ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Modi In Karnataka) ಪದೇ ಪದೆ ಆಗಮಿಸುತ್ತಿದ್ದಾರೆ. ಈಚೆಗಷ್ಟೇ ಬೆಂಗಳೂರು-ಮೈಸೂರು ಹೆದ್ದಾರಿ (Bangalore-mysore Highway) ಉದ್ಘಾಟನೆ ಹಾಗೂ ಧಾರವಾಡದ ಐಐಐಟಿ (IIIT) ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿದ್ದ ಮೋದಿ, ಈಗ ಚಿಕ್ಕಬಳ್ಳಾಪುರದಲ್ಲಿ ಮಾ. 25ರಂದು ಮೆಡಿಕಲ್ ಕಾಲೇಜೊಂದನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇಲ್ಲಿನ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ. ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂ. ವೆಚ್ಚದಲ್ಲಿ ಕಾಲೇಜು ನಿರ್ಮಾಣ ಮಾಡಲಾಗಿದೆ.
ಸಂಸ್ಥೆಯ ಅಧೀನದಲ್ಲಿ ಈಗಾಗಲೇ ಪ್ರಾಥಮಿಕ ಪ್ರೌಢ ಹಾಗೂ ಉನ್ನತ ವಿದ್ಯಾಭ್ಯಾಸದ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಸಾಯಿಬಾಬಾ ಅನುಯಾಯಿಗಳು, ಭಕ್ತರು ಸಂಸ್ಥೆಯನ್ನು ನಿರ್ವಹಿಸುತ್ತಿದ್ದಾರೆ. ಈ ಉದ್ಘಾಟನೆಗೆ ಸಜ್ಜಾಗಿರುವ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನಿಯಮಾವಳಿಗಳಿಂದ ಮಾರ್ಗದರ್ಶಿಸಲ್ಪಟ್ಟಿದೆ.
ಎಲ್ಲರಿಗೂ ಗುಣಮಟ್ಟದ ಹಾಗೂ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಇನ್ನು ಈ ಮೆಡಿಕಲ್ ಕಾಲೇಜಿನಲ್ಲಿ ಶೈಕ್ಷಣಿಕ ಬ್ಲಾಕ್ ಅನ್ನು ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸಿ.ರಾಜೇಶ್ವರಿ ಅವರ ನಿಸ್ವಾರ್ಥ ಸೇವೆಗೆ ಸಮರ್ಪಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ.
ಇನ್ನು ಕಳೆದ ಕೆಲವು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶ್ರಮಕ್ಕೆ ಭೇಟಿ ನೀಡಿ 400 ಹಾಸಿಗೆಗಳ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಿದ್ದರು. ಇದೀಗ ಮುದ್ದೇನಹಳ್ಳಿಯಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಪ್ರಧಾನಿ ಮೋದಿ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: Fire Accident: ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ಚಾಲಕ ಪಾರು
ಪ್ರಧಾನಿ ಮೋದಿ ಭೇಟಿ ವಿವರ ಹೀಗಿದೆ
ಮಾ.25ರಂದು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತಲುಪಲಿದ್ದಾರೆ. ಬೆಳಗ್ಗೆ 10.45ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ, ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 12.55ಕ್ಕೆ ವೈಟ್‌ಫೀಲ್ಡ್ ಮೆಟ್ರೋ ಹೊಸ ಮಾರ್ಗ ಉದ್ಘಾಟನೆಯನ್ನೂ ಮಾಡಲಿದ್ದಾರೆ. ಅಲ್ಲಿಂದ ಬೆಂಗಳೂರಿಂದ ದಾವಣಗೆರೆಗೆ ಪ್ರಯಾಣ ಬೆಳೆಸಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5.15ಕ್ಕೆ ದಾವಣಗೆರೆಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ