ಬೆಂಗಳೂರು: ಆಫ್ರಿಕಾದ ಇಥಿಯೋಪಿಯಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ನೆಗಟಿವ್ ವರದಿ (Monkeypox fear) ಬಂದಿದೆ. ಈತ ಬೆಂಗಳೂರಿಗೆ ಬಂದಿದ್ದಾಗ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ “”ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ನೆಗಟಿವ್ ವರದಿ ಬಂದಿದೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು. ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕು ಕಂಡು ಬಂದಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆʼʼ ಎಂದು ಹೇಳಿದ್ದಾರೆ.
ಇದನ್ನೂ ಓದಿ | ದೆಹಲಿಗೂ ಬಂತು ಮಂಕಿಪಾಕ್ಸ್; ವಿದೇಶ ಪ್ರಯಾಣವನ್ನೇ ಮಾಡದವನಿಗೆ ಸೋಂಕು