Site icon Vistara News

Modi Virtual Samvada : ಅಖಾಡಕ್ಕಿಳಿದ ಮೋದಿ; 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ

Modi will campaigned in Channapatnam on April 30, Mysore-Bangalore highway traffic diverted

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸುವ ವರ್ಚುವಲ್‌ ಸಂವಾದ ಗುರುವಾರ ಬೆಳಗ್ಗೆ 9.30ಕ್ಕೆ ಆರಂಭಗೊಂಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿಯವರು ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಇದರ ಜತೆಗೆ ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇ ಅವರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯಿಂದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿದ್ದಾರೆ. ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್ಪ ಅವರಿದ್ದಾರೆ.

ರಾಜ್ಯದ ಎಲ್ಲ ಬೂತ್‌ಗಳಲ್ಲಿ ಟಿವಿ ಮೂಲಕ ಕಾರ್ಯಕ್ರಮ ವೀಕ್ಷಿಸಲಾಗುತ್ತಿದೆ. ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗಿದೆ. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೋದಿ ಅವರು ನಿರ್ದಿಷ್ಟ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಕಡಿಮೆ ಅವಧಿಯಲ್ಲಿ ಅಭ್ಯರ್ಥಿಗಳು ಎಲ್ಲ ಮನೆಗಳಿಗೆ ಭೇಟಿ ನೀಡಲು ಕಷ್ಟ ಸಾಧ್ಯವಾದ್ದರಿಂದ ಕಾರ್ಯಕರ್ತರು ಒಂದೊಂದು ಮನೆಯನ್ನು ಎರಡರಿಂದ ಮೂರು ಬಾರಿ ಸಂಪರ್ಕಿಸಿ, ಡಬಲ್ ಇಂಜಿನ್ ಸರ್ಕಾರದ ಸಾಧನೆ ಮತ್ತು ಯೋಜನೆಗಳನ್ನು ತಿಳಿಸಲಿದ್ದಾರೆ.

ನೀವು ಭಾಗಿಯಾಗುವುದು ಹೇಗೆ?

ನೀವು ಈ ಸಂವಾದವನ್ನು ನೋಡಬೇಕು ಎಂದರೆ ಮೊದಲು 1800 20 90 920ಗೆ ಮಿಸ್‌ ಕಾಲ್‌ ಕೊಡಬೇಕು. ಆಗ ಒಂದು ಲಿಂಕ್‌ ಬರುತ್ತದೆ. ಇದರ ಮೂಲಕ ನಮೋ ಆಪ್‌ ಡೌನ್‌ ಲೋಡ್‌ ಮಾಡಿಕೊಂಡರೆ ಅದರ ಮೂಲಕ ಸಂವಾದವನ್ನು ನೋಡಬಹುದು.

ಇದನ್ನೂ ಓದಿ : Karnataka election: ಬಿಜೆಪಿ ಸರ್ಕಾರ ಸ್ಥಾಪನೆಯಲ್ಲಿ ರೆಡ್ಡಿ ಪಾತ್ರ ಏನಿತ್ತು ಬಿಎಸ್‌ವೈಗೆ ಗೊತ್ತು ಎಂದ ಭೀಮಾಶಂಕರ್

Exit mobile version