Site icon Vistara News

Uttara Kannada News: ಕಸ್ತೂರಿ ರಂಗನ್‌ ವರದಿ ಜಾರಿಗೆ ಶಾಸಕ ಶಿವರಾಮ ಹೆಬ್ಬಾರ್‌ ತೀವ್ರ ವಿರೋಧ

MLA Shivram Hebbar

ಯಲ್ಲಾಪುರ: ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ, ತರಾತುರಿಯಲ್ಲಿ ಕಸ್ತೂರಿ ರಂಗನ್‌ ವರದಿಯನ್ನು (Kasturi Rangan report) ಜಾರಿಗೊಳಿಸುವ ಬಗ್ಗೆ ತೀರ್ಮಾನಿಸಿರುವುದನ್ನು ನಾನು ಅತ್ಯಂತ ತೀವ್ರವಾಗಿ ವಿರೋಧಿಸುತ್ತೇನೆ (strongly oppose) ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್‌ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ವರದಿ ಜಾರಿಯಿಂದ ಪಶ್ಚಿಮ ಘಟ್ಟಗಳನ್ನು ಒಳಗೊಂಡ 10 ಜಿಲ್ಲೆಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮದ ಮೇಲೆ ಅಗಾಧ ದುಷ್ಪರಿಣಾಮ ಬೀರಲಿದ್ದು, ಮಲೆನಾಡು ಹಾಗೂ ಕರಾವಳಿಯಂಚಿನ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿದೆ.

ಇದನ್ನೂ ಓದಿ: Ind vs wi : ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯ ನಡೆಯುವ ಪಿಚ್​ ಹೇಗಿದೆ?

ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು ಹಾಗೂ ಈ ಹಿಂದಿನ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ಸಂಸದರು ಹಾಗೂ ಶಾಸಕರನ್ನೊಳಗೊಂಡ ನಿಯೋಗವು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ಈ ವರದಿಯ ಸಾಧಕ ಬಾಧಕಗಳ ಬಗ್ಗೆ ಅರಿವು ಮೂಡಿಸಿದ್ದರು, ಯಥಾಸ್ಥಿತಿಯಲ್ಲಿ ಡಾ. ಕೆ. ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು.

ಇಂದಿನ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ವರದಿಯ ಕುರಿತು ಸಂಪೂರ್ಣ ಅಧ್ಯಯನ ಮಾಡಿಕೊಳ್ಳಬೇಕು. ಮಲೆನಾಡಿನ ಪ್ರದೇಶದಿಂದ ಬಂದಿರುವ ನಮಗೂ ಸಹ ಅರಣ್ಯ ರಕ್ಷಣೆಯ ಬಗ್ಗೆ ಅತೀವ ಪ್ರೀತಿ ಹಾಗೂ ಕಾಳಜಿ ಇದೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಬದುಕು ಕಟ್ಟಿಕೊಂಡಿರುವ ಅನೇಕ ಬುಡಕಟ್ಟು ಜನಾಂಗಗಳ ಸಾಂಸ್ಕೃತಿಕ ಪರಂಪರೆಗಳು ಈ ವರದಿಯಿಂದ ನಶಿಸಿಹೋಗಲಿದೆ.

ಇದನ್ನೂ ಓದಿ: Chandrayaan 3: ಚಂದ್ರನ ಪಥದತ್ತ ಚಂದ್ರಯಾನ-3 ನೌಕೆ; ಇಂದು ರಾತ್ರಿ ಮಹತ್ವದ ಪ್ರಕ್ರಿಯೆ!

ಸಚಿವರು, ಈ ವರದಿಯನ್ನು ಜಾರಿಗೊಳಸುವುದಾದಲ್ಲಿ ಎಲ್ಲಾ ಹೋರಾಟಕ್ಕೆ ನಾವು ಸಿದ್ಧವಾಗಿದ್ದು, ಶಾಸಕರು ಹಾಗೂ ಸಂಸದರುಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

Exit mobile version