ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಜತೆಗೆ ಆನ್ಸರ್ ಮಾಡಿ ಮೋದಿ ಎಂಬ ಪೋಸ್ಟರ್‌ನ್ನು ಬಿಡುಗಡೆ ಮಾಡಿದ್ದಾರೆ.
ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು
೧. ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಸ್ವಾಗತ. ಆದರೆ, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ?
೨. ನಮ್ಮ ಕಾಂಗ್ರೆಸ್ ಪಕ್ಷ ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನೈಜ ಅನುಯಾಯಿ. ಅವರ ಗೌರವಾರ್ಥ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೇವೆ. ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ.
೩. ಪ್ರತಿ ವರ್ಷ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ವೈಭವೋಪೇತ ಸಂಪ್ರದಾಯಕ್ಕೆ ಚಾಲನೆ ನೀಡಿದ್ದು ಕಾಂಗ್ರೆಸ್. ಬೆಂಗಳೂರಿನ ಸಂಸ್ಥಾಪಕರಿಗೆ ಸಂಬಂಧಿಸಿದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ನಾಡಪ್ರಭು ಕೆಂಪೇಗೌಡ ಪ್ರಾಧಿಕಾರವನ್ನು ಸ್ಥಾಪಿಸಿದ್ದೇವೆ.
೪. ಆದರೆ ಬಿಜೆಪಿ ಏಕೆ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲ? ನಾಡಪ್ರಭು ನಿರ್ಮಿಸಿದ ಈ ಕನಸಿನ ನಗರ ಒಂದು ಕಾಲದಲ್ಲಿ ವಿಶ್ವದಾದ್ಯಂತ ಪ್ರಗತಿ ಮತ್ತು ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಬಿಜೆಪಿಯಿಂದಾಗಿ ಬೆಂಗಳೂರು 40% ಕಮಿಷನ್, ಗುಂಡಿಗಳು ಮತ್ತು ಪ್ರವಾಹಗಳಿಗೆ ಕುಖ್ಯಾತಿಯಾಗಿದೆ.
ಇದನ್ನೂ ಓದಿ |Modi in Bengaluru | ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ