Site icon Vistara News

Uday Garudachar: ಶಾಸಕ ಉದಯ್ ಗರುಡಾಚಾರ್‌ಗೆ ಲಘು ಹೃದಯಾಘಾತ; ಆಸ್ಪತ್ರೆಗೆ ದಾಖಲು

Uday garudachar

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ (Uday Garudachar) ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತವಾಗಿದ್ದು, ಸದ್ಯ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ. ಸದ್ಯ ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನ ಸಭಾಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಉದಯ ಗರುಡಾಚಾರ್​ ಗೆಲುವು ಸಾಧಿಸಿದ್ದರು. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಹಾಗೂ ಮಾಜಿ ಶಾಸಕ ಆರ್​. ವಿ ದೇವರಾಜ್​ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ | Family Problem : ಗಂಡ-ಹೆಂಡ್ತಿ ಜಗಳ ತಾರಕಕ್ಕೆ: ಪರಸ್ಪರ ಬೆಂಕಿ ಹಚ್ಚಿಕೊಂಡು ಇಬ್ಬರೂ ಸಾವು!

Exit mobile version