Site icon Vistara News

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

MLC Election

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ (MLC Election) ನಡೆಯವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​. ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿ ಅವರಿಗೆ ಪರಿಷತ್‌ ಟಿಕೆಟ್‌ ಒಲಿದಿದೆ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಟಿಕೆಟ್‌ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಅವಕಾಶ ಸಿಕ್ಕಿಲ್ಲ.

ಇನ್ನು ಮಾಜಿ ಶಾಸಕ ಎಂ.ಜಿ ಮುಳೆ ಅವರು ಮರಾಠ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್‌ ಸಿಕ್ಕಿದೆ.

ಇದನ್ನೂ ಓದಿ | Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

ಹೈಕಮಾಂಡ್‌ ನಾಯಕರಿಗೆ ಸಿ.ಟಿ.ರವಿ ಧನ್ಯವಾದ

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಚಿವ ಸಿ.ಟಿ.ರವಿ ಅವರು ಹೈಕಮಾಂಡ್‌ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್‌.ಸತೋಷ್, ,ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ‌ ಎನ್‌. ರವಿಕುಮಾರ್ ಹಾಗೂ ಎಂ.ಜಿ. ಮೂಳೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version