Site icon Vistara News

Modi Birthday | ಮೈಸೂರು, ಬೆಳಗಾವಿ, ಶಿವಮೊಗ್ಗದಲ್ಲಿ ಮೋದಿ ಮೇನಿಯಾ; ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ

BBC Documentary On PM Modi

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Modi Birthday) ಹುಟ್ಟುಹಬ್ಬದ ಸಲುವಾಗಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಮೂಲಕ ಮೋದಿ ಅವರ ಸಾಧನೆ, ಬಿಜೆಪಿ ಸರ್ಕಾರದಿಂದ ಜಾರಿಗೆ ಬಂದ ಜನಸ್ನೇಹಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುವುದಾಗಿ ಬಿಜೆಪಿ ಹೇಳಿಕೊಂಡಿದೆ.

ಮೈಸೂರಿನಲ್ಲಿ ಮೋದಿ ಯುಗ
ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ಸೆಪ್ಟೆಂಬರ್‌ 17ರಂದು ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಉದ್ಘಾಟನೆ ಮಾಡಲಿದ್ದಾರೆ.
ತಾಯಿಯ ಗರ್ಭದಿಂದ ಭೂ ಗರ್ಭದವರಗೆ ಎಂಬ ಶೀರ್ಷಿಕೆ ಅಡಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸೆ.17ರಿಂದ 25ರವರೆಗೆ ಮೋದಿ ಯುಗ ಉತ್ಸವ ಕಾರ್ಯಕ್ರಮ ನಡೆಯಲಿದೆ.

ಕೇಂದ್ರ ಸರ್ಕಾರ ರೂಪಿಸಿರುವ 184 ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಈ ವೇಳೆ ಜಾಗೃತಿ ಮೂಡಿಸಲಾಗುವುದು. ವಿವಿಧ ಯೋಜನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಒಂಬತ್ತು ದಿನಗಳ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಶಾಸಕ ಎಸ್‌.ಎ. ರಾಮದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ | Modi Birthday | ವಿಜಯನಗರದಲ್ಲಿ ಬಿಜೆಪಿಯಿಂದ ಸೇವಾ ಪಾಕ್ಷಿಕ; ವಿವಿಧ ಸಾಮಾಜಿಕ ಕಾರ್ಯಕ್ಕೆ ಚಾಲನೆ

ಶಿವಮೊಗ್ಗದಲ್ಲೂ ಆಯೋಜನೆ
ಶಿವಮೊಗ್ಗದಲ್ಲಿ 15 ದಿನಗಳ ಕಾಲ ಸೇವಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಸಾಧನೆ ಕುರಿತು ಪ್ರದರ್ಶಿನಿ ಆಯೋಜನೆ, ಕರಪತ್ರ ವಿತರಣೆ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಸೆ. 17ರಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಪ್ರತಿ ಬೂತ್‌ನಲ್ಲಿ ವನಮಹೋತ್ಸವ, ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಲ್ಲದೆ,ಸೆ.25ರಂದು ಪಂಡಿತ್ ದೀನದಯಾಳ ಜನ್ಮದಿನವನ್ನು ಬೂತ್ ಮಟ್ಟದಲ್ಲಿ ಆಚರಣೆ ಮಾಡಲಾಗುವುದು. ಗಾಂಧಿ ಜಯಂತಿಯಂದು ಆತ್ಮನಿರ್ಭರ ಕಾರ್ಯಕ್ರಮದಡಿ ಪ್ರತಿ ತಾಲೂಕಿನಲ್ಲಿ ಖಾದಿ ವ್ಯಾಪಾರಸ್ಥರನ್ನು ಗುರುತಿಸಿ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸೇವಾ ಪಾಕ್ಷಿಕ
ಬಿಜೆಪಿಯಿಂದ ಸೆ. 17ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಜೀವನ ದರ್ಶನವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಎಂ.ಬಿ. ಝಿರಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮಾಡುವುದಲ್ಲದೆ, ರಾಜ್ಯದಲ್ಲಿರುವ ದಿವ್ಯಾಂಗರಿಗೆ ಕೃತಕ ಕಾಲು ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ | Modi Birthday | ಮೋದಿ ಫೋಟೊಗೆ ಹಾಲಿನ ಅಭಿಷೇಕ, ಹೋಮ-ಹವನ ನಡೆಸುವಂತಿಲ್ಲ: ಹಾಗಾದರೆ ಏನು ಮಾಡಲಾಗುತ್ತದೆ?

Exit mobile version