ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾಗೆ ತೆರಳಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಜೊಹಾನ್ಸ್‌ಬರ್ಗ್‌ನಿಂದ ನೇರವಾಗಿ ಶನಿವಾರ (ಆ.26) ಬೆಳಗ್ಗೆ ಬೆಂಗಳೂರಿಗೆ (Modi in Bangalore) ಆಗಮಿಸಲಿದ್ದಾರೆ. ಚಂದ್ರಯಾನ- 3 (Chandrayaan 3) ಮಿಷನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಅವರು ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
ಬುಧವಾರ ಸಂಜೆ 6.04ರ ಹೊತ್ತಿಗೆ ಚಂದ್ರಯಾನ 3 ಮಿಷನ್‌ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿತ್ತು. ಬ್ರಿಕ್ಸ್ ಶೃಂಗಸಭೆ ನಿಮಿತ್ತ ದಕ್ಷಿಣ ಆಫ್ರಿಕದ ಜೊಹಾನ್ಸ್‌ಬರ್ಗ್‌ನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಂದಲೇ ಚಂದ್ರಯಾನದ ಇಸ್ರೋ ಲೈವ್ ವೀಕ್ಷಿಸಿದ್ದರಲ್ಲದೆ, ಸಾಫ್ಟ್ ಲ್ಯಾಂಡಿಂಗ್ ಆದ ಬಳಿಕ ತೆರೆಯ ಮೇಲೆ ಬಂದು ವಿಜ್ಞಾನಿಗಳ ತಂಡಕ್ಕೆ ಶುಭಾಶಯ ತಿಳಿಸಿದ್ದರು. ಇದೀಗ ಇಸ್ರೋ ವಿಜ್ಞಾನಿಗಳನ್ನು ನೇರವಾಗಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಅವರು ಶನಿವಾರ (ಆ.26) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಭೇಟಿಯ ಕ್ಷಣ ಕ್ಷಣ ಸುದ್ದಿಗಳು ನಿಮಗಾಗಿ.
ಚಂದ್ರಯಾನ-3 ಮಿಷನ್ ಸಕ್ಸೆಸ್ ಆದ ಹಿನ್ನಲೆೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಚಂದ್ರಯಾನ-3 ಮಿಷನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಪಿಎಂ ನರೇಂದ್ರ ಮೋದಿ ಅವರು ಗ್ರೀಸ್‌ನಿಂದ ನೇರವಾಗಿ ಆಗಸ್ಟ್ 26 ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ಇಸ್ರೋ ಕಚೇರಿಗೆ ಭೇಟಿ ನೀಡಲಿದ್ದಾರೆ.
ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನನ್ನು ಸ್ಪರ್ಶಿಸಿದ ಕೂಡಲೇ ದಕ್ಷಿಣ ಆಫ್ರಿಕಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರನ್ಸ್ ಮೂಲಕ ದೇಶವನ್ನು ಉದ್ದೇಸಿಸಿ ಮಾತನಾಡಿದ್ದರು.
ಆಗಸ್ಟ್ 23 ಸಂಜೆ 6.04ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಮೂಲಕ ಚಂದ್ರಯಾನ-3 ಮಿಷನ್ ಯಶಸ್ವಿಯಾಗಿತ್ತು