Site icon Vistara News

Weather Report | ರಾಜ್ಯದಲ್ಲಿ ಮತ್ತೆ ಮುಂಗಾರು ದುರ್ಬಲ

karnataka rain

ಬೆಂಗಳೂರು: ರಾಜ್ಯದಲ್ಲಿ ಸದ್ಯ ಮುಂಗಾರು ದುರ್ಬಲಗೊಂಡಿದ್ದು, ಮೂರು ದಿನಗಳ ನಂತರ ಮತ್ತೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲಿ ಭಾರಿ ಮಳೆಯಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗುತ್ತಾ ಬಂದಿದೆ.

ಇದನ್ನೂ ಓದಿ | Weather Report | ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿ ಎರಡು ವಾರ ಕಳೆದರೂ ಸರಿಯಾಗಿ ರಾಜ್ಯಾದ್ಯಂತ ಮಳೆಯಾಗಿಲ್ಲ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೂಡ ಆಗಾಗ ಬಂದು ಹೋಗಿದೆ. ಈಗ ಮತ್ತೆ ದುರ್ಬಲಗೊಂಡಿದೆ. ರಾಜ್ಯವಷ್ಟೇ ಅಲ್ಲದೇ ದೇಶದಲ್ಲೇ ಮುಂಗಾರು ದುರ್ಬಲಗೊಂಡಿರುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಡಿಕೆ ಮಳೆಯಾಗಲು ಬೇಕು ಸಮಯ

ರಾಜ್ಯದಲ್ಲಿ ಮುಂಗಾರು ಅವಧಿಯಲ್ಲಿ ವಾಡಿಕೆ ಯಂತೆ ಮಳೆ ಆಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎನ್ನಲಾಗಿದೆ. ರಾಜ್ಯದ ರಾಜಧಾನಿಯಲ್ಲಿ ಮುಂಗಾರು ಪೂರ್ವದಲ್ಲೇ ಸಾಕಷ್ಟು ಮಳೆಯಾಗಿದ್ದು, ಉಳಿದ ಭಾಗಗಳಲ್ಲಿ  ಸಾಧಾರಣವಾಗಿ ಮಳೆಯಾಗಿದೆ. ಹೀಗಾಗಿ ಮುಂಗಾರು ದರ್ಬಲಗೊಂಡಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿಲ್ಲ.

ಎಲ್ಲೆಲ್ಲಿ ಮಳೆಯಾಗಬಹುದು?

ರಾಜ್ಯಾದ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ , ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 20 ಡಿಗ್ರೀ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ | Assam rain: ರಣಭೀಕರ ಮಳೆಗೆ ಅಸ್ಸಾಂ ಅತಂತ್ರ, ಸಾವಿನ ಸಂಖ್ಯೆ 100ಕ್ಕೇರಿಕೆ, ಲಕ್ಷಾಂತರ ಜನರು ಬೀದಿಪಾಲು

Exit mobile version