Site icon Vistara News

Modi in Bengaluru | ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

modi in bangalore

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಭಾರತೀಯ ವಾಯು ಸೇನೆಯ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸ್ವಾಗತಿಸಿದರು. ಸಂಸದರಾದ ಪ್ರಹ್ಲಾದ ಜೋಷಿ, ತೇಜಸ್ವಿ ಸೂರ್ಯ ಜತೆಗಿದ್ದರು.

ನಂತರ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ಸರ್ಕಲ್‌ಗೆ ಮೋದಿ ಆಗಮಿಸಿದರು. 9.45ಕ್ಕೆ ಸರಿಯಾಗಿ ವಿಧಾನಸೌಧ ಬಳಿ ಆಗಮಿಸಲಿದ್ದಾರೆ. ಐದು ಗಂಟೆಗಳ ಕಾಲ ಬೆಂಗಳೂರಿನಲ್ಲಿದ್ದು ಐದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅವರ ಆಗಮನದ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Exit mobile version