Modi in Karnataka: 30 ವರ್ಷ ಉಳಿದವರ ಕಂಡಿರಿ; 4 ವರ್ಷದ ನಮ್ಮ ರಿಪೋರ್ಟ್‌ ಕಾರ್ಡ್‌ ನೋಡಿ ಆಶೀರ್ವದಿಸಿ, ಮಂಡ್ಯವನ್ನು ದೇಶದಲ್ಲೇ ನಂ. 1 ಮಾಡುತ್ತೇವೆ: ಸಿಎಂ - Vistara News

ಕರ್ನಾಟಕ

Modi in Karnataka: 30 ವರ್ಷ ಉಳಿದವರ ಕಂಡಿರಿ; 4 ವರ್ಷದ ನಮ್ಮ ರಿಪೋರ್ಟ್‌ ಕಾರ್ಡ್‌ ನೋಡಿ ಆಶೀರ್ವದಿಸಿ, ಮಂಡ್ಯವನ್ನು ದೇಶದಲ್ಲೇ ನಂ. 1 ಮಾಡುತ್ತೇವೆ: ಸಿಎಂ

Modi in Karnataka: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ಇಂದು ಉದ್ಘಾಟನೆಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ. ಅಡಿಗಲ್ಲಿನಿಂದ ಹಿಡಿದು ಇಲ್ಲಿಯವರೆಗೆ ಅವರೇ ಕೆಲಸ ಮಾಡಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

VISTARANEWS.COM


on

Modi in Karnataka updates Vote for BJP in Mandya we will make Mandya number one in the country says CM bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಎಲ್ಲರನ್ನೂ ಮೂವತ್ತು ವರ್ಷದಿಂದ ನೋಡುತ್ತಾ ಬಂದಿದ್ದೀರಿ. ಆದರೆ, ಈ ಬಾರಿ ನಾವು ಬಿಜೆಪಿ ಸರ್ಕಾರದ ವತಿಯಿಂದ ಕಳೆದ 4 ವರ್ಷಗಳಲ್ಲಿ ಮಾಡಿಕೊಂಡು ಬಂದ ಕೆಲಸವನ್ನು ನೋಡಿ ನಮ್ಮನ್ನು ಬೆಂಬಲಿಸಿ. ನಮ್ಮ ರಿಪೋರ್ಟ್‌ ಕಾರ್ಡ್‌ ನೋಡಿ ಆಶೀರ್ವಾದ ಮಾಡಿ. ಮುಂದಿನ ದಿನಗಳಲ್ಲಿ ಮಂಡ್ಯವನ್ನು ದೇಶದಲ್ಲಿಯೇ ನಂಬರ್‌ ಒನ್‌ ಜಿಲ್ಲೆಯನ್ನಾಗಿ ಮಾಡಲು ನಾವು ಕಂಕಣ ಬದ್ಧರಾಗಿದ್ದೇವೆ ಎಂದು ಸಿಎಂ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ಸಮ್ಮುಖದಲ್ಲಿ ಘೋಷಣೆ ಮಾಡಿದರು.

ಮಂಡ್ಯದ ಗೆಜ್ಜಲಗೆರೆಯಲ್ಲಿ ಆಯೋಜನೆ ಮಾಡಿದ್ದ, 12 ಸಾವಿರ ಕೋಟಿ ರೂ. ಮೊತ್ತದ 210 ಕಿಲೋಮೀಟರ್‌ ಉದ್ದದ ಎರಡು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ಈ ಬಾರಿ ಬಿಜೆಪಿಯ ಅಭಿವೃದ್ಧಿಯನ್ನು ನೋಡಿ ಮತ ಚಲಾಯಿಸುವಂತೆ ಮನವಿ ಮಾಡಿದರು.

2019ರಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಯಿತು. ಈಗ 2023ರಲ್ಲಿ ಕಾಮಗಾರಿ ಮುಗಿದು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟನೆ ಮಾಡುತ್ತಿದ್ದಾರೆ. ಅಂದರೆ ಡಿಪಿಆರ್‌ ಕೆಲಸದಿಂದ ಹಿಡಿದು ಇಲ್ಲಿಯವರೆಗೂ ಕೆಲಸ ಮಾಡಿಸಿದ್ದು ಮೋದಿ ಮಾತ್ರವೇ. ಆದರೆ, ಪತ್ರಿಕೆಯಲ್ಲಿ ಹಲವರು ನಾನು ಮಾಡಿದೆ, ನಾನು ಮಾಡಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ನಮ್ಮ ಕಡೆಯ ಗಾಧೆ ಮಾತಾದ, “ಪಕ್ಕದ ಮನೆಯವನು ಗಂಡು ಹಡೆದರೆ, ಈತ ಪೇಡೆ ಕೊಡುತ್ತಾನೆ” ಎಂಬಂತೆ ಇದು ಕಥೆಯಾಗಿದೆ. ಇದಕ್ಕೆ ಅಡಿಗಲ್ಲು ಹಾಕಿದ್ದು, ಉದ್ಘಾಟನೆ ಮಾಡುತ್ತಿರುವುದು ನರೇಂದ್ರ ಮೋದಿಯವರು ಎಂಬ ಸತ್ಯವನ್ನು ನಾನೀಗ ಹೇಳುತ್ತಿದ್ದೇನೆ. ಇದು ಮೋದಿ ಅವರು ಕೆಲಸ ಮಾಡುವ ಪದ್ಧತಿಯಾಗಿದೆ ಎಂದು ಹೇಳಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯೋಜನೆ ಆಗಬೇಕು ಎಂಬ ಬಗ್ಗೆ 90ರ ದಶಕಗಳಿಂದ ಬೇಡಿಕೆ ಇತ್ತು. ಆದರೆ, ನೈಸ್‌ ರಸ್ತೆ ಬರಲಿದೆ ಎಂಬ ಕಾರಣ ನೀಡಿ ಈ ಯೋಜನೆಯನ್ನು ಪಕ್ಕಕ್ಕೆ ಇಡಲಾಯಿತು. ಕೊನೆಗೆ ಈ ಪ್ರಸ್ತಾವನೆಯೇ ಇರಲಿಲ್ಲ. ಆದರೆ, 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ಬಳಿಕ ಡಿಪಿಆರ್‌ ಅನ್ನು ಸಿದ್ಧಪಡಿಸಿ ಯೋಜನೆಯ ಪ್ರಕ್ರಿಯೆ ಚುರುಕುಗೊಂಡಿತು. 2015ರಲ್ಲಿ ಇದಕ್ಕೆ ಡಿಪಿಆರ್‌ ಆಯ್ತು. ಆಗ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿ ಅವರು ಸಹಕಾರ ನೀಡುತ್ತಾ ಬಂದರು. 2016ರಲ್ಲಿ ನ್ಯಾಷನಲ್‌ ಹೈವೇ ಅಥಾರಿಟಿಗೆ ವರ್ಗಾವಣೆಯೂ ಆಯಿತು ಎಂದು ತಿಳಿಸಿದರು.

ಇದನ್ನೂ ಓದಿ: Modi in Karnataka: ಕರ್ನಾಟಕದಲ್ಲಿ 2 ಲಕ್ಷ ಕೋಟಿ ರೂ. ಮೊತ್ತದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ: ನಿತಿನ್‌ ಗಡ್ಕರಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಂದಾಜು ಪ್ರಕ್ರಿಯೆ ನಡೆಯಿತು. ಆಗ ಹೆಚ್ಚುವರಿ ಅನುದಾನ ಬೇಕಾಗಲಿದೆ ಎಂಬ ವಿಷಯ ತಿಳಿಯಿತು. 4000 ಕೋಟಿ ಹೆಚ್ಚುವರಿ ಅನುದಾನವು ಬೇಕಿರುವ ವಿಷಯ ತಿಳಿದ ಪ್ರಧಾನಿ ನರೇಂದ್ರ ಮೋದಿಯವರು ಅಷ್ಟೂ ಹಣವನ್ನು ಬಿಡುಗಡೆ ಮಾಡಿಸಿದರು ಎಂದು ಅಭಿನಂದಿಸಿದರು.

ಮೋದಿ ವಿಶ್ವನಾಯಕ

ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವ ನಾಯಕರಾಗಿದ್ದಾರೆ. ಇದನ್ನು ನಮ್ಮ ದೇಶ ಮಾತ್ರವಲ್ಲ, ವಿದೇಶದಲ್ಲಿ ಮಿತ್ರ ದೇಶಗಳ ಸಹಿತ ವಿರೋಧಿ ದೇಶಗಳ ಜನರೂ ಮೋದಿಯವರನ್ನು ಒಪ್ಪಿಕೊಂಡಿದ್ದಾರೆ. ಕಟ್ಟಾ ವಿರೋಧಿ ಪಾಕಿಸ್ತಾನದಲ್ಲಿಯೂ ಸಮಸ್ಯೆ ಬಗೆಹರಿಸಲು ಮೋದಿಯವರೇ ಬೇಕು ಎಂದು ಅಲ್ಲಿನವರು ಹೇಳುತ್ತಾರೆ. ಇನ್ನು ಚೀನಾ ದೇಶದ ನಾಗರಿಕರು ಮೋದಿಯವರನ್ನು ಅತ್ಯಂತ ಬುದ್ಧಿವಂತ ನಾಯಕರು ಎಂದು ಹೊಗಳಿದ್ದಾರೆ. ದೊಡ್ಡಣ್ಣ ಅಮೆರಿಕದವರೂ ಸಹ ಅತ್ಯುತ್ತಮ ಆಡಳಿತಗಾರರು ಎಂದು ಹೊಗಳಿದ್ದಾರೆ. ಜಿ20ಯ ನಾಯಕತ್ವವು ಇಂದು ಭಾರತಕ್ಕೆ ಬಂದಿರುವುದು ನರೇಂದ್ರ ಮೋದಿಯವರೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಭಿವೃದ್ಧಿ ಬಗ್ಗೆ ಸಿಎಂ ಹೇಳಿದ್ದೇನು? ಇಲ್ಲಿದೆ ವಿಡಿಯೊ

ಇಲ್ಲಿದೆ ನೋಡಿ ಡಬಲ್‌ ಎಂಜಿನ್‌ ಸರ್ಕಾರದ ಸಾಧನೆ- ಸಿಎಂ

ಡಬಲ್‌ ಎಂಜಿನ್‌ ಸರ್ಕಾರ ಇದ್ದಿದ್ದರಿಂದ ಈ ಎಲ್ಲವನ್ನೂ ಮಾಡಲು ಸಾಧ್ಯವಾಗಿದೆ. ಡಬಲ್‌ ಎಂಜಿನ್‌ ಸರ್ಕಾರ ಏನು ಮಾಡಿದೆ ಎಂದು ಕೆಲವರು ಕೇಳುತ್ತಾರೆ. ಇಂದು ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಇದುವರೆಗೆ 53 ಲಕ್ಷ ರೈತರಿಗೆ 16500 ಕೋಟಿ ರೂಪಾಯಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ 4000 ಕೋಟಿ ರೂಪಾಯಿಯನ್ನು ನೀಡಿದ್ದೇವೆ. ಇದು ಸಾಧ್ಯವಾಗಿದ್ದು ನಮ್ಮ ಡಬಲ್‌ ಎಂಜಿನ್‌ ಸರ್ಕಾರದಿಂದ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ 17 ಲಕ್ಷ ಮನೆಗಳು ಇಂದು ಮಂಜೂರಾಗಿ ಕೆಲಸಗಳು ನಡೆಯುತ್ತಿವೆ. ಅಲ್ಲದೆ, 1.25 ಕೋಟಿ ಆಯುಷ್ಮಾನ್‌ ಕಾರ್ಡ್‌ ಅನ್ನು ಕರ್ನಾಟಕದಲ್ಲಿ ಕೊಡಲಾಗಿದೆ. ಕಳೆದ 6 ವರ್ಷದಲ್ಲಿ 64 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 6 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ. ಜನ ಕಲ್ಯಾಣ, ರಾಜ್ಯ ಕಲ್ಯಾಣ, ರಾಷ್ಟ್ರ ಕಲ್ಯಾಣವನ್ನು ಮಾಡಿದ್ದೇವೆ. ಇದಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ. ಸಮೃದ್ಧಿಗಾಗಿ ನಿರಂತರ ಶ್ರಮವಹಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Modi in Karnataka: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದೇಶಕ್ಕೆ ಸಮರ್ಪಣೆ ಮಾಡಿದ ನರೇಂದ್ರ ಮೋದಿ

ಮಂಡ್ಯ ಈಸ್‌ ಇಂಡಿಯಾ ಎಂದ ಸಿಎಂ

ಮಂಡ್ಯದಲ್ಲಿ ಬಹು ವರ್ಷಗಳ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭ ಮಾಡಿದ್ದು ನಮ್ಮ ಸರ್ಕಾರ. ಕಟ್ಟಕಡೆಯ ರೈತನಿಗೂ ಸೌಲಭ್ಯ ಕೊಡುವ ಕೆಲಸವನ್ನು ನಾವು ಮಾಡುತ್ತಾ ಬಂದಿದ್ದೇವೆ. ಮಂಡ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ಕಿಸಾನ್‌ ಸಮ್ಮಾನ್‌ ಯೋಜನೆ ತಲುಪಿದೆ. ರೈತ ವಿದ್ಯಾನಿಧಿ ಯೋಜನೆಯು ರಾಜ್ಯದ 35 ಸಾವಿರ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. 4.69 ಲಕ್ಷ ಆಯುಷ್ಮಾನ್‌ ಕಾರ್ಡ್‌ ಅನ್ನು ಇಂದು ಮಂಡ್ಯ ಜಿಲ್ಲೆಯ ಜನತೆಗೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Kannada Sahitya Sammelana: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ಕನ್ನಡ ಭಾಷೆಯ ಜ್ಞಾನ ಇಂದು ದೇಶ-ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

VISTARANEWS.COM


on

Minister Dinesh Gundurao drives for the 5th Kannada Sahitya Sammelana in Bengaluru
Koo

ಬೆಂಗಳೂರು: ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು.‌ ಬಳಿಕ ಶ್ರೀರಾಮ್‌ಪುರ ಸನ್ ರೈಸ್ ವೃತ್ತದಿಂದ ಶೇಷಾದ್ರಿಪುರಂವರೆಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಸಲಾಯಿತು.‌ ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಕನ್ನಡ ಹಬ್ಬಕ್ಕೆ ಮೆರಗು ನೀಡಿದರು.‌ ವಿವಿಧ ಸಾಂಸ್ಕೃತಿಕ ಮೇಳಗಳು ಕನ್ನಡ ಜಾಗೃತಿ ಮೆರವಣಿಗೆಯಲ್ಲಿ ಗಮನ ಸೆಳೆದವು.

ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದಲ್ಲಿ ಸಾಂಸ್ಕೃತಿಕ ಭಂಡಾರವೇ ಇದೆ. ಕನ್ನಡ ಭಾಷೆಯ ಜ್ಞಾನ ಇಂದು ದೇಶ ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಗಾಂಧಿನಗರದಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, ಕನ್ನಡಕ್ಕೆ ನಮ್ಮ ಕಡೆಯಿಂದ ಒಂದು ಸಣ್ಣ ಸೇವೆ. ಯುವಕರು ನಮ್ಮ ಕನ್ನಡ ಭಾಷೆಯಲ್ಲಿರುವ ಜ್ಞಾನವನ್ನು ಸಂಪಾದಿಸಿಕೊಂಡು, ಕನ್ನಡ ಸೇವೆಗೆ ಸದಾ ಸಜ್ಜಾಗಿರಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ವಿ.ರಾಣಿ ಗೋವಿಂದರಾಜು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ಕವಿ ಗೋಷ್ಠಿ ಸೇರಿದಂತೆ, ಕನ್ನಡ ನಾಳೆಗಳು ಹೇಗಿರಬೇಕು ಹಾಗೂ ಸರ್ವಜನಾಂಗದ ಶಾಂತಿಯ ತೋಟ- ಗಾಂಧಿನಗರ ಕ್ಷೇತ್ರ ಎಂಬ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಅಲ್ಲದೇ ಕನ್ನಡ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಕ್ಕೂ ಹೆಚ್ಚು ಗಣ್ಯರನ್ನು ಇದೇ ವೇಳೆ ಗೌರವಿಸಿ, ಸನ್ಮಾನಿಸಲಾಯಿತು.

Continue Reading

ಯಾದಗಿರಿ

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Yadgiri News: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆ ಕೃಷ್ಣಾ ನದಿಯ ಪ್ರವಾಹದಿಂದ ಜಲಾವೃತವಾಗಿದ್ದು, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ, ಪ್ರವಾಹದಿಂದ ಹಾನಿಯಾದ ಪ್ರದೇಶವನ್ನು ಪರಿಶೀಲನೆ ಮಾಡಿದರು.

VISTARANEWS.COM


on

Yadgiri News Kolluru bridge inundation MLA Channareddy Patil tunnuru visit inspection
Koo

ಯಾದಗಿರಿ: ಕೃಷ್ಣಾ ನದಿಯ ಪ್ರವಾಹದಿಂದ ಕೊಳ್ಳುರು ಸೇತುವೆ ಜಲಾವೃತವಾಗಿದ್ದು, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ, ಪರಿಶೀಲನೆ (Yadgiri News) ಮಾಡಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ, ಪ್ರವಾಹದಿಂದ ಹಾನಿಯಾದ ಪ್ರದೇಶ ವೀಕ್ಷಣೆ ಮಾಡಿದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾದ ಹಿನ್ನೆಲೆ ಕೊಳ್ಳುರು ಸೇತುವೆ ಕೃಷ್ಣಾ ನದಿಯ ಪ್ರವಾಹಕ್ಕೆ ಜಲಾವೃತವಾಗಿದೆ‌. ಸೇತುವೆಯು ರಾಯಚೂರು-ಯಾದಗಿರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುತ್ತದೆ, ಈಗ ಸಂಪರ್ಕ ಕಡಿತಗೊಂಡಿದೆ. ಸೇತುವೆ ತೀರಕ್ಕೆ ತೆರಳಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಕೃಷ್ಣಾ ನದಿಯ ಪ್ರವಾಹದ ಪರಿಸ್ಥಿತಿ ಅವಲೋಕನೆ ಮಾಡಿದರು.

ಈ ವೇಳೆ ಶಾಸಕರು, ಕೊಳ್ಳುರು ಗ್ರಾಮದ ಜನರ ಸಮಸ್ಯೆ ಆಲಿಸಿದರು. ಪ್ರತಿ ವರ್ಷ ಕೃಷ್ಣಾ ನದಿಯ ಪ್ರವಾಹ ಬಂದಾಗ ಹಾನಿಯಾಗುವ ಬಗ್ಗೆ ಗ್ರಾಮಸ್ಥರು ನೋವು ತೊಡಿಕೊಂಡರು. ಕೃಷ್ಣಾ ನದಿ ತೀರದ ರೈತರು ಪ್ರತಿ ವರ್ಷ ಬೆಳೆ ಹಾನಿ ಎದುರಿಸುತ್ತಿದ್ದೆ. ಈ ಸೇತುವೆ ಕೆಳಭಾಗದಲ್ಲಿದೆ ಎತ್ತರವಾಗಿ ಸೇತುವೆ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮಾತನಾಡಿ, ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ‌. ಮುಂದಿನ ದಿನಗಳಲ್ಲಿ ಸೇತುವೆ ಎತ್ತರವಾಗಿ ನಿರ್ಮಾಣ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.ಕೃಷ್ಣಾ ಪ್ರವಾಹದಿಂದ ಬೆಳೆ ಹಾನಿಯಾಗಿದೆ. ನಷ್ಟವಾದ ರೈತರಿಗೆ ಪರಿಹಾರ ಕೊಡಿಸುತ್ತೇವೆ. ಸರ್ಕಾರ ಪರಿಹಾರ ಕಲ್ಪಿಸುವ ಕೆಲಸ ಮಾಡಲಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಕೃಷ್ಣಾ ನದಿ ತೀರದ ಜನರು ನದಿ ತೀರಕ್ಕೆ ತೆರಳದೆ ಸುರಕ್ಷಿತವಾಗಿ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಸಂದರ್ಭದಲ್ಲಿ ವೇಳೆ ಮಲ್ಲಿಕಾರ್ಜುನ ಈಟೆ, ಶರಣಗೌಡ ಕುರಕುಂದಿ, ಶರಣಗೌಡ ಬಲಕಲ್, ಶರಣಗೌಡ ಮಾಲಿಪಾಟೀಲ, ಶಿವಾರೆಡ್ಡಿ ಪಾಟೀಲ ಕೊಳ್ಳುರು ಸೇರಿದಂತೆ ಅನೇಕರು ಇದ್ದರು.

Continue Reading

ಬೆಂಗಳೂರು

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Bengaluru News: ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ “ದೀಕ್ಷಾ ದಿನದ ” ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆಯಿಂದ ಇದೇ ಜು.28 ರಂದು ಹಾಗೂ ಆ.1,3 ಮತ್ತು 5 ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nirmala Sahaya Hasta programme by Okkaliga Yuva Brigade on 28th July and 1st 3rd and 5th August
Koo

ಬೆಂಗಳೂರು: ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ “ದೀಕ್ಷಾ ದಿನʼದ ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆಯಿಂದ ಇದೇ ಜು.28ರಂದು ಹಾಗೂ ಆಗಸ್ಟ್‌ 1, 3 ಮತ್ತು 5ರಂದು “ನಿರ್ಮಲ ಸಹಾಯ ಹಸ್ತ” ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದೀಕ್ಷಾ ದಿನದ ಪ್ರಯುಕ್ತ ಪ್ರತಿವರ್ಷದಂತೆ, ಈ ವರ್ಷವೂ ಕೂಡ, ಶಾಲೆಗಳಿಗೆ ಅಗತ್ಯ ಸೌಲಭಗಳನ್ನು ಒದಗಿಸುವ ಹಾಗೂ ಶಾಲೆಯ ದತ್ತು ಸ್ವೀಕಾರ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ಜು.28ರಂದು ಒಡೆಯರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100 ವಿದ್ಯಾರ್ಥಿಗಳಿಗೆ ಊಟದ ಉಪಕರಣಗಳನ್ನು ವಿತರಿಸುವ ಕಾರ್ಯಕ್ರಮ. ಆ.1 ರಂದು ಚಪ್ಪರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಆ.3ರಂದು ಗಂಗನಕುಪ್ಪೆ ಕಿರಿಯ ಮಾಧ್ಯಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಮತ್ತು ಆ.05 ರಂದು ಸರಗೂರು ಆದಿವಾಸಿಗಳ ಶಾಲೆಗೆ ಸ್ಕೂಲ್ ಬ್ಯಾಗ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು7 mins ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ8 mins ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ8 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು9 mins ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ10 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Drowned in water
ಬಳ್ಳಾರಿ23 mins ago

Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

HD Kumaraswamy
ಪ್ರಮುಖ ಸುದ್ದಿ46 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ50 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್53 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ1 hour ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ5 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ6 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌