ಬೆಂಗಳೂರು: ದಕ್ಷಿಣ ಭಾರತದ ಮೊದಲ ಮತ್ತು ದೇಶದ ಐದನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಕಾಶಿ ಯಾತ್ರೆಗೆ ತೆರಳುವ ರೈಲಿಗೂ ಮೋದಿ ಅವರು ಹಸಿರು ನಿಶಾನೆ ತೋರಿದರು.
ಐದು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಉದ್ದೇಶದೊಂದಿಗೆ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ವಿಧಾನಸೌಧದ ಆವರಣದಲ್ಲಿ ಶಾಸಕರ ಭವನದ ಮುಂದೆ ಇರುವ ಕನಕ ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಚ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಅಲ್ಲಿಂದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ ಮೈಸೂರು-ಚೆನ್ನೈ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಬೆಂಗಳೂರಿನಿಂದ ಹೊರಡುವ ಕಾಶಿ ಯಾತ್ರೆಗೂ ಚಾಲನೆ ನೀಡಲಿದ್ದಾರೆ. ಅದಾದ ಬಳಿಕ ಅವರು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣಕ್ಕಾಗಿ ಅಲ್ಲಿಗೆ ಸಾಗುವರು.