ಬೆಂಗಳೂರು: ಕರ್ನಾಟಕ ಪ್ರದೇಶ ಜನಾತಾದಳ(ಜಾತ್ಯತೀತ) ರಾಜ್ಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.
ಶರವಣ ಅವರು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಕಾರ್ಯೋನ್ಮುಖರಾಗಬೇಕು ಎಂದು ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ಇದನ್ನೂ ಓದಿ | ಕಾಲು ಜಾರಿ ಟೀಪಾಯಿ ಮೇಲೆ ಕುಸಿದ ಮಾಜಿ ಸಿಎಂ ಸಿದ್ದರಾಮಯ್ಯ