MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ! - Vistara News

ಕರ್ನಾಟಕ

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

MLC Election Results: ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election Results
ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್‌ಗೆ ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (MLC Election Results) ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ರಾಮೋಜಿಗೌಡ ಗೆಲುವು

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದಿದ್ದಾರೆ. ಈ ಮೂಲಕ 11,841 ಮತಗಳ ಅಂತರದಿಂದ ರಾಮೋಜಿಗೌಡ ಗೆದ್ದಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಡಿ.ಟಿ ಶ್ರೀನಿವಾಸ್ ಜಯಭೇರಿ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ 8,909 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ 7,142 ಮತ ಪಡೆದಿದ್ದಾರೆ. ಈ ಮೂಲಕ 1,767 ಮತಗಳ ಅಂತರದಿಂದ ಡಿ.ಟಿ ಶ್ರೀನಿವಾಸ್ ಗೆಲುವು ದಾಖಲಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Self Harming : ಮನೆ ಯಜಮಾನನ ಸಾವಿನಿಂದ ಕಂಗಲಾದ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.

VISTARANEWS.COM


on

By

Self Harming
Koo

ಬೆಂಗಳೂರು: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ (Self Harming)ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು.

ಮೂಲತಃ ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ ಲಕ್ಷ ಹಣ ಬೇಕಿತ್ತು. ಇತ್ತ ಹಣ ಹೊಂದಿಸುವುದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದರು. ಪತಿ ಸತ್ತ ನಂತರ ತಾವು ಸಾಯೋದಾಗಿ ರಮ್ಯಾ ಹಾಗೂ ಮಗ ಭಾರ್ಗವ್ ಹೇಳಿ ಕೊಂಡಿದ್ದರಂತೆ.

ರಮ್ಯಾಳಿಗೆ 19 ವರ್ಷದ ಮಗಳು ಇದ್ದು, ಆಕೆ ಪಿಜಿಯಲ್ಲಿದ್ದುಕೊಂಡು ಓದುತ್ತಿದ್ದಾಳೆ. ಕಳೆದ 9ರ ರಾತ್ರಿ ಮಗಳ ಜತೆಗೆ ಮಾತನಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನ ನಂತರ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಕುಟುಂಬವು ಕುಗ್ಗಿ ಹೋಗಿತ್ತು.

ಇದನ್ನೂ ಓದಿ: Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಮೊದಲು ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಮ್ಯಾ ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ನಂತರ ತಾವು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸತ್ತು ನಾಲ್ಕು ದಿನದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪೊಲೀಸ್‌, ಡಾಕ್ಟರ್‌ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.

ಎರಡ್ಮೂರು ದಿನದಿಂದ ಮನೆಯಿಂದ ಫೋನ್‌ ಬಾರದ ಹಿನ್ನೆಲೆಯಲ್ಲಿ ನಿನ್ನೆ ಶುಕ್ರವಾರ ಮಗಳು ಪಿಜಿಯಿಂದ ಮನೆಗೆ ಬಂದಿದ್ದಾಳೆ. ಮನೆ ಬಾಗಿಲು ಎಷ್ಟೇ ತಟ್ಟಿದ್ದರು ತೆರೆಯದೇ ಇದ್ದಾಗ, ತನ್ನ ಬಳಿ ಇದ್ದ ಇನ್ನೊಂದು ಕೀಯಿಂದ ಮನೆಯ ಬಾಗಿಲು ತೆಗೆದಿದ್ದಾಳೆ. ಆಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

Murder case : ಶಿರಾಳಕೊಪ್ಪದಲ್ಲಿ ಯುವಕನನ್ನು ಕೊಂದು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಹಾನಗಲ್‌ ಪೊಲೀಸರು ನ್ಯಾಯಾಲಯಕ್ಕೆ ಚಾಜ್೯ ಶೀಟ್ ಸಲ್ಲಿಸಿದ್ದಾರೆ.

VISTARANEWS.COM


on

By

Murder case
Koo

ಹಾವೇರಿ/ಶಿವಮೊಗ್ಗ: ಕಳೆದ ಮಾರ್ಚ್‌ 15ರಂದು ಪ್ರೀತಿ ವಿಷ್ಯಕ್ಕೆ (Love Case) ಯುವತಿ ಕುಟುಂಬಸ್ಥರು, ಯುವಕನನ್ನು ಕೊಂದು ಭೀಕರವಾಗಿ (Murder case) ಸುಟ್ಟಾಕಿದ್ದರು. ಇದೀಗ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾಜ್೯ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈ ಭೀಕರ ಕೃತ್ಯವು (Youth Burnt and Killed) ಶಿವಮೊಗ್ಗದ (Shivamogga News) ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ (Murder Case) ನಡೆದಿತ್ತು. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಆನಂತರ ಹಾವೇರಿಯ ಹಾನಗಲ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಆರೋಪಿಗಳಾದ ಪ್ರವೀಣ, ಆದರ್ಶ, ರವಿಚಂದ್ರ, ಚಂದ್ರಶೇಖರ, ಶಶಿಕುಮಾರ್ ಹಾಗೂ ಗೌತಮ್, ನಾಗಪ್ಪ, ಪರಸಪ್ಪ ಎಂಬುವವರ 8 ಜನರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಯುವತಿಯ ಇಬ್ಬರು ಸಹೋದರರು, ಚಿಕ್ಕಪ್ಪ, ತಂದೆ ಹಾಗೂ ಕಾರ್ಮಿಕರ ವಿರುದ್ಧ ಚಾಜ್೯ಶೀಟ್ ಸಲ್ಲಿಸಲಾಗಿದೆ.

ಏನಿದು ಪ್ರಕರಣ?

ಕಳೆದ ಮಾರ್ಚ್‌ 15ರಂದು ಕಾರಿಗೆ ಬೆಂಕಿ ಹಚ್ಚಿ ಯುವಕನೊಬ್ಬನನ್ನು ಭೀಕರವಾಗಿ ಸುಟ್ಟು ಹಾಕಿದ (Youth Burnt and Killed) ಘಟನೆ ಶಿವಮೊಗ್ಗದ (Shivamogga News) ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ (Murder Case) ನಡೆದಿತ್ತು.

ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬಾತ ಬರ್ಬರವಾಗಿ ಕೊಲೆಯಾಗಿದ್ದ. ಮಿಸ್ಸಿಂಗ್‌ ಆಗಿದ್ದ ವೀರೇಶ್‌, ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರಿಗೆ ಇದೊಂದು ಪ್ರೇಮ ಪ್ರಕರಣಕ್ಕೆ (Love case) ನಡೆದ ಕೊಲೆ ಎಂದು ತಿಳಿದು ಬಂದಿತ್ತು.

ಗಾಡಿಕೊಪ್ಪದ ನಿವಾಸಿ ವೀರೇಶ್‌, ಶಿಕಾರಿಪುರದ ಸಂಬಂಧಿ ಯುವತಿ ಅಂಕಿತಾಳನ್ನು ಪ್ರೀತಿಸುತ್ತಿದ್ದ. ಆದರೆ ವೀರೇಶ್‌ ಹಾಗೂ ಅಂಕಿತಾಳ ಮದುವೆಗೆ ಸಹೋದರ ಪ್ರವೀಣ್‌ಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಮುಗಿಸಿಬಿಡುವ ಪ್ಲ್ಯಾನ್‌ ಮಾಡಿಕೊಂಡಿದ್ದರು.

ಇದನ್ನೂ ಓದಿ: Road Accident: ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಸ್ಪಾಟ್‌ ಡೆತ್‌; ಕಿತ್ತು ಬಂತು ಸವಾರನ ಕಣ್ಣು ಗುಡ್ಡೆ

ಅದರಂತೆ ಮಾ.15ರ ಶುಕ್ರವಾರದಂದು ಗಾಡಿಕೊಪ್ಪದಲ್ಲಿರುವ ವೀರೇಶ್ ಮನೆಗೆ ಪ್ರವೀಣ್‌ ಬಂದಿದ್ದ. ನನ್ನ ತಂಗಿ ಅಂಕಿತಾಳನ್ನು ನಿನಗೆ ಕೊಟ್ಟು ಮದುವೆ ಮಾಡುತ್ತೇವೆ ಎಂದು ನಾಟಕವಾಡಿದ್ದರು. ಆದರೆ ಆಕೆಯೊಟ್ಟಿಗೆ ಇದ್ದ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡು. ಅವಳಿನ್ನು ಕಾಲೇಜು ಹುಡುಗಿ ಸೋಶಿಯಲ್‌ ಮೀಡಿಯಾದಲ್ಲಿ ಅವುಗಳನ್ನು ಹಾಕಿದರೆ ಕಾಲೇಜಿನಲ್ಲಿ ಆಕೆ ಮಾರ್ಯಾದೆ ಹೋಗುತ್ತದೆ ಎಂದಿದ್ದರು. ಮದುವೆ ಮಾಡಿಸುವ ಭರವಸೆ ಕೊಟ್ಟಿದ್ದರಿಂದ ವೀರೇಶ್‌ ಫೋಟೊ ಡಿಲೀಟ್‌ ಮಾಡಿದ್ದ .

ಇದಾನಂತರ ಆ ದಿನವೇ ತಡರಾತ್ರಿ ವೀರೇಶ್‌ಗೆ ಫೋನ್‌ ಮಾಡಿದ ಪ್ರವೀಣ್‌, ಅಂಕಿತ ಅಳುತ್ತಿದ್ದಾಳೆ, ಮನೆಗೆ ಬಾ ನಿನ್ನ ನೋಡಬೇಕು ಅಂತಿದ್ದಾಳೆ ಎಂದು ಕರೆಸಿಕೊಂಡಿದ್ದ. ಇವರ ಯಾವ ದುರುದ್ದೇಶವೂ ತಿಳಿಯದ ವೀರೇಶ್‌ ಆತುರದಲ್ಲಿ ತನ್ನ ಸ್ನೇಹಿತನ ಇನ್ನೋವಾ ಕಾರನ್ನು ತೆಗೆದುಕೊಂಡು ಬಂದಿದ್ದ. ಹೊರಡುವಾಗ ತನ್ನ ತಾಯಿಗೆ ಅಂಕಿತಾಳ ಮನೆಯಿಂದ ಫೋನ್‌ ಬಂದಿದೆ ಹೋಗಿ ಬರುವುದಾಗಿ ಹೇಳಿದ್ದ. ಆದರೆ ದಿನ ಕಳೆದರೂ ವಾಪಸ್‌ ಆಗಿರಲಿಲ್ಲ. ಹೀಗಾಗಿ ಗಾಬರಿಯಾಗಿ ಮರುದಿನ ವೀರೇಶ್‌ ತಾಯಿ ಪೊಲೀಸ್‌ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಆದರೆ, ಶನಿವಾರ ಬೆಳಗ್ಗೆ ವೀರೇಶ್‌ ಶವ ಕಾರಿನ ಡಿಕ್ಕಿಯೊಳಗೆ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ವೀರೇಶ್ ತಾಯಿ ಮಹಾದೇವಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣವನ್ನು ಶಿರಾಳಕೊಪ್ಪ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರವೀಣ್‌ ಮನೆಯವರೇ ವೀರೇಶ್‌ನನ್ನು ಪುಸಲಾಯಿಸಿ ಕರೆಸಿಕೊಂಡು ಮನಬಂದಂತೆ ಥಳಿಸಿ, ನಂತರ ಡಿಕ್ಕಿಯೊಳಗೆ ಕೂಡಿಹಾಕಿ ಕಾರು ಸಮೇತ ಬೆಂಕಿ ಹಚ್ಚಿ ಕೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಬಡ ಮೀನುಗಾರನ ಮಗಳು ಸಿಎ ಪರೀಕ್ಷೆಯಲ್ಲಿ ಪಾಸ್‌; ಸ್ಫೂರ್ತಿಯುತ ಸಾಧನೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ಮೂಲದ, ಹಾಲಿ ಹೆಬಳೆ ಹೆರ್ತಾರ ಗ್ರಾಮದ ನಿವಾಸಿಯಾಗಿರುವ ಕಲ್ಪನಾ ಮಾಸ್ತಿ ಮೊಗೇರ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಬಡ ಮೀನುಗಾರ ಕುಟುಂಬದಲ್ಲಿ ಬೆಳೆದ ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತಿಷ್ಠಿತ ಸಿಎ ಪರೀಕ್ಷೆಯಲ್ಲಿ ಸಾಧನೆಗೈದು ಇಡೀ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ.

VISTARANEWS.COM


on

a poor fisherman family student Kalpana Masti Mogera passed the CA exam
Koo

ಕಾರವಾರ: ಭಟ್ಕಳ ತಾಲೂಕಿನ ಮುಂಡಳ್ಳಿ ಮೂಲದ, ಹಾಲಿ ಹೆಬಳೆ ಹೆರ್ತಾರ ಗ್ರಾಮದ ನಿವಾಸಿಯಾಗಿರುವ ಕಲ್ಪನಾ ಮಾಸ್ತಿ ಮೊಗೇರ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಬಡ ಮೀನುಗಾರ ಕುಟುಂಬದಲ್ಲಿ ಬೆಳೆದ ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತಿಷ್ಠಿತ ಸಿಎ ಪರೀಕ್ಷೆಯಲ್ಲಿ ಸಾಧನೆಗೈದು ಇಡೀ ಸಮುದಾಯಕ್ಕೆ ಹೆಮ್ಮೆ (Uttara Kannada News) ತಂದಿದ್ದಾಳೆ.

ಕಳೆದ ಮೇ ತಿಂಗಳಲ್ಲಿ ಜರುಗಿದ ಸಿಎ ಪರೀಕ್ಷೆಯನ್ನು ಕಲ್ಪನಾ ಎದುರಿಸಿದ್ದರು. 2022ರಲ್ಲಿ ಗ್ರೂಪ್ 1 ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇದೀಗ ಗ್ರೂಪ್ 2 ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Anant Ambani Wedding:  ಅನಂತ್‌ ಅಂಬಾನಿ ಮದುವೆಯಲ್ಲಿ ಯುವಕರೂ ನಾಚುವಂತೆ ಸ್ಟೆಪ್ಸ್‌ ಹಾಕಿದ ರಜನಿಕಾಂತ್‌!

ಕಲ್ಪನಾ ಮೂಲತಃ ಮುಂಡಳ್ಳಿಯ ಮೊಗೇರಕೇರಿಯವರಾದ ಸೀತಾ ಮತ್ತು ಮಾಸ್ತಿ ಮೊಗೇರ ದಂಪತಿಯ ಪುತ್ರಿ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಕಲ್ಪನಾ ಮೊಗೇರ ಮುಂಡಳ್ಳಿ ಮೊಗೇರಕೇರಿ ಶಾಲೆಯಲ್ಲಿ ಒಂದನೇ ತರಗತಿ, ಎರಡರಿಂದ ಐದನೇ ತರಗತಿವರೆಗೆ ಹೆರ್ತಾರ ಶಾಲೆಯಲ್ಲಿ, ಆರರಿಂದ ಏಳನೇ ತರಗತಿವರೆಗೆ ತೆಂಗಿನಗುಂಡಿ ಶಾಲೆಯಲ್ಲಿ ಓದಿದ ಕಲ್ಪನಾ ನಂತರದ ಶಿಕ್ಷಣವನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ಕಲ್ಪನಾ ತಂದೆ ಮಾಸ್ತಿ ಮೊಗೇರ ವೃತ್ತಿಯಲ್ಲಿ ಮೀನುಗಾರರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ.

ತಾನು ಸಿಎ ಪರೀಕ್ಷೆಯಲ್ಲಿ ಪಾಸಾಗಿದ್ದರ ಹಿಂದೆ ತುಂಬಾ ಶ್ರಮವಿದೆ. ಯಾರ ಸಹಾಯ ಪಡೆಯದೇ ಪಾಸಾಗಿರುವುದಕ್ಕೆ ನನಗೆ ಖುಷಿಯಾಗುತ್ತಿದೆ ಎಂದು ಕಲ್ಪನಾ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: KEA Exam: ಕ್ಯಾಮೆರಾ ಕಣ್ಗಾವಲಿನಲ್ಲಿ ಕೆಇಎ ಸ್ಪರ್ಧಾತ್ಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಪರಿಶೀಲಿಸಿದ ಉನ್ನತ ಶಿಕ್ಷಣ ಸಚಿವ

ಕಲ್ಪನಾ ಸಾಧನೆಗೆ ಕುಟುಂಬಸ್ಥರು, ಬಂಧು-ಮಿತ್ರರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Continue Reading

ನೌಕರರ ಕಾರ್ನರ್

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

KSET- 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಜುಲೈ 22ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ ನಡೆಯಲಿದೆ.

VISTARANEWS.COM


on

KSET-2024
Koo

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ (KSET- 2024) ನಡೆಸುವುದಾಗಿ ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅರ್ಹ ಅಭ್ಯರ್ಥಿಗಳು KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

1) ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
5) ಪರೀಕ್ಷಾ ದಿನಾಂಕ- ನವೆಂಬರ್‌ 24

ವಯೋಮಿತಿ:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.

ಇದನ್ನೂ ಓದಿ | Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಪರೀಕ್ಷಾ ಶುಲ್ಕ, ಪಾವತಿಸುವ ವಿಧಾನ

1) ಪರೀಕ್ಷಾ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000 ರೂ.
ಪ್ರವರ್ಗ-I, ಎಸ್‌ಸಿ, ಎಸ್‌ಟಿ, ವಿಶೇಷಚೇತನರು, ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700 ರೂ.

2) ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ವಿಶೇಷಚೇತನರಾದ ಪ್ರವರ್ಗ-I, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. (Medical Certificate with 40% or more disability )

ಪರೀಕ್ಷಾ ವಿಧಾನ, ಪರೀಕ್ಷಾ ದಿನಾಂಕ

ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯು ನವೆಂಬರ್ 24 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ನಡೆಯುವುದು.

ಪತ್ರಿಕೆ-1: 50 ಪ್ರಶ್ನೆ (100 ಅಂಕ)
ಪತ್ರಿಕೆ-2: 100 ಪ್ರಶ್ನೆ (200 ಅಂಕ)
(ಸಮಯ-ಬೆಳಗ್ಗೆ 10ರಿಂದ ಮ.1 ಗಂಟೆವರೆಗೆ)

ಫಲಿತಾಂಶ ಪ್ರಕಟಣೆಯ ವಿಧಾನ

ಯುಜಿಸಿ ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕು.

ಸಾಮಾನ್ಯ ವರ್ಗ(GM): ಎರಡೂ ಪತ್ರಿಕೆಗಳಲ್ಲೂ ಸೇರಿ ಒಟ್ಟು ಶೇ. 40 ಅಂಕಗಳು
ಎಸ್‌ಸಿ. ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ವಿಶೇಷಚೇತನರು, ತೃತೀಯ ಲಿಂಗಿಗಳು: ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳು

ಅರ್ಹತಾ ನಿಬಂಧನೆಗಳು

1) ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.

2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರದೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆ ರದ್ದಾಗುತ್ತದೆ.

3) ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪ್ರಸ್ತುತ ಕೆಸೆಟ್ ಪ್ರಕಟಣೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ, ಎನ್.ಇ.ಟಿ. ಅಥವಾ ಯು.ಜಿ.ಸಿ-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

4) 1991ರ ಸೆಪ್ಟೆಂಬರ್ 19ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55%ರ ಬದಲಾಗಿ 50%).

5) ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ನಮೂದಿಸಿರಬೇಕು. SC, ST, CAT-1, IIA, IIB, IIIA, IIIB ಅಭ್ಯರ್ತಿಗಳು ಸಕ್ಷಮ ಪ್ರಾಧಿಕಾರಗಳು ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಲಗತ್ತಿಸಬೇಕು. ಈ ಅಭ್ಯರ್ಥಿಗಳ ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಆಭ್ಯರ್ಥಿತ್ವವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

6) ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗಧಿತ ಕನಿಷ್ಟ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗದಡಿಯಲ್ಲಿ ಪ್ರವೇಶಾತಿಗೆ ನೊಂದಾಯಿಸಬಹುದು. SC/ ST/OBC ಅರ್ಹತೆಯ ನಿಯಮವು ಕೇವಲ ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.

7) ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಭಾವಿಸಿಕೊಳ್ಳತಕ್ಕದ್ದು. ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.

8) ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂಬರುವ ಕೆಸೆಟ್ ಪರೀಕ್ಷೆಗೆ ಆದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಿದ್ದು ಕಂಡು ಬಂದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಗೊಳಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುವುದು.

9) ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ) ಯಿಂದ ಖಚಿತಪಡಿಸಿಕೊಳ್ಳಬೇಕು.

ವಿನಾಯಿತಿ:

ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಆಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಆರ್ಹತೆ ಪಡೆದಿರಬೇಕೆಂಬ ನಿಯಮವಿದೆ.

ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.

Continue Reading
Advertisement
Anant Ambani Wedding
ಪ್ರಮುಖ ಸುದ್ದಿ1 min ago

ಅಂಬಾನಿಯನ್ನು ಟೀಕಿಸುತ್ತಿದ್ದ ದೀದಿ, ಅಖಿಲೇಶ್‌, ಲಾಲು ಸೇರಿ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Self Harming
ಬೆಂಗಳೂರು8 mins ago

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Shiva Rajkumar 131 cinema Look out
ಸ್ಯಾಂಡಲ್ ವುಡ್23 mins ago

Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

YouTuber Dhruv Rathee
ದೇಶ25 mins ago

YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

Kapil Dev
ಪ್ರಮುಖ ಸುದ್ದಿ30 mins ago

Kapil Dev : ಅಂಶುಮಾನ್ ಗಾಯಕ್ವಾಡ್​ಗೆ ಕ್ಯಾನ್ಸರ್​, ಬೇಸರ ವ್ಯಕ್ತಪಡಿಸಿದ ಕಪಿಲ್​ ದೇವ್​

Smriti Singh
ದೇಶ36 mins ago

Smriti Singh: ಹುತಾತ್ಮ ಯೋಧನ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್;‌ ಅಹ್ಮದ್‌ ವಿರುದ್ಧ ಎಫ್‌ಐಆರ್

Murder case
ಹಾವೇರಿ1 hour ago

Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

Sexual Assault
ವೈರಲ್ ನ್ಯೂಸ್1 hour ago

Sexual Assault: ಐಸ್‌ಕ್ರೀಂ ಕೊಳ್ಳಲು ಬಂದ ಬಾಲಕಿಯ ಗುಪ್ತಾಂಗ ಮುಟ್ಟಿ ದೌರ್ಜನ್ಯ; ಮೊಹಮ್ಮದ್ ಖಾನ್ ಬಂಧನ

a poor fisherman family student Kalpana Masti Mogera passed the CA exam
ಉತ್ತರ ಕನ್ನಡ1 hour ago

Uttara Kannada News: ಬಡ ಮೀನುಗಾರನ ಮಗಳು ಸಿಎ ಪರೀಕ್ಷೆಯಲ್ಲಿ ಪಾಸ್‌; ಸ್ಫೂರ್ತಿಯುತ ಸಾಧನೆ

KSET-2024
ನೌಕರರ ಕಾರ್ನರ್1 hour ago

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ5 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ4 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

ಟ್ರೆಂಡಿಂಗ್‌