ಬೆಂಗಳೂರು: ಸಾಂಕ್ರಾಮಿಕ ಕೊರೊನಾ ಸೋಂಕಿನಂತೆ ವೇಗವಾಗಿ ಮಂಕಿಪಾಕ್ಸ್ (Monkeypox) ಹರಡುವುದಿಲ್ಲ. ಆದರೆ, ಸೋಂಕಿತ ವ್ಯಕ್ತಿ ಮುಟ್ಟಿದ ವಸ್ತುಗಳನ್ನು ಬೇರೆಯವರು ಮುಟ್ಟಿದರೆ ಹರಡುವ ಸಾಧ್ಯತೆ ಇರುವುದಾಗಿ ಆರೋಗ್ಯ ಸಚಿವ ಸುಧಾಕರ್ ಆರೋಗ್ಯ ಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.
ದೇಶದಲ್ಲಿ ಮಂಕಿಪಾಕ್ಸ್ (Monkeypox) ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ (WHO) ಇದನ್ನು ಹೆಲ್ತ್ ಎಮರ್ಜೆನ್ಸಿ ಎಂದು ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಡಳಿತಕ್ಕೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿರುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ.
ಸೋಂಕಿತ ಪ್ರಕರಣ ಕಂಡು ಬಂದ ಕೂಡಲೇ ಯಾವ ರೀತಿ ಚಿಕಿತ್ಸೆ ನೀಡಬೇಕು. ಸೋಂಕಿತ ವ್ಯಕ್ತಿಯ ಐಸೋಲೇಷನ್ ಮಾಡುವುದರ ಬಗ್ಗೆ ವೈದ್ಯರಿಗೆ ಮಾಹಿತಿ ನೀಡಲಾಗಿದೆ. ಮಂಕಿಪಾಕ್ಸ್‌ನಿಂದ ಸಾವು-ನೋವು ತೀರ ವಿರಳ ಇರಲಿದೆ. ಹೀಗಾಗಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲವೆಂದು ಸಚಿವರು ತಿಳಿಸಿದರು.
ಇದನ್ನೂ ಓದಿ | ದೆಹಲಿಗೂ ಬಂತು ಮಂಕಿಪಾಕ್ಸ್; ವಿದೇಶ ಪ್ರಯಾಣವನ್ನೇ ಮಾಡದವನಿಗೆ ಸೋಂಕು