Modi Birthday | ಮೋದಿ ಫೋಟೊಗೆ ಹಾಲಿನ ಅಭಿಷೇಕ, ಹೋಮ-ಹವನ ನಡೆಸುವಂತಿಲ್ಲ: ಹಾಗಾದರೆ ಏನು ಮಾಡಲಾಗುತ್ತದೆ? - Vistara News

ಕರ್ನಾಟಕ

Modi Birthday | ಮೋದಿ ಫೋಟೊಗೆ ಹಾಲಿನ ಅಭಿಷೇಕ, ಹೋಮ-ಹವನ ನಡೆಸುವಂತಿಲ್ಲ: ಹಾಗಾದರೆ ಏನು ಮಾಡಲಾಗುತ್ತದೆ?

ಮೋದಿ ಅವರ ಹುಟ್ಟುಹಬ್ದಂದು ಸಸಿ ನೆಡುವುದರ ಜತೆಗೆ ಸಸಿಯನ್ನು ದತ್ತು ಪಡೆಯಲಾಗುವುದು. ರಕ್ತದಾನ ಸೇರಿ ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ ಎಂದು ರವಿಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Modi birthday milk
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಗುರುವಾರ ತಿಳಿಸಿದ್ದಾರೆ. ಈ ವೇಳೆ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಸೇರಿ ಇನ್ನಿತರ ಕಾರ್ಯ ಮಾಡಬಾರದು ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರವಿಕುಮಾರ್‌, ಮೋದಿಯವರು ಬಡವರ, ದಲಿತರ ಮತ್ತು ಶೋಷಿತರ, ಮಹಿಳೆಯರ, ಅಂಗವಿಕಲರ ಹಾಗೂ ಪರಿಸರದ ಪರ ಎಂಬುದರ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಮೋದಿ ಅವರ ಕಾರ್ಯದ ಪರಿಚಯ ಮಾಡಿಕೊಡಲು ಅವರ ಬಗೆಗಿನ ಮೋದಿ @20 ಡ್ರೀಮ್ ಮೀಟ್ ಡೆಲಿವರಿ ಪುಸ್ತಕ ಬಿಡುಗಡೆ ಮಾಡಲಾಗುವುದು. ಅವರ ಸಾಧನೆಗಳ ಪ್ರದರ್ಶಿನಿ ಏರ್ಪಡಿಸಲಾಗುತ್ತದೆ. ಯುವ ಮೋರ್ಚಾ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ ಒಟ್ಟು 11 ಸಾವಿರ ಯೂನಿಟ್ ರಕ್ತದಾನ ನಡೆಯಲಿದೆ. ದೇಶದಲ್ಲಿ ಇದೊಂದು ಗಿನ್ನೆಸ್ ದಾಖಲೆ ಆಗಬೇಕು ಎಂಬ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ | Modi Birthday | ಮೋದಿ ಜನ್ಮದಿನಕ್ಕೆ ಬಿಜೆಪಿ ಸೇವಾ ಸಂಕಲ್ಪ; ಸೆ.17ರಿಂದ ದಿನಕ್ಕೊಂದು ಸೇವಾ ಕಾರ್ಯ!

ಸಸಿ ನೆಡುವುದರ ಜತೆಗೆ ಸಸಿಯನ್ನು ದತ್ತು ಪಡೆಯಲಾಗುವುದು. ಅರಳಿ ಮರದ ಸಸಿಗಳನ್ನು ನೆಡಲಾಗುತ್ತದೆ. ದಿವ್ಯಾಂಗರಿಗೆ ಅಗತ್ಯ ಉಪಕರಣ ನೀಡಲಾಗುವುದು. ಕ್ಯಾಚ್ ದಿ ರೈನ್ ಅಡಿಯಲ್ಲಿ ನೀರು ಮರುಪೂರಣ ಅಭಿಯಾನ, ವೋಕಲ್ ಫಾರ್ ಲೋಕಲ್ ಧ್ಯೇಯವಾಕ್ಯದಡಿ ಸ್ಥಳೀಯ ವಸ್ತುಗಳ ಬಳಕೆಗೆ ಅಭಿಯಾನ ರೂಪಿಸುತ್ತೇವೆ ಎಂದರು.

ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಒಂದು ಜೊತೆ ಖಾದಿ ಡ್ರೆಸ್ ಖರೀದಿ, ಖಾದಿ ಕರ್ಚೀಪ್, ಖಾದಿ ಟವೆಲ್ ಬಳಕೆ ಅಭಿಯಾನ ಮಾಡಲಿದ್ದೇವೆ. ನಷ್ಟದಲ್ಲಿದ್ದ ಖಾದಿ ಇಲಾಖೆಯು ನಮ್ಮ ಅಭಿಯಾನದ ಫಲವಾಗಿ ಲಾಭ ಪಡೆಯುವಂತಾಗಿದೆ ಎಂದು ರವಿಕುಮಾರ್‌ ವಿವರಿಸಿದರು.

ಸುದ್ದಿಗೋಷ್ಠೀಯಲ್ಲಿ ಎನ್‌. ರವಿಕುಮಾರ್‌ ಮತ್ತಿತರರು

ಸ್ವಚ್ಛತಾ ಅಭಿಯಾನದಡಿ ಪ್ರತಿ ಜಿಲ್ಲೆಗಳಲ್ಲಿ 75 ಕೆರೆಗಳನ್ನು ಅಮೃತ ಸರೋವರ ಯೋಜನೆಯಡಿ ನಿರ್ಮಿಸಲಾಗುತ್ತದೆ. ಕೆರೆಗಳ ಶುದ್ಧೀಕರಣ ನಡೆಯಲಿದೆ. ಸೆ.17ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ನಡೆಯಲಿದ್ದು, ಮುಖ್ಯಮಂತ್ರಿ ಸೇರಿ ಜನಪ್ರತಿನಿಧಿಗಳೆಲ್ಲರೂ ಭಾಗವಹಿಸಲಿದ್ದಾರೆ. ಕ್ಷಯರೋಗ ಮುಕ್ತ ಅಭಿಯಾನಕ್ಕೆ ಪ್ರಧಾನಿಯವರು ಕರೆ ಕೊಟ್ಟಿದ್ದು, ಕ್ಷಯರೋಗಕ್ಕೆ ಸಿಲುಕಿದವರಿಗೆ ಜನಪ್ರತಿನಿಧಿಗಳು ಔಷಧಿ ಮತ್ತಿತರ ಸೌಲಭ್ಯ ನೀಡಿ ನೆರವಾಗಲಿದ್ದಾರೆ. 2025ಕ್ಕೆ ಕ್ಷಯಮುಕ್ತ ಭಾರತ ಮಾಡಲಾಗುತ್ತದೆ. ಮೋದಿಯವರ ಭಾವಚಿತ್ರಕ್ಕೆ ಹಾಲು ಎರೆಯುವುದು, ಭಾವಚಿತ್ರಕ್ಕೆ ಪೂಜೆ, ಹೋಮ-ಹವನ ಮಾಡಬಾರದು ಎಂದು ಅವರು ಪಕ್ಷದ ಪರವಾಗಿ ತಿಳಿಸಿದರು.

ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿ, ರಾಜ್ಯದ ಕಾಡುಕುರುಬರ ಸಮಸ್ಯೆಗೆ ಕೇಂದ್ರದ ಸಚಿವ ಸಂಪುಟವು ಶಾಶ್ವತವಾದ ಪರಿಹಾರ ಒದಗಿಸಿದೆ. ಇದು ನೆನೆಗುದಿಗೆ ಬಿದ್ದ ಸಮಸ್ಯೆಯಾಗಿತ್ತು. ನರೇಂದ್ರ ಮೋದಿಯವರ ಈ ಉತ್ತಮ ನಡೆಗೆ ಕರ್ನಾಟಕ ಬಿಜೆಪಿ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ತಿಳಿಸಿದರು.

ಬೆಂಗಳೂರಿಗೆ ಸಂಬಂಧಿಸಿದ ಟೋಯಿಂಗ್ ವಿಚಾರದಲ್ಲಿ ಹೈಕೋರ್ಟ್ ತೀರ್ಮಾನಕ್ಕೆ ಸರ್ಕಾರವು ಮೇಲ್ಮನವಿ ಸಲ್ಲಿಸಬೇಕು. ಟೋಯಿಂಗ್ ಮೂಲಕ ಆಗುತ್ತಿರುವ ಶ್ರೀಸಾಮಾನ್ಯನ ಮೇಲಿನ ದಬ್ಬಾಳಿಕೆ, ಸುಲಿಗೆಗಳಿಂದ ಬೆಂಗಳೂರಿನ ಜನರನ್ನು ಪಾರು ಮಾಡಬೇಕು. ಮೇಲ್ಮನವಿ ಮೂಲಕ ಕೋರ್ಟಿನಿಂದ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‍ನವರು ಮೂರು ದಿನಗಳ ಹಿಂದೆ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಕಾಲ್ ಸೆಂಟರ್ ಆರಂಭಿಸಿದ್ದಾರೆ. 1,800 ಭ್ರಷ್ಟಾಚಾರದ ಪ್ರಕರಣಗಳು ಬಂದಿವೆ ಎಂದೂ ಅವರು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿಗರ ಭ್ರಷ್ಟಾಚಾರ ಪ್ರಕರಣಗಳು ಲೋಕಾಯುಕ್ತ ಮತ್ತು ಇತರ ಸಂಸ್ಥೆಗಳಲ್ಲಿವೆ. ಕಾಂಗ್ರೆಸಿಗರು ತಮ್ಮ ಭ್ರಷ್ಟಾಚಾರವನ್ನು ಶುದ್ಧ ಮಾಡಬೇಕು. ಸಿದ್ದರಾಮಯ್ಯನವರ ಮೇಲೆ 50ಕ್ಕೂ ಹೆಚ್ಚು ಕೇಸುಗಳಿವೆ. ತಾವು ಮೊದಲು ಮಾದರಿ ಆಗಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ. ಸಂದೀಪ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | Cheetah | ಪ್ರಧಾನಿ ನರೇಂದ್ರ ಮೋದಿ ಜನ್ಮದಿನದಂದೇ ಭಾರತಕ್ಕೆ ಬರಲಿವೆ ಎಂಟು ಚೀತಾಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading
Advertisement
Latest20 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 days ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest2 days ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌