆ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನನ್ನ ಕ್ಷೇತ್ರದ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತಿದ್ದೇನೆ ಎಂದು ಹೇಳಿದರು.

ಜಾಗತಿಕ ನಾಯಕರಾಗಿ ಭಾರತದ ಕೀರ್ತಿಯನ್ನು ದೇಶ, ವಿದೇಶಗಳಲ್ಲಿ ಎತ್ತಿ ಹಿಡಿದ ನರೇಂದ್ರ ಮೋದಿ ನಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ನಮ್ಮ ಸುದೈವವೇ ಸರಿ. ಪ್ರಧಾನಿ ನರೇಂದ್ರ ಮೋದಿ ಅವರು ಈ ಜಿಲ್ಲೆಗೆ, ನಮ್ಮ ಕ್ಷೇತ್ರಕ್ಕೆ ಆಗಮಿಸುವುದರಿಂದ ಭವಿಷ್ಯದಲ್ಲಿ ಭಾಗ್ಯದ ಬಾಗಿಲು ತೆರೆಯಲಿದೆ. ಇಲ್ಲಿನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

MLA Rupali urges PM Modi rally to be unprecedented Modi in Karnataka updates
ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಶಾಸಕಿ ರೂಪಾಲಿ ನಾಯ್ಕ

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ನ ವಾರಂಟಿಯೇ ಮುಗಿದಿರುವಾಗ ಗ್ಯಾರಂಟಿಗಳಿಗೆ ಇನ್ನೆಲ್ಲಿ ಬೆಲೆ! ಪ್ರಧಾನಿ ಮೋದಿ ಲೇವಡಿ

ನರೇಂದ್ರ ಮೋದಿ ಅವರನ್ನು ನೋಡಬೇಕು ಅವರ ಮಾತುಗಳನ್ನು ಕೇಳಬೇಕು ಎಂದು ಜನತೆ ಉತ್ಸಾಹದಲ್ಲಿದ್ದರೂ ಅದಕ್ಕೆ ಅವಕಾಶ ಸಿಗುತ್ತಿರಲಿಲ್ಲ. ಈಗ ಅಂತಹ ಸುವರ್ಣ ಅವಕಾಶ ನಮಗೆ ಲಭ್ಯವಾಗಲಿದೆ. ಮೋದಿ ಅವರು ನಮ್ಮೆದುರೇ ಬಂದು ಮಾತನಾಡಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಹೊಸ ಉತ್ಸಾಹ, ಹೊಸ ಶಕೆ

ನರೇಂದ್ರ ಮೋದಿ ಅಂದರೆ ಅಭಿವೃದ್ಧಿ, ನರೇಂದ್ರ ಮೋದಿ ಅಂದರೆ ಭರವಸೆ. ಅವರ ಆಗಮನದಿಂದ ಇಡೀ ಕ್ಷೇತ್ರ, ಜಿಲ್ಲೆಯಲ್ಲಿ ಹೊಸ ಉತ್ಸಾಹ, ಹೊಸ ಶಕೆ ಆರಂಭವಾಗಲಿದೆ. ನರೇಂದ್ರ ಮೋದಿ ಅವರ ಕೊಡುಗೆಗಳು ಈಗಾಗಲೇ ಈ ಕ್ಷೇತ್ರದ ಮನೆ ಮನೆಗೂ ತಲುಪಿದೆ. ಈಗ ನರೇಂದ್ರ ಮೋದಿ ಅವರೇ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್ ಕಟೀಲ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದರಾದ ಅನಂತಕುಮಾರ್ ಹೆಗಡೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪಕ್ಷದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಶಾಸಕರಾದ ದಿನಕರ ಶೆಟ್ಟಿ, ಸುನೀಲ್‌ ನಾಯ್ಕ, ಮಾಜಿ ಶಾಸಕ ಸುನೀಲ್‌ ಹೆಗಡೆ, ಎಂಎಲ್‌ಸಿ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ದಿ ಮುಂತಾದ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಮೋದಿ ಕಾರ್ಯಕ್ರಮ ಯಶಸ್ಸಿಗಾಗಿ ದೇವರ ಮೊರೆ ಹೋದ ರೂಪಾಲಿ ನಾಯ್ಕ

ಪಕ್ಷದ ಕಾರ್ಯಕರ್ತರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಕ್ತಿ ಕೇಂದ್ರಗಳು ಹಾಗೂ ಎಲ್ಲ ಪದಾಧಿಕಾರಿಗಳು, ಪ್ರಮುಖರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪ್ರಮುಖರು ಇದ್ದರು.

ಇದನ್ನೂ ಓದಿ: Karnataka Election 2023: ಪ್ರಭು ರಾಮ ಆಯ್ತು, ಈಗ ಹನುಮನನ್ನು ಬಂಧಿಸಿಡಲು ಹೊರಟಿದೆ ಕಾಂಗ್ರೆಸ್: ಪಿಎಂ ಮೋದಿ

ಐತಿಹಾಸಿಕ ಸಮಾವೇಶವನ್ನಾಗಿಸಬೇಕು- ರೂಪಾಲಿ ನಾಯ್ಕ

ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬರೂ ಆಗಮಿಸಿ ಮೋದಿ ಅವರು ನಡೆಸಲಿರುವ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ವಿಶ್ವನಾಯಕ ಮೋದಿ ಅವರ ಸಮಾವೇಶವನ್ನು ಅಭೂತಪೂರ್ವವಾಗಿಸಬೇಕು. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಎಲ್ಲ ಮುಖಂಡರು, ಜನತೆ ಒಂದಾಗಿ ಸೇರಿ ಇದೊಂದು ಐತಿಹಾಸಿಕ ಸಮಾವೇಶವನ್ನಾಗಿಸಬೇಕು ಎಂದು ರೂಪಾಲಿ ನಾಯ್ಕ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

Weather report: ಉತ್ತರ ಒಳನಾಡಿನಲ್ಲಿ ಬ್ರೇಕ್‌ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.

VISTARANEWS.COM


on

Edited by

Rain alert
ಸಂಗ್ರಹ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ

Continue Reading

ಉಡುಪಿ

Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

Rising temperature: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಕಾದ ಕಾವಲಿಯಂತಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

Edited by

karwali rain
ಕಾರವಾರ, ಅಂಕೋಲಾದಲ್ಲಿ ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ ಆಗಿದ್ದು, ಇನ್ನೊಂದು ವಾರ ತಾಪಮಾನದಲ್ಲಿ (Heat wave) ಏರಿಳಿತ ಆಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆಯಾದರೂ ಹಲವು ಕಡೆ ಬಿಸಿಲು ಝಳಪಿಸಲಿದ್ದು, ನಾಗರಿಕರು ಮತ್ತಷ್ಟು ಹೈರಾಣಾಗಬಹುದು ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ ಮತ್ತು ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ಚಿತ್ರದುರ್ಗದಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ರಾಜಧಾನಿಯಲ್ಲಿ ಗುಡುಗಲಿರುವ ವರುಣ

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರಲ್ಲಿ ಮಂಡೆ ಬಿಸಿ

ರಾಜ್ಯದಲ್ಲಿ ಶುಕ್ರವಾರದಂದು (ಮೇ 26) ಗರಿಷ್ಠ ಉಷ್ಣಾಂಶ 39.0 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಅಂಕೋಲ, ವಿಜಯಪುರದ ದೇವರಹಿಪ್ಪರಿಗಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಹೊನ್ನಾವರ ಹಾಗೂ ಉಡುಪಿಯ ಕೋಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Video: ಹಿಂದು ಹುಡುಗನೊಂದಿಗೆ ಮುಸ್ಲಿಂ ಹುಡುಗಿ ಡಿನ್ನರ್​; ಸ್ಕೂಟರ್​ ಅಡ್ಡಗಟ್ಟಿ ಗಲಾಟೆ ಮಾಡಿದ ಗುಂಪು, ಚಾಕು ಇರಿತ

ಶನಿವಾರ ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ

ಶನಿವಾರ (ಮೇ 27) ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ವರುಣನ ಅಬ್ಬರ ಜೋರಾಗಿತ್ತು. ಬಿಸಿಲಿಗೆ ಕಾದಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕಾರವಾರ, ಅಂಕೋಲಾ ತಾಲೂಕು ಸುತ್ತಮುತ್ತ ಒಂದೂವರೆ ಗಂಟೆಗಳ‌ ಕಾಲ ಧಾರಾಕಾರ ಮಳೆಯಾಗಿದೆ.

ಸಂಜೆ ವೇಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಶನಿವಾರ (ಮೇ 27) ಸಂಜೆ ಬಳಿಕ ಬೆಂಗಳೂರು ನಗರ, ಧಾರವಾಡ, ಕಲಬುರಗಿ, ಕೋಲಾರ, ತುಮಕೂರಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ರಾಜ್ಯಾದ್ಯಂತ ವರುಣ ತಣ್ಣಗಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಜತೆಗೆ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯೂ ಇದೆ.

VISTARANEWS.COM


on

Edited by

Bangalore Rain
Koo

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ಮಳೆಯಾಗಲಿದೆ.

ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ವರುಣ ತಣ್ಣಗಾಗಿದ್ದು, ಶನಿವಾರದಂದು ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನ ಏರಿಕೆ ಸಾಧ್ಯತೆ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Cabinet Expansion Live : ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 26 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ

Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್‌ ಚಾಲಕ ಅಪಘಾತ ತಡೆಯಲು ಬ್ರೇಕ್‌ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್‌ ಪಲ್ಟಿಯಾಗಿದೆ.

VISTARANEWS.COM


on

Edited by

Bus accident in honnavar
Koo

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್‌ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ

ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು

PDO Renuka suspended in Devadurga

ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.

ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.

Continue Reading
Advertisement
kapil dev 1983 world cup captain
ಕ್ರಿಕೆಟ್4 mins ago

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

daredevil mustafa Running successful
South Cinema5 mins ago

Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

somana kunitha
ಕಲೆ/ಸಾಹಿತ್ಯ6 mins ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಪ್ರಥಮ ಬಹುಮಾನ ಪಡೆದ ಕಥೆ: ಸೋಮನ ಕುಣಿತ

Ram Charan presents The India House Film
South Cinema6 mins ago

Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್‌; ವಿಡಿಯೊ ಹಂಚಿಕೊಂಡ ರಾಮ್‌ಚರಣ್‌!

PM Modi Tweet After inaugurates new Parliament building
ದೇಶ10 mins ago

ಹೊಸ ಸಂಸತ್​ ಭವನ ಉದ್ಘಾಟನೆ; ಈ ಕಟ್ಟಡ ಸಬಲೀಕರಣಕ್ಕೆ ತೊಟ್ಟಿಲಾಗಲಿ ಎಂದ ಪ್ರಧಾನಿ ಮೋದಿ

Bandipur National Park PM Narendra modi visit
ಕರ್ನಾಟಕ11 mins ago

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

CM Siddaramaiah and B Nagendra and DK Shivakumar
ಕರ್ನಾಟಕ16 mins ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ31 mins ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

french open novak djokovic
ಕ್ರೀಡೆ52 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ58 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!