ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.
ಹೀಗೆ ಸಮಾವೇಶಕ್ಕೆ ಬರುವವರಿಗಾಗಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಸುಮಾರು ೨ ಲಕ್ಷ ಜನರಿಗಾಗಿ ಮೊಸರನ್ನ ಮತ್ತು ರೈಸ್ ಬಾತ್ ರೆಡಿ ಮಾಡಲಾಗಿದೆ.
ಸಮಾವೇಶಕ್ಕೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಮಂಡ್ಯ, ಮದ್ದೂರು ರಾಮನಗರ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಹಾಗಾಗಿ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಬೆಳಗ್ಗೆ ತಿಂಡಿ ಮಧ್ಯಾನ್ಹ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು.
ವಿಮಾನ ನಿಲ್ದಾಣದ ಹಿಂಭಾಗದ ಕೈಗಾರಿಕಾ ಪ್ರದೇಶ ದಲ್ಲಿ ಇನ್ನೂ ಈಗಲೇ ಊಟದ ತಯಾರಿಯಲ್ಲಿ 500ಕ್ಕು ಹೆಚ್ಚು ಅಡುಗೆ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದರು. ಸುಮಾರು ನೂರೈವತ್ತುಕ್ಕೂ ಹೆಚ್ಚು ಕೌಂಟರ್ ಗಳನ್ನು ತೆಗೆದಿದ್ದು, ಊಟ ಬಡಿಸಲು ಯಾವುದೇ ಗೊಂದಲ ಆಗದಂತೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.