ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ (Modi In Bengaluru) ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಶ್ರೇಷ್ಠ ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಶಾಸಕರ ಭವನ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ, ಅವರು ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಕನಕದಾಸರಿಗೆ ಋಣಿ
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು(ನ.11) ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ | Modi in Bengaluru | ಕೆಂಪೇಗೌಡ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ