ಕರ್ನಾಟಕ
Modi in Karnataka : ಮೆಗಾ ರೋಡ್ ಶೋನಲ್ಲಿ ಮುಗಿಲುಮುಟ್ಟಿದ ʻಮೋದಿ ಮೋದಿʼ ಘೋಷಣೆ, ತೂರಿಬಂದ ಮೊಬೈಲ್
Karnataka Election : ಬೆಂಗಳೂರಿನಲ್ಲಿ ನಡೆಯುತ್ತಿರುವ ಮೋದಿ ರೋಡ್ ಭಾರಿ ಆಕರ್ಷಣೆಯನ್ನು ಪಡೆದುಕೊಂಡಿದೆ. ಮೋದಿ ಮೋದಿ ಎಂಬ ಘೋಷಣೆ ಮುಗಿಲು ಮುಟ್ಟಿದೆ.
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Prime minister Narendra Modi) ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ನಡೆಸುತ್ತಿರುವ 26 ಕಿ.ಮೀ.ಗಳಷ್ಟು ಸುದೀರ್ಘವಾದ ರೋಡ್ ಶೋಗೆ (Modi Road Show) ಭಾರಿ ಜನಸಾಗರವೇ ಹರಿದುಬಂದಿದೆ. ಮೋದಿ ಅವರು ರಸ್ತೆಯಲ್ಲಿ ಕೈ ಬೀಸುತ್ತಾ ಸಾಗುತ್ತಿದ್ದರೆ, ಜನರು ಉತ್ಸಾಹದಿಂದ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸೇವಂತಿಕೆ ದಳ ಮಳೆಗರೆಯುತ್ತಿದ್ದಾರೆ. ಈ ನಡುವೆ ರೋಡ್ ಶೋ ವೇಳೆ ಮೂರು ಬಾರಿ ಹೂವಿನೊಂದಿಗೆ ಮೊಬೈಲ್ ತೂರಿಬಂದಿರುವುದು ಆತಂಕ ಮೂಡಿಸಿತು..
ಬೆಂಗಳೂರಿನಲ್ಲಿ ನಡೆದ ಮೋದಿ ರೋಡ್ ಶೋ ಸಂಪೂರ್ಣ ಚಿತ್ರಣ ಇಲ್ಲಿದೆ
ಸೋಮೇಶ್ವರ ಸಭಾಭವನ ಬಳಿಯಿಂದ ಆರಂಭವಾದ ರೋಡ್ ಶೋ ಸುಮಾರು 26 ಕಿಮೀ ಕ್ರಮಿಸಲಿದೆ. ಮಧ್ಯಾಹ್ನ 11.45ರ ಹೊತ್ತಿಗೆ ರೋಡ್ ಶೋ, ಜೆ.ಪಿ. ನಗರ, ಜಯನಗರ ದಾಟಿ ಸೌತ್ ಎಂಡ್ ಸರ್ಕಲ್ ದಾಟಿ ಮಾಧವರಾವ್ ವೃತ್ತದ ದಾಟಿ ರಾಮಕೃಷ್ಣ ಆಶ್ರಮದ ಬಳಿ ತಲುಪಿತು.
ಕರ್ನಾಟಕ ಕುರುಕ್ಷೇತ್ರದಲ್ಲಿ ಮೋದಿಯ ಕೃಷ್ಣನ ಅವತಾರ
ಬಳಿಕ ಉಮಾ ಥಿಯೇಟರ್ ವೃತ್ತ, ಮೈಸೂರು ಸಿಗ್ನಲ್, ಟೋಲ್ ಗೇಟ್ ಸಿಗ್ನಲ್, ಗೋವಿಂದರಾಜನಗರ, ಮಾಗಡಿ ರೋಡ್ ಜಂಕ್ಷನ್, ಶಂಕರ ಮಠ ಸರ್ಕಲ್, ಮಲ್ಲೇಶ್ವರ ಸರ್ಕಲ್ ದಾಟಿ 2 ಗಂಟೆಯ ಹೊತ್ತಿಗೆ ಕಾಡು ಮಲ್ಲೇಶ್ವರ ದೇವಸ್ಥಾನದ ಬಳಿ ಅಂತ್ಯಗೊಂಡಿತು. ಅಲ್ಲಿಂದ ಮೋದಿ ಅವರು ಮೇಖ್ರಿ ಸರ್ಕಲ್ ಹೆಲಿಪ್ಯಾಡ್‌ಗೆ ಹೋಗಿ ಮುಂದೆ ವಿಮಾನದಲ್ಲಿ ಬಾದಾಮಿಗೆ ತೆರಳಿದರು.
ಬಜರಂಗಿ ಲುಕ್‌ನಲ್ಲಿ ಗಮನ ಸೆಳೆದ ಮೋದಿ ಅಭಿಮಾನಿಗಳು
ಮೋದಿ ವಾಹನದ ಪಕ್ಕ ಬಂದು ಬಿದ್ದ ಮೊಬೈಲ್
ಮೈಸೂರಿನಲ್ಲಿ ನಡೆದ ರೋಡ್ ಶೋ ಸಂದರ್ಭದಲ್ಲಿ ಹೂವಿನ ಜತೆ ಮೊಬೈಲ್ ತೂರಿಬಂದು ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರು ರೋಡ್ ಶೋನಲ್ಲೂ ಮೂರು ಬಾರಿ ಮೊಬೈಲ್ ತೂರಿಬಂದಿದೆ. ಜಯನಗರ ಸಮೀಪ ಎರಡು ಬಾರಿ ಮತ್ತು ಜೆ.ಪಿ. ನಗರದಲ್ಲಿ ಒಂದು ಬಾರಿ ಮೊಬೈಲ್ ಮೋದಿ ಸಂಚರಿಸುತ್ತಿದ್ದ ವಾಹನದ ಬಳಿ ಬಂದು ಬಿದ್ದಿದೆ. ಹೂವನ್ನು ಎಸೆಯುವಾಗ ಮೊಬೈಲ್ ಕೈತಪ್ಪಿ ಬಿತ್ತು ಎಂದು ಹೇಳಲಾಗಿದೆ. ಕೂಡಲೇ ಎಸ್‌ಪಿಜಿ ಸಿಬ್ಬಂದಿ ಆ ಮೊಬೈಲನ್ನು ಎತ್ತಿ ಆಯಾ ವ್ಯಕ್ತಿಗಳಿಗೆ ನೀಡಿದರು.
ಹಸುಗೂಸನ್ನೂ ಹಿಡಿದು ಬಂದ ಮಹಿಳೆ
ಮೋದಿಯನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಜನರು ಬಂದಿದ್ದು, ಮಹಿಳೆಯೊಬ್ಬರು ತಮ್ಮ ಐದು ತಿಂಗಳ ಮಗುವನ್ನು ಹಿಡಿದುಕೊಂಡು ಬಂದಿದ್ದು ಕಂಡುಬಂತು. ವಿಕಲಚೇತನ ಮಕ್ಕಳು, ವಯೋವೃದ್ಧರು ಕೂಡಾ ಆಗಮಿಸಿದ್ದರು.
ಮೋದಿ ಅಂದ್ರೆ ದೇವರು.. ಮೋದಿ ಅಂದ್ರೆನೇ ಶಕ್ತಿ.. ಮೋದಿಯಿಂದಲೇ ದೇಶ
ಮೋದಿಯವರನ್ನು ಹತ್ತಿರದಿಂದ ಕಾಣಲು ಮತ್ತು ಪ್ರಧಾನಿಯವರ ವಾಹನ ಮತ್ತು ಮೋದಿಯವರತ್ತ ಹೂವುಗಳನ್ನು ಎಸೆದು ಅವರನ್ನು ಸ್ವಾಗತಿಸಲು ಈ ರಸ್ತೆಯುದ್ದಕ್ಕೂ ಮಕ್ಕಳು, ಹಿರಿಯರು ಸೇರಿ ಅಭಿಮಾನಿಗಳು, ಸಾರ್ವಜನಿಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಯುತ್ತಿದ್ದಾರೆ.
ಮೋದಿ ರೋಡ್ ಶೋನಲ್ಲಿ ಬಜರಂಗಿ ಫುಲ್ ಮಿಂಚಿಂಗ್
ಮೋದಿ ಅವರು ಬುಧವಾರವೂ ಇನ್ನೊಂದು ಸುತ್ತಿನ ರೋಡ್ ಶೋ ನಡೆಸಲಿದ್ದು, ಎರಡೂ ರೋಡ್ ಶೋಗಳಲ್ಲಿ 10 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಅವರು ರೋಡ್ ಶೋ ಸಂದರ್ಭದಲ್ಲಿ ಜೊತೆಗೆ ಇದ್ದರು.
ಹೀಗೆಲ್ಲ ತೊಂದರೆ ಕೊಟ್ಟರೆ ಜನ ವೋಟು ಹಾಕ್ತಾರೆ..?
ಇದನ್ನೂ ಓದಿ : ರೋಡ್ ಶೋ ವೇಳೆ ರಾಮಕೃಷ್ಣ ಮಠದ ಸ್ವಾಮೀಜಿಗಳಿಂದ ಪುಸ್ತಕ ಉಡುಗೊರೆ; ಭಕ್ತಿಯಿಂದ ಸ್ವೀಕರಿಸಿದ ಮೋದಿ
ಕರ್ನಾಟಕ
Congress Guarantee: ಪಾರ್ಟ್ ಟೈಂ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅದ್ಧೂರಿಯಾಗಿ ಚಾಲನೆ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ವಿನೂತನ ಉಪಾಯವೊಂದನ್ನು ಆಯ್ಕೆ ಮಾಡಿಕೊಂಡಿದೆ. ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬಳಿ ಯೋಜನೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.
ಆದರೆ ಅದಕ್ಕೂ ಮುನ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ(ಮೆಜೆಸ್ಟಿಕ್) ವಿಧಾನಸೌಧದವರೆಗೆ ಮಾರ್ಗ ಸಂಖ್ಯೆ 43ರಲ್ಲಿ ಸಿದ್ದರಾಮಯ್ಯ ಬಸ್‌ನಲ್ಲೇ ಚಲಿಸಲಿದ್ದಾರೆ. ಈ ವೇಳೆ ಉಚಿತ ಟಿಕೆಟ್‌ಗಳನ್ನು ಮಹಿಳೆಯರಿಗೆ ಸಿದ್ದರಾಮಯ್ಯ ನೀಡಲಿದ್ದಾರೆ. ಈ ರೀತಿ ವಿಧಾನಸೌಧದವರೆಗೂ ಕಂಡಕ್ಟರ್ ಆಗಿ ಕೆಲಸ ಮಾಡಲಿದ್ದಾರೆ.
ಡಿ.ಕೆ. ಶಿವಕುಮಾರ್ ಗೈರು
ಚುನಾವಣೆಗೂ ಮುನ್ನ ಕಾಂಗ್ರೆಸ್‌ನಿಂದ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅದನ್ನು ಪ್ರಚಾರ ಮಾಡಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಪ್ರಚಾರದ ನೇತೃತ್ವ ವಹಿಸಿದ್ದ, ಇದೀಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗೆ ಚಾಲನೆ ನೀಡುವ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಮೂಲಕ ಗೂರುಹಾಜರಾಗಲಿದ್ದಾರೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಆರೋಗ್ಯ
Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಬೆಂಗಳೂರು: ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ಅವಧಿಯ ಟೆಂಡರ್‌ಗಳ ಮರು ಪರಿಶೀಲನೆ ಮಾಡಲಾಗುತ್ತದೆ. ಅನುಮಾನ ಬಂದ ಟೆಂಡರ್‌ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್‌ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಹೇಳಿದರು.
ಅಧಿಕಾರಿಗಳಿಗೆ ತರಾಟೆ
ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಕರ್ನಾಟಕ
Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!
Manja Thread: ಇದುವರೆಗೂ ಪಕ್ಷಿಗಳ ಪ್ರಾಣ ತೆಗೆಯುತ್ತಿದ್ದ ಗಾಳಿಪಟದ ಮಾಂಜಾ ದಾರ, ಈಗ ಅಮಾಯಕ ಯುವಕನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಸತತ ಆರು ದಿನಗಳ ಜೀವನ್ಮರಣ ಹೋರಾಟ ನಡೆಸಿ, ನರಳಾಡಿ ಪ್ರಾಣ ಬಿಟ್ಟಿದ್ದಾನೆ.
ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಚೈನೀಸ್ ಮಾಂಜಾ ದಾರವು (Manja Thread) ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ.
ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವೇಳೆ ಗಾಳಿಪಟ ಹಾರಿಸುವ ಪರಿಪಾಠ ಇದೆ. ಆದರೆ ಇದೆ ಸಂಭ್ರಮವು ಬೈಕ್ ಸವಾರರಿಗೆ ಸಂಚಕಾರ ತಂದೊಡ್ಡಿದೆ. ಗದಗ ನಗರದ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿ, ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ ಕತ್ತು ಸೀಳಿತ್ತು. ರಕ್ತದ ಮಡುವಿನಲ್ಲೇ ಸ್ಥಳೀಯರು ಆಟೋ ಮೂಲಕ ರವಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹರಿತವಾದ ದಾರವು ರವಿಯ ಕತ್ತನ್ನು ಬಲವಾಗಿ ಸೀಳಿದ್ದರಿಂದ, ಆರು ದಿನ ಬಳಿಕ ನರಳಾಡಿ ಪ್ರಾಣ ಬಿಟ್ಟಿದ್ದಾರೆ.
ಕಾಳಸಂತೆಯಲ್ಲಿ ಸಿಗ್ತಿದೆ ಅಪಾಯಕಾರಿ ದಾರ
ರಾಜ್ಯದಲ್ಲಿ ಚೈನೀಸ್ ಮಾಂಜಾ ದಾರ ಮಾರಾಟವು ನಿಷೇಧ ಇದ್ದರೂ, ಗದಗ ಜಿಲ್ಲೆಯಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿಲ್ಲ. ಕಾಳಸಂತೆಗಳಲ್ಲಿ ಈ ಅಪಾಯಕಾರಿ ದಾರ ಮಾರಾಟವಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಕಳೆದ ಭಾನುವಾರ (ಜೂ.4) ಕಾರ ಹುಣ್ಣಿಮೆಯ ದಿನದಂದು ಹಾರಿಸಿದ ಗಾಳಿಪಟದ ದಾರದಿಂದಾಗಿ ರೈಲ್ವೆ ಪೊಲೀಸ್ ಸೇರಿ ನಾಲ್ಕೈದು ಜನರಿಗೆ ಗಾಯವಾಗಿತ್ತು. ಬೈಕ್‌ನಲ್ಲಿ ಹೋಗುವಾಗ ಕತ್ತು, ಕೈ-ಕಾಲುಗಳಿಗೆ ಹರಿತವಾದ ದಾರದಿಂದ ಗಾಯಗಳಾಗಿತ್ತು. ಈ ರೀತಿಯ ಅವಘಡಗಳು ನಡೆಯುತ್ತಿದ್ದರೂ, ಸಂಬಂಧಪಟ್ಟವರು ಗಪ್ ಚುಪ್ ಆಗಿದ್ದಾರೆ.
ಇದನ್ನೂ ಓದಿ: Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್ ವಾಪಸ್; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್
ಅಪಾಯಕಾರಿ ಮಾಂಜಾ ದಾರಕ್ಕೆ ಕಡಿವಾಣ ಹಾಕುವಂತೆ ವಿಸ್ತಾರ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಆದರೆ ಅಧಿಕಾರಿ ವರ್ಗ ಮಾತ್ರ ಕೈ ಕಟ್ಟಿ ಕುಳಿತು ನಿರ್ಲಕ್ಷ್ಯತನ ತೋರಿತ್ತು. ಇದರ ಪರಿಣಾಮ ಈಗ ಕಾರ ಹುಣ್ಣಿಮೆ ವೇಳೆ ಮಾಂಜಾ ದಾರದಲ್ಲಿ ಗಾಳಿಪಟ ಹಾರಿಸಿದ ಕಾರಣದಿಂದಾಗಿ ಸವಾರರು ಗಂಭೀರ ಗಾಯಗೊಂಡಿದ್ದರು. ಅದರಲ್ಲಿ ಒಬ್ಬ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಚೈನೀಸ್ ಮಾಂಜಾ ದಾರ ಮಾರಾಟವನ್ನು ತಡೆಯುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯತನ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್‌ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ24 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ17 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ