ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರ ಅಭಯಾರಣ್ಯದಲ್ಲಿ ನಡೆಸುತ್ತಿರುವ 20 ಕಿ.ಮೀ ಟೈಗರ್ ಸಫಾರಿಯಲ್ಲಿ ಅರ್ಧದಷ್ಟನ್ನು ಪೂರೈಸಿದ್ದಾರೆ. ಈ ಕುರಿತ ಫೋಟೊ, ವಿಡಿಯೊ ಇಲ್ಲಿದೆ. ಸಫಾರಿ ರೌಂಡ್ಸ್ ಬಳಿಕ ಮೈಸೂರಿಗೆ ಪ್ರಧಾನಿ ಮೋದಿ ಮರಳಲಿದ್ದಾರೆ.
ಹುಲಿಗಳ ಸಂರಕ್ಷಣೆ ಕುರಿತ ಯೋಜನೆಯ (Project Tiger) ಸುವರ್ಣ ಸಂಭ್ರಮ (50 ವರ್ಷ) ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರದಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ 9.40ರವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಅವರು ಭೇಟಿ ನೀಡಲಿದ್ದಾರೆ. ಸಫಾರಿ ಮಾಡುವ ಮೂಲಕ ಹುಲಿ ಸಂರಕ್ಷಣೆಯ ಸಂದೇಶ ಸಾರಲಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಭಾಗವಹಿಸುವಿಕೆಗೆ ನಿರ್ಬಂಧ ವಿಧಿಸಲಾಗಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ತೆರಳುವ ವಾಹನ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಬಂಡೀಪುರ, ಮಧುಮಲೈ ಕಾಡಿಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿಯವರು ಮೈಸೂರಿಗೆ ವಾಪಸಾಗಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹುಲಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿದೇಶಗಳ ಆಹ್ವಾನಿತರು, ದೇಶದ ಅರಣ್ಯಾಧಿಕಾರಿಗಳು, ಅರಣ್ಯ ಮತ್ತು ಹುಲಿ ಸಂರಕ್ಷಣೆಯಲ್ಲಿ ತೊಡಗಿರುವವರು ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಭಾಷಣವನ್ನು ನರೇಂದ್ರ ಮೋದಿ ಮಾಡಲಿದ್ದಾರೆ.