ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Modi in Bengaluru) ಎರಡನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಈ ಮೂಲಕ ದೇಶದ ಎರಡನೇ ಅತಿದೊಡ್ಡ ಏರ್ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗುವತ್ತ ಹೆಜ್ಜೆ ಹಾಕಿದೆ.
ಬೆಂಗಳೂರಿನಿಂದ 30 ಕಿ.ಮೀ ದೂರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಹಾಲಿ ನವ ದೆಹಲಿಯ ವಿಮಾನ ನಿಲ್ದಾಣ ಅತಿದೊಡ್ಡ ಏರ್ಪೋರ್ಟ್ ಆಗಿದ್ದು, ನಂತರದ ಸ್ಥಾನದಲ್ಲಿ ಮಂಬಯಿ ಇದೆ. ಆದರೆ, 2.54 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮೂಲಕ ಮುಂಬಯಿ ಏರ್ಪೋರ್ಟ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಲಿದೆ. ಈಗ ಈ ೨ನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು.
ರಾಜ್ಯದ ಅಭಿವೃದ್ಧಿಗೆ ಪೂರಕ
ಈಗ ಎರಡನೇ ಟರ್ಮಿನಲ್ ಮತ್ತು ರನ್ ವೇ ಆರಂಭವಾಗಿರುವುದು ರಾಜ್ಯದ ಆರ್ಥಿಕಾಭಿವೃದ್ಧಿಗೆ ಪೂರಕವಾಗಿದ್ದು, ಪುಷ್ಪೋದ್ಯಮ ಸೇರಿದಂತೆ ಇನ್ನಿತರ ಸರಕು ಸಾಗಣೆಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ತಲುಪಲು ಇದು ಸಹಾಯಕವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ | Modi in Bengaluru | ದೇವನಹಳ್ಳಿಯಲ್ಲಿ 2 ಲಕ್ಷ ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ