Modi in Mangalore | ಕಿಸಾನ್‌ ಕಾರ್ಡ್‌, ಆಳ ಸಮುದ್ರ ಮೀನುಗಾರಿಕೆಗೆ ಸಹಾಯ: ಮೀನುಗಾರರ ಮನಸೂರೆಗೊಂಡ ಮೋದಿ - Vistara News

ಕರ್ನಾಟಕ

Modi in Mangalore | ಕಿಸಾನ್‌ ಕಾರ್ಡ್‌, ಆಳ ಸಮುದ್ರ ಮೀನುಗಾರಿಕೆಗೆ ಸಹಾಯ: ಮೀನುಗಾರರ ಮನಸೂರೆಗೊಂಡ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಂಗಳೂರಿನಲ್ಲಿ ಕಿಸಾನ್‌ ಕಾರ್ಡ್‌ ಮತ್ತು ಆಳ ಸಮುದ್ರ ಮೀನುಗಾರಿಕೆಗೆ ಸಹಾಯ ವಿತರಿಸಿದರು.

VISTARANEWS.COM


on

Modi fishing
ಪ್ರಧಾನಿ ನರೇಂದ್ರ ಮೋದಿ ಅವರು ಆಳ ಸಮುದ್ರ ಮೀನುಗಾರಿಕೆಗೆ ಸಹಾಯಧನ ವಿತರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ನೀಲಿ ಸಂಪತ್ತು ಎಂದೇ ಖ್ಯಾತಿವೆತ್ತ ಸಮುದ್ರ ಸಂಪತ್ತನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೀನುಗಾರಿಕೆಗೆ ಬೆಂಬಲ ನೀಡುವ ವಾಗ್ದಾನ ಮಾಡಿದರು.

ದೇಶದಲ್ಲೇ ಮೊದಲ ಬಾರಿಗೆ ಕಿಸಾನ್‌ ಕಾರ್ಡ್‌ನ್ನು ತುಮಕೂರಿನಲ್ಲಿ ವಿತರಿಸಲಾಗಿತ್ತು. ಶುಕ್ರವಾರ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರು ಮೀನುಗಾರರಿಗೆ ಪ್ರಾತಿನಿಧಿಕವಾಗಿ ಕಿಸಾನ್‌ ಕಾರ್ಡ್‌ ವಿತರಿಸಲಾಯಿತು. ಇದೇ ವೇಳೆ ಆಳ ಸಮುದ್ರ ಮೀನುಗಾರಿಕೆಗೆ ೧೦೦ ಮಂದಿಗೆ ಸಹಾಯಧನ ನೀಡಲಾಗಿದ್ದು, ಅವರ ಪೈಕಿ ಮೂವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್‌ ಕಾರ್ಡ್‌ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಮುದ್ರ ಸಂಪತ್ತನ್ನು ಇನ್ನಷ್ಟು ಹೆಚ್ಚು ಶಕ್ತಿಶಾಲಿಯಾಗಿ ಬಳಸಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ಮಾಡಲಿದೆ. ಈಗಾಗಲೇ ಮತ್ಸ್ಯ ಸಂಪತ್ತಿನ ಸಂಗ್ರಹ, ಸಾಗಣೆ ಮತ್ತು ಮಾರುಕಟ್ಟೆಯನ್ನು ವಿಸ್ತರಿಸಲು, ವಿದೇಶದಲ್ಲೂ ಮಾರುಕಟ್ಟೆ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೀನು ಹಿಡಿದು ಬದುಕು ಕಟ್ಟುತ್ತಿರುವ ಮೀನುಗಾರರಿಗೆ ಸಹಾಯ ನೀಡಲು ನಮ್ಮ ಡಬಲ್‌ ಎಂಜಿನ್‌ ಸರಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದರು. ಆಳ ಸಮುದ್ರ ಮೀನುಗಾರಿಕೆಗೆ ಸಹಾಯವಾಗುವಂತೆ ಅತ್ಯಾಧುನಿಕ ವ್ಯವಸ್ಥೆಗಳನ್ನು ಮಾಡಲಾಗಿದೆ.

ಕುಳಾಯಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಮಾಡಿದ್ದೇನೆ. ಇದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದರಿಂದ ಮೀನುಗಾರರಿಗೆ, ಅವರ ಮಕ್ಕಳಿಗೆ ದೊಡ್ಡ ಲಾಭವಾಗಲಿದೆ ಎಂದರು ಮೋದಿ.

ಇದನ್ನೂ ಓದಿ| Modi in Mangalore | ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Neha Murder Case: ಆರೋಪಿ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೋ ಲೀಕ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿರುವ ಕೇಂದ್ರ ಪ್ರಲ್ಹಾದ್ ಜೋಶಿ‌, ಕಾಂಗ್ರೆಸ್ ಸರ್ಕಾರದಿಂದಲೇ ಫಯಾಜ್ ಮೊಬೈಲ್‌ನಲ್ಲಿದ್ದ ಫೋಟೊಗಳನ್ನು ಲೀಕ್‌ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದ್ದಾರೆ.

VISTARANEWS.COM


on

Neha Murder Case How can a mobile photo be leaked when accused Fayaz is in jail
Koo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದಲ್ಲಿ (Neha Murder Case) ಜೈಲಲ್ಲಿ ಇರುವ ಆರೋಪಿ ಮೊಬೈಲ್‌ನಲ್ಲಿ ಇದ್ದ ಫೋಟೊವನ್ನು ಹರಿಬಿಟ್ಟವರು ಯಾರು? ರಾಜ್ಯ ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ (ಏಪ್ರಿಲ್‌ 23) ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಆರೋಪಿ ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ? ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದರು.

ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಲಿ

ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ಈ ಬಗ್ಗೆ ಆಕೆಯ ತಂದೆ, ಕಾರ್ಪೋರೇಟರ್‌ ನಿರಂಜನ್‌ ಹಿರೇಮಠ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಪ್ರಲ್ಹಾದ್‌ ಜೋಶಿ ಒತ್ತಾಯಿಸಿದರು.

Neha Murder Case How can a mobile photo be leaked when accused Fayaz is in jail

ಮತ್ತೊಂದು ಹುಡುಗಿ ಮೇಲೆ ಹಲ್ಲೆ

ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹುಡುಗಿ ಮೇಲೆ ಹಲ್ಲೆ ನಡೆದಿದೆ. ಮತಾಂತರಕ್ಕೆ ಒಪ್ಪದಿದ್ದಾಗ ಯುವತಿಯನ್ನು ಮನಬಂದಂತೆ ಥಳಿಸಿದ್ದಾರೆ. ಹಿಂದೂ ನೆಲೆಗಟ್ಟಿನ ಹುಬ್ಬಳ್ಳಿಯಲ್ಲೇ ಹೀಗಾದರೆ ಹೇಗೆ? ಹಿಂದೂ ನೆಲೆಗಟ್ಟಿನ, ಹಿಂದೂ ಸಮಾಜ-ಸಂಘಟನೆ ಗಟ್ಟಿಯಾಗಿರುವ ಹುಬ್ಬಳ್ಳಿ ನೆಲದಲ್ಲೇ ಹೀಗಾಗಿರುವಾಗ ಇನ್ನು ರಾಜ್ಯದ ಬೇರೆಡೆ ಸ್ಥಿತಿ ಏನಾಗಿರಬೇಡ? ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದರು.

ತುಷ್ಟೀಕರಣ ಮಾಡುವವರನ್ನು ಮೊದಲು ಕಿತ್ತೊಗೆಯಬೇಕು

ತುಷ್ಟೀಕರಣ ರಾಜಕಾರಣ ಮಾಡುವವರನ್ನು ಮೊದಲು ಅಧಿಕಾರದಿಂದ ಕಿತ್ತು ಹಾಕಬೇಕು. ಇಲ್ಲದಿದ್ದರೆ ನಮ್ಮ ಮನೆಗಳಲ್ಲೂ ನಾವು ಹಿಂದೂ ಧರ್ಮ-ಸಂಸ್ಕೃತಿಯನ್ನು ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.

ನೇಹಾ ಕೊಲೆ ಪ್ರಕರಣ ಸಿಐಡಿ ಹೆಗಲಿಗೆ; ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ (Neha Murder Case) ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು (Fayaz) ಎನ್‌ಕೌಂಟರ್‌ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಸಿಬಿಐ ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಈಗ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ (ಏಪ್ರಿಲ್‌ 22) ಶಿವಮೊಗ್ಗದಲ್ಲಿ ಹೇಳಿದ್ದಾರೆ.

“ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಲವ್‌ ಜಿಹಾದ್‌ ಆರೋಪವೂ ಕೇಳಿಬಂದಿವೆ. ಅದರಲ್ಲೂ, ನೇಹಾ ಹಿರೇಮಠ ಪ್ರಕರಣವು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಹಾಗಾಗಿ, ರಾಜ್ಯ ಸರ್ಕಾರವು ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

9 ಸಲ ಅಲ್ಲ 14 ಬಾರಿ ಇರಿದು ಕೊಂದ ಫಯಾಜ್

ವಿದ್ಯಾರ್ಥಿನಿ ನೇಹಾಳಿಗೆ ಪಾಗಲ್‌ ಫಯಾಜ್‌ 9 ಬಾರಿ ಅಲ್ಲ, 14 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಇದಕ್ಕೂ ಮೊದಲು, ನೇಹಾ ಹಿರೇಮಠ್‌ಗೆ ಫಯಾಜ್‌ 9 ಬಾರಿ ಚಾಕು ಇರಿದು ಕೊಲೆ ಮಾಡಿದ್ದ ಎಂಬುದಾಗಿ ಹೇಳಲಾಗಿತ್ತು. ಆದರೆ, ಈಗ 14 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾಣೆ ಎಂದು ಮರಣೋತ್ತರ ವರದಿ ತಿಳಿಸಿದೆ. ಏಪ್ರಿಲ್‌ 19ರಂದು ಬಿವಿಬಿ ಕಾಲೇಜು ಆವರಣದಲ್ಲಿ ಭೀಕರವಾಗಿ ಕೊಲೆ ನಡೆದಿತ್ತು.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಮೇಲೆ ದಾಳಿ ಮಾಡಿದ್ದ ಫಯಾಜ್‌ ಕೇವಲ 30 ಸೆಕೆಂಡ್‌ಗಳಲ್ಲಿ 14 ಬಾರಿ ಇರಿದಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನೇಹಾ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಪ್ರೀತಿ ನಿರಾಕರಿಸಿದ ನೇಹಾಳ ಹೃದಯಕ್ಕೆ ಮೊದಲು ಚಾಕು ಇರಿದ ಆತ, 30 ಸೆಕೆಂಡ್‌ಗಳಲ್ಲೇ 14 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕತ್ತಿನ ಬಳಿ ಚಾಕು ಇರಿಯುತ್ತಿದ್ದಂತೆ ರಕ್ತನಾಳ ಕತ್ತರಿಸಿದ್ದು, ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿದೆ. ಅತಿಯಾದ ರಕ್ತಸ್ರಾವದಿಂದ ನೇಹಾ ಹಿರೇಮಠ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಕರ್ನಾಟಕ

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ (Lok Sabha Election 2024) ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಬುಧವಾರ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜತೆಗೆ 5 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ನಿಷೇಧಾಜ್ಞೆಯು ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನ 5 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್‌ಪಿಎಫ್, 14 ಕೆಎಸ್‌ಆರ್‌ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

ಬೆಂಗಳೂರು: ಲೋಕಸಭಾ ಚುನಾವಣೆ- 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮತದಾನ (voting) ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿಯನ್ನು (voter id) ಪ್ರತಿಯೊಬ್ಬ ಅರ್ಹ ಮತದಾರನೂ ಹೊಂದಿರಲೇಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ (Voter ID) ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮತದಾರರ ಗುರುತು ಚೀಟಿಯು ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮತದಾರನ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಇದು ಮಹತ್ವದ ಅಧಿಕೃತ ದಾಖಲೆಗಳಲ್ಲಿ ಒಂದಾಗಿದೆ.
ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ವೋಟರ್ ಐಡಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

ಯಾರು ಅರ್ಹರು?

ಭಾರತದ ಚುನಾವಣಾ ಆಯೋಗದ ಪ್ರಕಾರ ನಾಗರಿಕರು ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಮತದಾರರಾಗಲು ಅರ್ಹರಾಗಿರುತ್ತಾರೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬ ನಾಗರಿಕರು ಯಾವುದಾದರೂ ನಿರ್ಧಿಷ್ಟ ಕಾರಣದಿಂದ ಅನರ್ಹಗೊಳಿಸದ ಹೊರತು ಮತದಾರರ ಗುರುತು ಚೀಟಿ ಪಡೆಯಲು ದಾಖಲಾತಿ ನಡೆಸಲು ಅರ್ಹರಾಗಿರುತ್ತಾರೆ.
ಅರ್ಹ ಮತದಾರನ ಸಾಮಾನ್ಯ ನಿವಾಸದ ಸ್ಥಳದಲ್ಲಿ ಮಾತ್ರ ನೋಂದಣಿ ಮಾಡಿಸಬಹುದು ಹಾಗೂ ಒಂದೇ ಸ್ಥಳದಲ್ಲಿ ಮಾತ್ರ ನೋಂದಣಿ ಸಾಧ್ಯ.


ಸಾಗರೋತ್ತರ ಭಾರತೀಯರ ಪಾಸ್‌ಪೋರ್ಟ್‌ನಲ್ಲಿನೀಡಿರುವ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಾರೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮತದಾರರು ತಮ್ಮ ಮನೆಯ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಲಾಗುವುದು.

ವೋಟರ್ ಐಡಿ ಇಲ್ಲದೆ ಮತ ಚಲಾಯಿಸಬಹುದೇ?

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿದೆ. ಮತ ಚಲಾಯಿಸಲು ಚುನಾವಣಾ ಆಯೋಗ ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಯಾವುದೇ ಒಂದು ದಾಖಲೆಯನ್ನು ಒದಗಿಸಬೇಕು.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ ಸೂಚನೆಗಳ ಪ್ರಕಾರ ಮತದಾರರ ಗುರುತಿನ ಚೀಟಿ ಇಲ್ಲದೆಯೂ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರೆಗೆ ಮತ ಚಲಾಯಿಸಲು ಮತದಾರರು ಅರ್ಹನಾಗಿರುತ್ತಾರೆ.

ಹೆಸರಿದೆಯೇ ಪರಿಶೀಲಿಸಿ

ಮತದಾನ ಪ್ರಕ್ರಿಯೆಯಲ್ಲಿ (ಇಸಿಐ) ಪಾಲ್ಗೊಳ್ಳುವ ಮೊದಲು ಭಾರತದ ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಪರಿಶೀಲಿಸಬೇಕು. ಮತಪತ್ರವನ್ನು ಚಲಾಯಿಸುವ ಮೊದಲು ಈ ಪಟ್ಟಿಯನ್ನು ಪರಿಶೀಲಿಸುವುದು ನಿರ್ಣಾಯಕವಾಗಿದೆ ಏಕೆಂದರೆ ಅದರಲ್ಲಿ ನೀವು ಮತ ಚಲಾಯಿಸುವ ಅರ್ಹತೆಯನ್ನು ದೃಢೀಕರಿಸುತ್ತದೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೆ ಚುನಾವಣಾ ಆಯೋಗವು ಗೊತ್ತುಪಡಿಸಿದ ಪರ್ಯಾಯ ದಾಖಲೆಗಳನ್ನು ಮತದಾರರು ಬಳಸಬಹುದು.

ಇತರ ದಾಖಲೆ ಯಾವುದು?

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿಗಾಗಿ ಎಪಿಕ್ ಅಥವಾ ಮತದಾರರ ಐಡಿ ಹೊಂದಿಲ್ಲದಿದ್ದರೆ ಸಾರ್ವತ್ರಿಕ ಚುನಾವಣೆಯ ವೇಳೆ ವೋಟರ್ ಐಡಿ ಇಲ್ಲದೆಯೇ ಮತವನ್ನು ಚಲಾಯಿಸಲು ಬಳಸಬಹುದಾದ ದಾಖಲೆಗಳು ಇಂತಿವೆ.

ಆಧಾರ್ ಕಾರ್ಡ್, MNREGA ಜಾಬ್ ಕಾರ್ಡ್, ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಿಗೆ, ಪ್ಯಾನ್ ಕಾರ್ಡ್, NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪೆನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು, ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್ ಗಳನ್ನು ದಾಖಲೆಯಾಗಿ ಮತದಾನದ ವೇಳೆ ಗುರುತು ಚೀಟಿಯಾಗಿ ಮತದಾನ ಕೇಂದ್ರದಲ್ಲಿ ತೋರಿಸಬಹುದಾಗಿದೆ.

ನೋಂದಣಿ ಸ್ಥಿತಿ ಪರಿಶೀಲನೆ ಹೇಗೆ?

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಮಾತ್ರ ಮತ ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರು ಇದೆಯೇ, ಇಲ್ಲವೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ https://electoralsearch.eci.gov.in ಗೆ ಲಾಗಿನ್ ಆಗಿ ನೋಡಬಹುದು. ಅಲ್ಲದೇ ಮತದಾರರ ಸಹಾಯವಾಣಿ 1950ಕ್ಕೆ ಕರೆಯೂ ಪರಿಶೀಲನೆ ನಡೆಸಬಹುದಾಗಿದೆ.

Continue Reading

Lok Sabha Election 2024

HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

HD Kumaraswamy: ಕನ್ನಡಿಗರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಕಾಳಜಿ ಇದ್ದರೆ ತಮಿಳುನಾಡಿನವರು ಕೇಂದ್ರದಲ್ಲಿ ಹಾಕಿರುವ ತಕರಾರು ಅರ್ಜಿಗಳನ್ನು ಹಿಂಪಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಲಿ. ಅವರ ಮಿತ್ರಪಕ್ಷದ ಮನವೊಲಿಸಲಿ. ಡಿಎಂಕೆ ನಾಯಕ ಸ್ಟಾಲಿನ್ ಅವರ ಮನವೊಲಿಸಲಿ. ಕಾಂಗ್ರೆಸ್ ಆ ಕೆಲಸ ಮಾಡಿದರೆ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಅದಕ್ಕೆ ಹಣ ಬಿಡುಗಡೆ ಮಾಡಿಸುವುದು ನನ್ನ ಜವಾಬ್ದಾರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

HD Kumaraswamy challenges Congress to give Cauvery guarantee to Mandya
Koo

ಮಂಡ್ಯ/ಮಳವಳ್ಳಿ: ಗ್ಯಾರಂಟಿಗಳ (Congress Guarantee) ಮೂಲಕ ಜನರ ಕಣ್ಣಿಗೆ ಕಾಂಗ್ರೆಸ್ ಸರ್ಕಾರ ಮಂಕುಬೂದಿ ಎರಚುತ್ತಿದೆ. ಮಂಡ್ಯ ಜನರಿಗೆ ಕಾವೇರಿ ನೀರಿನ ಗ್ಯಾರಂಟಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ಬೆಳಕವಾಡಿಯಲ್ಲಿ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ. ಆದರೆ, ಮಂಡ್ಯ ಜಿಲ್ಲೆಯಲ್ಲಿ ಸರ್ಕಾರವೇ ಸೃಷ್ಟಿಸಿರುವ ಕೃತಕ ಬರಗಾಲದಿಂದ ಕಬ್ಬು, ಭತ್ತದ ಬೆಳೆ ಒಣಗಿ ಹೋಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಈ ಸರ್ಕಾರ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನಿಂದ ಕನ್ನಡಿಗರಿಗೆ ಅನ್ಯಾಯ

ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮಾಡಲು ಕರ್ನಾಟಕಕ್ಕೆ ಅವಕಾಶ ಕೊಡುವುದಿಲ್ಲ. ಕೇಂದ್ರ ಅನುಮತಿ ಕೊಡುವುದಕ್ಕೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಮಿತ್ರಪಕ್ಷ ತಮಿಳುನಾಡಿನ ಡಿಎಂಕೆ ಪಕ್ಷ ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬರೆದುಕೊಂಡಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾದ ಅನ್ಯ ರಾಜ್ಯದ ಪಕ್ಷದ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಮೇಕೆದಾಟು ಯೋಜನೆಗೆ ಹಣ ಕೊಡಿಸುವೆ

ಕನ್ನಡಿಗರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಕಾಳಜಿ ಇದ್ದರೆ ತಮಿಳುನಾಡಿನವರು ಕೇಂದ್ರದಲ್ಲಿ ಹಾಕಿರುವ ತಕರಾರು ಅರ್ಜಿಗಳನ್ನು ಹಿಂಪಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಲಿ. ಅವರ ಮಿತ್ರಪಕ್ಷದ ಮನವೊಲಿಸಲಿ. ಡಿಎಂಕೆ ನಾಯಕ ಸ್ಟಾಲಿನ್ ಅವರ ಮನವೊಲಿಸಲಿ. ಕಾಂಗ್ರೆಸ್ ಆ ಕೆಲಸ ಮಾಡಿದರೆ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಅದಕ್ಕೆ ಹಣ ಬಿಡುಗಡೆ ಮಾಡಿಸುವುದು ನನ್ನ ಜವಾಬ್ದಾರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

ಸಮಯಕ್ಕೆ ತಕ್ಕ ರಾಜಕಾರಣ

ಕಾಂಗ್ರೆಸ್ ರಾಜ್ಯಕ್ಕೆ ಬೇಕಾದ ಶಾಶ್ವತ ಕೆಲಸಗಳನ್ನು ಮಾಡುವುದು ಬಿಟ್ಟು ಅಗ್ಗದ ಕಾರ್ಯಕ್ರಮಗಳಿಗೆ ಜೋತು ಬಿದ್ದು ಜನರನ್ನು ಯಮಾರಿಸುತ್ತಿದೆ. ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ. ಕಾವೇರಿ ನೀರಿನ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್, ಡಿಎಂಕೆ ಪ್ರಣಾಳಿಕೆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಮಯಕ್ಕೆ ತಕ್ಕ ರಾಜಕಾರಣ ಮಾಡಿಕೊಂಡು ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸೇರಿದಂತೆ ಬಿಜೆಪಿ ಜೆಡಿಎಸ್ ಪಕ್ಷದ ಅನೇಕ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ನೆರೆದಿದ್ದರು.

Continue Reading

ಶಿವಮೊಗ್ಗ

Shivamogga News: ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆ, ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ: ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ

Shivamogga News: ಸೊರಬ ಪಟ್ಟಣದ ಮುರುಘಾಮಠದ ಆವರಣದಲ್ಲಿ ಮಂಗಳವಾರ ದವನದ ಹುಣ್ಣಿಮೆ ಪ್ರಯುಕ್ತ 220 ನೇ ಶಿವಾನುಭವ ಮತ್ತು ಶಿವಶರಣೆ ಅಕ್ಕಮಹಾದೇವಿ ಜಯಂತೋತ್ಸವ ಕಾರ್ಯಕ್ರಮ ನಡೆಯಿತು.

VISTARANEWS.COM


on

Shivasharane Akkamahadevi Jayanti Celebration and Shivanubhava programme at Soraba
Koo

ಸೊರಬ: ಶಿವಶರಣೆ ಅಕ್ಕಮಹಾದೇವಿ ಅವರ ವಿಚಾರಧಾರೆ, ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಅಕ್ಕನ ವಚನಗಳಲ್ಲಿ ಬದುಕಿನ ಮೌಲ್ಯತೆ ಅಡಗಿವೆ ಎಂದು ಜಡೆ ಸಂಸ್ಥಾನ ಮಠ ಮತ್ತು ಸೊರಬ ಮುರುಘಾಮಠದ ಕುಮಾರ ಕಂಪಿನ ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ (Shivamogga News) ಹೇಳಿದರು.

ಪಟ್ಟಣದ ಮುರುಘಾಮಠದ ಆವರಣದಲ್ಲಿ ಮಂಗಳವಾರ ದವನದ ಹುಣ್ಣಿಮೆ ಪ್ರಯುಕ್ತ 220ನೇ ಶಿವಾನುಭವ ಮತ್ತು ಶಿವಶರಣೆ ಅಕ್ಕಮಹಾದೇವಿ ಜಯಂತೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಇದನ್ನೂ ಓದಿ: Zero Shadow Day: ನಾಳೆ ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

ಅಕ್ಕಮಹಾದೇವಿ ಅವರ ಜೀವನ ಮತ್ತು ಸಾಧನೆ ನಮಗೆಲ್ಲ ಮಾದರಿ. ಅಕ್ಕ ಮಹಾತಪಸ್ವಿ, ಅಧ್ಯಾತ್ಮದ ಅರಿವು ಮೂಡಿಸುವ ಜ್ಯೋತಿ ಆಗಿದ್ದರು. ವಚನ ಚಳವಳಿ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದರು ಎಂದು ತಿಳಿಸಿದರು.

ರೇಣುಕಮ್ಮ ಗೌಳಿ ಅಕ್ಕಮಹಾದೇವಿ ಅವರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ನೀಡಿ, ಮಾತನಾಡಿದರು. ಜಯಮಾಲ ಅಣ್ಣಾಜಿ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ಶಿವಯೋಗಿ, ರೇವತಿ, ರೇಖಾ, ವೀಣಾ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Neha Murder Case How can a mobile photo be leaked when accused Fayaz is in jail
ಹುಬ್ಬಳ್ಳಿ18 mins ago

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Money Guide
ಮನಿ-ಗೈಡ್27 mins ago

Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Lok Sabha Election 2024
ಕರ್ನಾಟಕ33 mins ago

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Virat Kohli
ಪ್ರಮುಖ ಸುದ್ದಿ38 mins ago

Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

The Legend of Hanuman
ಸಿನಿಮಾ45 mins ago

The Legend of Hanuman: ಹನುಮ ಜಯಂತಿಯಂದೇ ‘ದಿ ಲೆಜೆಂಡ್ ಆಫ್ ಹನುಮಾನ್’ ಸೀಸನ್ 4 ಘೋಷಣೆ

HD Kumaraswamy challenges Congress to give Cauvery guarantee to Mandya
Lok Sabha Election 202452 mins ago

HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Fantasy Gaming
ಕ್ರೀಡೆ1 hour ago

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Shivasharane Akkamahadevi Jayanti Celebration and Shivanubhava programme at Soraba
ಶಿವಮೊಗ್ಗ1 hour ago

Shivamogga News: ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆ, ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ: ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ

World Book and Copyright Day celebration at Kottur
ವಿಜಯನಗರ1 hour ago

Vijayanagara News: ಕೊಟ್ಟೂರಿನಲ್ಲಿ ವಿಶ್ವ ಪುಸ್ತಕ, ಕೃತಿ ಸ್ವಾಮ್ಯ ದಿನ ಆಚರಣೆ

Minister Sharanbassappa Gowda Darshanpur Election campaign
ಯಾದಗಿರಿ1 hour ago

Lok Sabha Election 2024: ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯನ್ನು ಗೆಲ್ಲಿಸಿ: ಸಚಿವ ದರ್ಶನಾಪುರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌