Site icon Vistara News

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

ಬೆಂಗಳೂರು: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ.

ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

1.ನಿರ್ಮಲಾ ಸೀತಾರಾಮನ್‌– ಹಣಕಾಸು ಖಾತೆ (ಸಂಪುಟ ದರ್ಜೆ)
2.ಪ್ರಲ್ಹಾದ್‌ ಜೋಶಿ– ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ (ಸಂಪುಟ ದರ್ಜೆ)
3.ಎಚ್‌.ಡಿ.ಕುಮಾರಸ್ವಾಮಿ– ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)
4.ಶೋಭಾ ಕರಂದ್ಲಾಜೆ– ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ರಾಜ್ಯ ಖಾತೆ)
5. ವಿ.ಸೋಮಣ್ಣ- ಜಲಶಕ್ತಿ ಹಾಗೂ ರೈಲ್ವೆ ಖಾತೆ (ರಾಜ್ಯ ಖಾತೆ)

ಪ್ರಧಾನಿ ಮೋದಿಗೆ ಎಚ್‌ಡಿಕೆ ಧನ್ಯವಾದ

ಕೇಂದ್ರ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರ್ಕಾರದ ಸಂಪುಟದಲ್ಲಿ ನರೇಂದ್ರ ಮೋದಿ ಅವರು ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಅಮಿತ್‌ ಶಾಗೆ ಮತ್ತೆ ಗೃಹ ಖಾತೆ; ಇಲ್ಲಿದೆ ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ

Modi 3.0 Cabinet: Here Are The Modi Cabinet Ministers And Their PortFolios

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ (Portfolios) ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು

ರಾಜ್ಯ ಖಾತೆ ಸಚಿವರು

Exit mobile version