Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ! - Vistara News

ಕರ್ನಾಟಕ

Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!

Weather Report: ಈ ಬಾರಿ ಮಂಗಳೂರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಹಿಂಗಾರು ಮಳೆಯಾಗಿಲ್ಲ. ಇನ್ನೂ ಮುಂಗಾರು ಮಳೆ ಪ್ರವೇಶ ಮಾಡದ ಕಾರಣ ನೀರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಈ ಕಾರಣಕ್ಕಾಗಿ ಮಂಗಳೂರು ವಿವಿಯ ಕಾಲೇಜಿಗೆ ಆಡಳಿತ ಮಂಡಳಿ ರಜೆ ನೀಡಿದೆ.

VISTARANEWS.COM


on

mangalore collage leave
ಹಂಪನಕಟ್ಟೆ ಬಳಿಯ ಮಂಗಳೂರು ಯುನಿವರ್ಸಿಟಿ ಕಾಲೇಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್‌ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ!

ಮಂಗಳೂರಿನಲ್ಲಿ ಮಳೆ ವಿಳಂಬದಿಂದಾಗಿ ನೀರಿಗೆ ಭಾರಿ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿ ಆಡಳಿತ ಮಂಡಳಿಯು ಕಾಲೇಜಿಗೆ ರಜೆ ನೀಡುವ ನಿರ್ಧಾರಕ್ಕೆ ಬಂದಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿ ಅಧೀನದ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಲ್ಲಿ ಕೈ-ಕಾಲುಗಳನ್ನು ತೊಳೆಯಲೂ ಸಹ ನೀರಿನ ಸಮಸ್ಯೆ ಎದುರಾಗಿದ್ದೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?

ಆನ್‌ಲೈನ್‌ ತರಗತಿ

ಸದ್ಯ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಯನ್ನು ಪ್ರಾರಂಭ ಮಾಡಲಾಗಿದೆ. ಸುಮಾರು 1800 ವಿದ್ಯಾರ್ಥಿಗಳಿಗೆ ರಜೆ ಸಿಕ್ಕಿದೆ. ಶೌಚಾಲಯ ಹಾಗೂ ಇತರೆ ಉಪಯೋಗಕ್ಕೆ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಟ್ಯಾಂಕರ್‌ ನೀರೂ ಸಾಲುತ್ತಿಲ್ಲ

ಈ ನಡುವೆ ಕಾಲೇಜು ಆಡಳಿತ ಮಂಡಳಿಯವರು ಟ್ಯಾಂಕರ್ ಮೂಲಕ ಕೆಲವು ದಿನ ನೀರು ಪೂರೈಕೆಗೆ ಕ್ರಮ ವಹಿಸಿದರು. ಆದರೆ, ಆ ನೀರು ಸಹ ಯಾವುದಕ್ಕೂ ಸಾಕಾಗದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಶುರುವಾಗಿ ನೀರಿನ ಕೊರತೆ ನೀಗುವವರೆಗೂ ಕಾಲೇಜಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬಸರಿಹಾಳದಲ್ಲಿ ಮಾರಕ ಕಾಲರಾ ರೋಗ; ಶಾಲೆಗಳಿಗೆ 3 ದಿನಗಳ ರಜೆ

ಕೊಪ್ಪಳ: ಕಳೆದ ಸೋಮವಾರ (ಜೂ.5) ಇಲ್ಲಿನ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ 9 ತಿಂಗಳ ಮಗು ಸೇರಿ 60 ವರ್ಷದ ವೃದ್ಧೆ ಮೃತಪಟ್ಟಿದ್ದರು. ಇದೀಗ ಬಸರಿಹಾಳ ಗ್ರಾಮದಲ್ಲಿ ಕಾಲರಾ ಸೋಂಕು (Cholera disease) ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಆರೋಗ್ಯ ಸುರಕ್ಷತಾ ಹಿತದೃಷ್ಟಿಯಿಂದ ಮೂರು ದಿನಗಳ ರಜೆ ಘೋಷಣೆ (holiday announced) ಮಾಡಲಾಗಿದೆ.

ಇದನ್ನೂ ಓದಿ: Text Book: ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷ ಆಗಲಾರೆ; ಸರ್ಕಾರದ ಆಫರ್‌ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ

ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿಗಳ ಆದೇಶದಂತೆ ಶಾಲಾ ಶಿಕ್ಷಣ ಇಲಾಖೆಯು ಜೂನ್‌ 7 ರಿಂದ 9 ರವರೆಗೆ ರಜೆಯನ್ನು ಘೋಷಿಸಿದೆ. ಇನ್ನು ಈ ರಜಾ ಅವಧಿಯನ್ನು ಮುಂಬರುವ ಶನಿವಾರ ಹಾಗೂ ಭಾನುವಾರದಂದು ಶಾಲೆ ನಡೆಸಿ ರಜಾ ಅವಧಿಯನ್ನು ಸರಿದೂಗಿಸಲು ಶಾಲೆಗಳಿಗೆ ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

DV Sadananda Gowda : ಕಾಂಗ್ರೆಸ್‌ ಡಿ.ವಿ. ಸದಾನಂದ ಗೌಡರಿಗೆ ಆಫರ್‌ ನೀಡಿದೆ. ಒಕ್ಕಲಿಗರ ಸಂಘವೂ ಬೆಂಬಲ ನೀಡಿದೆ. ಅದರೆ, ಕಾಂಗ್ರೆಸ್‌ ಪಕ್ಷವೇ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಂತೆ ಕಾಣಿಸುತ್ತಿಲ್ಲ.

VISTARANEWS.COM


on

DV Sadananda Gowda Congress
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election 2024) ಸ್ಪರ್ಧೆಗೆ ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿರುವ ಬೆಂಗಳೂರು ಉತ್ತರ ಕ್ಷೇತ್ರದ (Bengaluru North Constituency) ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (DV Sadananda Gowda) ಅವರು ತೆಗೆದುಕೊಳ್ಳುವ ಯಾವುದೇ ರಾಜಕೀಯ ನಿರ್ಣಯಕ್ಕೆ ತಮ್ಮ ಬೆಂಬಲವಿದೆ ಎಂದು ಒಕ್ಕಲಿಗರ ಸಂಘ (Okkaligara Association) ಪ್ರಕಟಿಸಿದೆ. ಈ ನಡುವೆ, ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯೂ ಸೇರಿದಂತೆ ಪ್ರಮುಖ ರಾಜಕೀಯ ತೀರ್ಮಾನವನ್ನು ಬುಧವಾರ ಬೆಳಗ್ಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಸೋಮವಾರವಷ್ಟೇ 71ನೇ ಜನ್ಮ ದಿನ ಆಚರಿಸಿಕೊಂಡ ದೇವರಗುಂಡ ವೆಂಕಪ್ಪ ಸದಾನಂದ ಗೌಡ ಅವರು ಸಂಜೆ ತಮ್ಮ ಆತ್ಮೀಯರ ಜತೆ ಮುಂದಿನ ರಾಜಕೀಯ ತೀರ್ಮಾನದ ಬಗ್ಗೆ ಚರ್ಚೆ ನಡೆಸಿದ್ದರು. ಅವರು ಮಂಗಳವಾರ ಬೆಳಗ್ಗೆ 10.30ಕ್ಕೆ ಮುಂದಿನ ತೀರ್ಮಾನ ಪ್ರಕಟಿಸುವುದಾಗಿ ಘೋಷಿಸಿ ಪತ್ರಿಕಾಗೋಷ್ಠಿಗೂ ಆಹ್ವಾನ ನೀಡಿದ್ದರು. ಆದರೆ, ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದರು.

ಒಕ್ಕಲಿಗರ ಸಂಘದ ಜತೆ ಮಾತುಕತೆ ನಡೆಸಬೇಕಾಗಿರುವುದರಿಂದ ಪತ್ರಿಕಾಗೋಷ್ಠಿಯನ್ನು ಬುಧವಾರಕ್ಕೆ ಮುಂದೂಡಿರುವುದಾಗಿ ಪ್ರಕಟಿಸಿದ ಡಿ.ವಿ. ಸದಾನಂದ ಗೌಡರು ಒಕ್ಕಲಿಗರ ಸಂಘದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.

ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆಗಿನ ಸಭೆಯ ಬಳಿಕ ಮಾತನಾಡಿದ ಡಿ.ವಿ. ಸದಾನಂದ ಗೌಡರು, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಕಾಂಗ್ರೆಸ್ ನಿಂದ ಅಫರ್ ಇದೆ. ಈಗ ಯಾವುದನ್ನೂ ನಾನು ಹೇಳಲ್ಲ, ನಾಳೆ ಸುದ್ದಿಗೋಷ್ಠಿ ಕರೆಯುತ್ತೇನೆ ಎಂದು ಹೇಳಿದರು.

ಅನ್ಯಾಯವಾಗಿದೆ, ಡಿವಿಎಸ್‌ಗೆ ಪೂರ್ಣ ಬೆಂಬಲ ಎಂದ ಅಧ್ಯಕ್ಷರು

ಈ ನಡುವೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿಕೆ ನೀಡಿ, ನಮ್ಮ ಒಕ್ಕಲಿಗ ಸಮುದಾಯಕ್ಕೆ ಮೂರೂ ಪಕ್ಷಗಳಲ್ಲಿ ಟಿಕೆಟ್ ಕೊಡುವಲ್ಲಿ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಎಂಟು ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಎರಡೇ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು ಎಂದು ಬೇಡಿಕೆ ಇಟ್ಟರು.

ಬಿಜೆಪಿಯಲ್ಲಿ ಸಿಟಿ ರವಿ, ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿಲ್ಲ ಎಂದು ಹೇಳಿದ ಅವರು, ಸದಾನಂದ ಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ ಇರುತ್ತದೆ. ಈ ಎಲ್ಲ ವಿಚಾರಗಳನ್ನು ಡಿ.ವಿ. ಸದಾನಂದ ಗೌಡರೇ ಸುದ್ದಿಗೋಷ್ಠಿ ಮಾತಿ ಹೇಳುತ್ತಾರೆ ಎಂದರು. ನಮ್ಮ ಸಮುದಾಯಕ್ಕೆ ಅನ್ಯಾಯ ಆದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಹನುಮಂತಯ್ಯ ಹೇಳಿದರು.

ಇದನ್ನೂ ಓದಿ : Lok Sabha Election 2024 : ಡಿ.ವಿ. ಸದಾನಂದ ಗೌಡ ಬಿಜೆಪಿಗೆ ಗುಡ್‌ಬೈ?: ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಕಾಂಗ್ರೆಸ್‌ ಮಟ್ಟದಲ್ಲಿ ಎಐಸಿಸಿ ನಾಯಕರ ಜತೆ ಇಂದು ಚರ್ಚೆ

ಬಿಜೆಪಿ ಟಿಕೆಟ್‌ ವಂಚಿತ ಡಿ.ವಿ. ಸದಾನಂದ ಗೌಡರನ್ನು ಕಾಂಗ್ರೆಸ್‌ಗೆ ಸೆಳೆಯಲು ಚರ್ಚೆ ನಡೆದಿರುವುದು ನಿಜವಾದರೂ ಅದು ದೊಡ್ಡ ನಾಯಕರ ನಡುವೆ ಚರ್ಚೆಗೆ ಬಂದಿಲ್ಲ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್‌ ಅವರು ಡಿ.ವಿ. ಸದಾನಂದ ಗೌಡರಿಗೆ ಆಹ್ವಾನ ನೀಡಿ, ಕೆಲವು ಕ್ಷೇತ್ರಗಳ ಆಫರ್‌ ನೀಡಿದ್ದಾರಾದರೂ ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿಲ್ಲ ಎನ್ನಲಾಗಿದೆ. ಇದರ ಜತೆಗೆ ಹೈಕಮಾಂಡ್ ಮಟ್ಟದಲ್ಲಿ ಕೂಡಾ ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಚರ್ಚೆ ನಡೆದಿಲ್ಲ.

ಹೀಗಾಗಿ ಮಂಗಳವಾರ ಸಿಎಂ ಮತ್ತು ಡಿಸಿಎಂ ಸೇರಿ ಎಐಸಿಸಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಜಗದೀಶ್‌ ಶೆಟ್ಟರ್‌ ಸೇರ್ಪಡೆ ಮತ್ತು ನಿರ್ಗಮನದ ಬಳಿಕ ಬಿಜೆಪಿಯಿಂದ ಬರುವವರ ಬಗ್ಗೆ ಯಾವ ನಿಲುವು ತೆಗೆದುಕೊಳ್ಳಬೇಕು ಎಂಬ ಗೊಂದಲ ಕಾಂಗ್ರೆಸ್‌ನಲ್ಲಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಇಂಥ ವಲಸೆಗೆ ತಗಾದೆ ಎತ್ತಿದ್ದಾರೆ ಎನ್ನಲಾಗಿದೆ.

ಡಿ.ವಿ. ಸದಾನಂದ ಗೌಡರು ಒಂದು ವೇಳೆ ಬಂದರೂ ಅವರಿಗೆ ಮೈಸೂರು-ಕೊಡಗು ಟಿಕೆಟ್‌ ನೀಡಲಾಗದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಇನ್ನೂ ಸಮರ್ಥ ಅಭ್ಯರ್ಥಿ ದೊರಕಿಲ್ಲ. ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ನಿಗದಿ ಮಾಡಿರುವ ಪ್ರಿಯಾ ಕೃಷ್ಣ ಇನ್ನೂ ಒಪ್ಪಿಲ್ಲ. ಪ್ರಿಯಾ ಕೃಷ್ಣ ಮನವೊಲಿಕೆಗೆ ಸಚಿವ ಕೃಷ್ಣ ಭೈರೇಗೌಡ ಕಸರತ್ತು ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಿಯಾಕೃಷ್ಣ ಒಪ್ಪದೇ ಹೋದರೆ ಸದಾನಂದ ಗೌಡ ಅವರಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ ಮುಂದಾಗಬಹುದು.

ಆದರೆ, ಇದೆಲ್ಲವೂ ಚರ್ಚೆಯಾಗಿ ಅಂತಿಮಗೊಳ್ಳಬೇಕಾಗಿರುವುದರಿಂದ ಅಲ್ಲಿವರೆಗೆ ಸಮಯ ತೆಗೆದುಕೊಳ್ಳಲು ಡಿ.ವಿ. ಸದಾನಂದ ಗೌಡರು ಸುದ್ದಿಗೋಷ್ಠಿಯನ್ನು ಒಂದು ದಿನ ಮುಂದೂಡಿದರೇ ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಇತ್ತ ಬಿಜೆಪಿಯಲ್ಲೂ ಡಿ.ವಿ. ಸದಾನಂದ ಗೌಡರನ್ನು ಉಳಿಸಿಕೊಳ್ಳುವ ಯತ್ನವೊಂದು ನಡೆಯುತ್ತಿದೆ. ಅದು ಡಿ.ವಿ. ಸದಾನಂದ ಗೌಡರನ್ನು ಹೇಗೆ ಮನ ಒಲಿಸುತ್ತದೆ ಕಾದು ನೋಡಬೇಕಾಗಿದೆ.

Continue Reading

ರಾಜಕೀಯ

Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

Vistara News Polling Booth: ವಿಸ್ತಾರ ಪೋಲಿಂಗ್ ಬೂತ್‌ಗೆ ಸಾವಿರಾರು ಕರೆಗಳು ಬಂದಿದ್ದು, ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇರುವುದು ಕಂಡುಬಂದಿದೆ. ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಮತಗಳು ಬಂದಿವೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Tough fight between BJP and Congress in Chamarajanagar
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಮಂಗಳವಾರ (ಮಾ.19) ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ (Vistara news polling booth) ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಠಿಣ ಸ್ಪರ್ಧೆ ಇರುವುದು ಕಂಡು ಬಂದಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 5777 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 54ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 45ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ. ಉಳಿದಂತೆ ಶೇ. 1ರಷ್ಟು ಜನ ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಬಿಜೆಪಿ-ಕಾಂಗ್ರೆಸ್ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಬಿಜೆಪಿಗೆ 3127 ಮತದಾರರು ಮತ ನೀಡಿದ್ದು, ಕಾಂಗ್ರೆಸ್‌ ಪಕ್ಷಕ್ಕೆ 2594 ಮತಗಳು ಬಂದಿವೆ. ಇತರ ಪಕ್ಷಗಳ ಅಭ್ಯರ್ಥಿಗಳಿಗೆ 56 ಮತಗಳು ಸಿಕ್ಕಿವೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು: 5777
ಬಿಜೆಪಿ: 3127 (ಶೇ.54)
ಕಾಂಗ್ರೆಸ್: 2594 (ಶೇ.45)
ಇತರೆ: 56 (ಶೇ.1)

ಇದನ್ನೂ ಓದಿ | Vistara News Polling Booth: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯೇ ದೊಡ್ಡಣ್ಣ!

ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್‌. ಬಾಲರಾಜ್‌ ಕಣಕ್ಕಿಳಿಯುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ದರ್ಶನ್‌ ಧ್ರುವನಾರಾಯಣ್, ಸುನೀಲ್‌ ಬೋಸ್‌, ಜಿ.ಎನ್.ನಂಜುಂಡಸ್ವಾಮಿ ಹಾಗೂ ಡಿ.ಎನ್‌.ನಟರಾಜು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಈ ಮೀಸಲು ಕ್ಷೇತ್ರದಲ್ಲಿ 2004ರಲ್ಲಿ ಜೆಡಿಎಸ್‌ನ ಎಂ. ಶಿವಣ್ಣ, 2009 ಮತ್ತು 2014ರಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ, 2019ರಲ್ಲಿ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್‌ಪ್ರಸಾದ್‌ ಅವರು ಗೆಲುವು ಸಾಧಿಸಿದ್ದರು.

ಕ್ಷೇತ್ರದಲ್ಲಿ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಹಾಲಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಹೀಗಾಗಿ ಈ ಬಾರಿ ಅವರ ಬದಲಿಗೆ ಕ್ಷೇತ್ರದಿಂದ ಮಾಜಿ ಶಾಸಕ ಎಸ್. ಬಾಲರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದೀಗ ವಿಸ್ತಾರ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಠಿಣ ಸ್ಪರ್ಧೆ ಇರುವುದು ಕಂಡು ಬಂದಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ | Vistara News Polling Booth: ತುಮಕೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ಜೈ ಎಂದ ಮತದಾರರು!

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Continue Reading

ಉತ್ತರ ಕನ್ನಡ

Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್

Uttara Kannada News: ಶಿರಸಿಯಲ್ಲಿ ಮಾರ್ಚ್ 19ರಿಂದ (ಇಂದಿನಿಂದ) ಮಾ.27ರವರೆಗೆ ಜರುಗುವ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ವಾ.ಕ.ರ.ಸಾ. ಸಂಸ್ಥೆ ಶಿರಸಿ ವಿಭಾಗದ ವತಿಯಿಂದ ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ.

VISTARANEWS.COM


on

Additional Special bus facility for Sri Marikamba Devi Jatra in Sirsi
Koo

ಕಾರವಾರ: ಶಿರಸಿಯಲ್ಲಿ ಮಾರ್ಚ್ 19ರಿಂದ (ಇಂದಿನಿಂದ) ಮಾ.27ರವರೆಗೆ ಜರುಗುವ ಶ್ರೀ ಮಾರಿಕಾಂಬಾ ದೇವಿ (Sri Marikamba Devi) ಜಾತ್ರೆಯ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ವಾ.ಕ.ರ.ಸಾ. ಸಂಸ್ಥೆ ಶಿರಸಿ ವಿಭಾಗದ ವತಿಯಿಂದ ಹೆಚ್ಚುವರಿ ವಿಶೇಷ ಬಸ್‌ಗಳು ಕಾರ್ಯಾಚರಣೆ (Uttara Kannada News) ನಡೆಸಲಿವೆ.

ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ ಜಾತ್ರಾ ಅಂಗಡಿ-ಮುಂಗಟ್ಟು ಹಾಕುವುದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗಲಿದ್ದು, ಹಳೆ ಬಸ್ ನಿಲ್ದಾಣದ ಸಾರಿಗೆ ಕಾರ್ಯಾಚರಣೆಗಳನ್ನು ಹೊಸ ಬಸ್ ನಿಲ್ದಾಣದಿಂದ ಮಾಡಲಾಗುವುದು. ಶ್ರೀ ಮಾರಿಕಾಂಬಾ ಜಾತ್ರೆಗೆ ಬರುವ ಭಕ್ತಾದಿಗಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲು ಹೆಚ್ಚುವರಿಯಾಗಿ ಶಿರಸಿಯಿಂದ ಹಾನಗಲ್, ಹಾವೇರಿ, ಹುಬ್ಬಳ್ಳಿ, ಗದಗ, ಲಕ್ಷ್ಮೇಶ್ವರ, ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ, ಯಲ್ಲಾಪುರ, ದಾಂಡೇಲಿ, ಅಂಕೋಲಾ, ಕಾರವಾರ ಮತ್ತು ಪ್ರಮುಖ ಊರುಗಳಿಗೆ ವಿಶೇಷ ಸಾರಿಗೆ ಸೌಲಭ್ಯವಿದೆ.

ಜಾತ್ರೆಯ ದಿನಗಳಲ್ಲಿ ಹಾನಗಲ್, ಹಾವೇರಿ, ಹುಬ್ಬಳ್ಳಿ ಕಡೆಗೆ ಹೋಗುವ ಸಾರಿಗೆ ಬಸ್‌ಗಳು ಶಿರಸಿ ಹೊಸ ಬಸ್ ನಿಲ್ದಾಣದಿಂದ ಅಶ್ವಿನಿ ಸರ್ಕಲ್- ಮಾಸ್ತಿಕಟ್ಟಾ ಸರ್ಕಲ್ -ಎಪಿಎಂಸಿ- ಶಿರಸಿ ಘಟಕ-ವಿವೇಕಾನಂದ ಕ್ರಾಸ-ಚಿಪಗಿ ಸರ್ಕಲ್ ಮಾರ್ಗವಾಗಿ ಸಂಚರಿಸಲಿವೆ. ಶಿರಸಿ ಮಾರಿಕಾಂಬಾ ದೇವಸ್ಥಾನದ ಮುಂದಿನ ರಸ್ತೆಯನ್ನು ಬಸ್ ಸಂಚಾರಕ್ಕೆ ನಿಷೇಧಿಸಿರುವುದರಿಂದ ಬನವಾಸಿ ಮಾರ್ಗದ ಸಾರಿಗೆಗಳನ್ನು ರಾಮನಬೈಲ್ ಕ್ರಾಸ್‌ನಿಂದ ಕಾರ್ಯಾಚರಣೆ ನಡೆಸಲಾಗುವುದು.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಹ್ಯಾಟ್ರಿಕ್​ ವಿಕೆಟ್ ಸಾಧನೆ ಮಾಡಿದ ಬೌಲರ್​ಗಳ ವಿವರ ಇಲ್ಲಿದೆ

ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಬಸ್‌ಗಳು ಶಿರಸಿ ಹೊಸ ಬಸ್ ನಿಲ್ದಾಣದಿಂದ ಪದ್ಮಶ್ರೀ ಸರ್ಕಲ್, ಹನುಮಾನ ವ್ಯಾಯಾಮ ಶಾಲೆ, ಐದು ರಸ್ತೆ ಸರ್ಕಲ್ ಮುಖಾಂತರ ಸಂಚರಿಸುತ್ತವೆ. ಪ್ರಯಾಣಿಕರು ಶಿರಸಿ ಹೊಸ ಬಸ್ ನಿಲ್ದಾಣ ಅಥವಾ ಹನುಮಾನ ವ್ಯಾಯಾಮ ಶಾಲೆ ಆವರಣ ಬಸ್ ತಂಗುದಾಣದಿಂದ ಪ್ರಯಾಣಿಸಬಹುದಾಗಿದೆ. ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಭಾಗದಿಂದ ಶಿರಸಿಗೆ ಬರುವ ಪ್ರಯಾಣಿಕರು ರಾಯಪ್ಪಾ ಹುಲೇಕಲ್ ಶಾಲಾ ತಂಗುದಾಣಕ್ಕೆ ಅಥವಾ ಹೊಸ ಬಸ್ ನಿಲ್ದಾಣದಲ್ಲಿ ಇಳಿಯಬಹುದಾಗಿದೆ.

ಅಶ್ವಿನಿ ವೃತ್ತ, ರಾಮನಬೈಲ್ ಕ್ರಾಸ್‌, ಎಪಿಎಂಸಿ ಕ್ರಾಸ್ (ಹುಬ್ಬಳ್ಳಿ ರಸ್ತೆ) ಹನುಮಾನ ವ್ಯಾಯಾಮ ಶಾಲೆ ಆವರಣ ಮತ್ತು ರಾಯಪ್ಪಾ ಹುಲೇಕಲ್ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂದುದಾಣಗಳನ್ನು ನಿರ್ಮಿಸಲಾಗಿದೆ. ಈ ವ್ಯವಸ್ಥೆಯು ಹಳೆ ಬಸ್ ನಿಲ್ದಾಣದ ಜಾಗವನ್ನು ಖುಲ್ಲಾಪಡಿಸುವವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: Unilever Comapny: ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆ ಸರಿದ ಯೂನಿಲಿವರ್ ಕಂಪೆನಿ; 7,500 ಉದ್ಯೋಗ ಕಡಿತದ ಸೂಚನೆ

ಸಾರಿಗೆ ವ್ಯವಸ್ಥೆಗಳ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760991725, 7760991702, 7760991713, 9980430323, 7795984168 ಮತ್ತು 08344-229952 ನ್ನು ಸಂಪರ್ಕಿಸಬಹುದಾಗಿದೆ ಎಂದು ಶಿರಸಿ ಉಪ ವಿಭಾಗದ ವಾ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೆಂಗಳೂರು

Hanuman Chalisa : ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಇವರೇ ನೋಡಿ..

Hanuman Chalisa : ಅಂಗಡಿಯಲ್ಲಿ ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹಿಂದು ವ್ಯಾಪಾರಿಗೆ ಹಲ್ಲೆಮಾಡಿದ ದುಷ್ಟರು ಇವರೇ ನೋಡಿ.. ಇಲ್ಲಿದೆ ಅವರ ಭಾವಚಿತ್ರಗಳು ಮತ್ತು ಸಂಪೂರ್ಣ ವಿವರ.

VISTARANEWS.COM


on

Hanuman Chalisa Accused
ಹನುಮಾನ್‌ ಚಾಲೀಸಾ ಪ್ರಕರಣದ ಬಂಧಿತರು: ಸುಲೇಮಾನ್‌ ರೋಹಿತ್‌ ಷಹನವಾಜ್‌ ತರುಣ್‌
Koo

ಬೆಂಗಳೂರು: ಬೆಂಗಳೂರಿನ (Bangalore News) ನಗರ್ತ ಪೇಟೆಯ ಅಂಗಡಿಯಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಶ್ಲೋಕ ಹಾಕಿದ ಎಂಬ ಕಾರಣಕ್ಕಾಗಿ ಹಿಂದು ವ್ಯಾಪಾರಿಯೊಬ್ಬನ (Attack on Hindu Trader) ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Five people Arrested). ಅವರಲ್ಲಿ ಒಬ್ಬ ಅಪ್ರಾಪ್ತ ವಯಸ್ಸಿನವನೂ ಇದ್ದಾನೆ. ಸುಲೇಮಾನ್‌, ಷಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಎಂಬವರೇ ಹನುಮಾನ್‌ ಚಾಲೀಸಾ ಕೇಳಿಸಿಕೊಳ್ಳಲಾಗದೆ ಹಲ್ಲೆ ಮಾಡಿದವರು.

ಮಾರ್ಚ್‌ 17ರ ಭಾನುವಾರ ಸಾಯಂಕಾಲ 6.15ರ ಹೊತ್ತು. ನಗರ್ತ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಸಿದ್ಧಣ್ಣ ಗಲ್ಲಿಯಲ್ಲಿ ಕಾರ್ಯಾಚರಿಸುತ್ತಿರುವ ಕೃಷ್ಣ ಟೆಲಿಕಾಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಕೇಶ್‌ ಅವರು ಹನುಮಾನ್‌ ಚಾಲೀಸಾ ಹಾಕಿದ್ದರು.

ಆಗ ಅಲ್ಲಿಗೆ ಆಗಮಿಸಿದ ಸುಲೇಮಾನ್‌, ಷಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಮತ್ತು ಇನ್ನೊಬ್ಬ ವ್ಯಕ್ತಿ ಹಿಂದು ದೇವರ ಭಜನೆಯನ್ನು ಬಂದ್‌ ಮಾಡಲು ಹೇಳಿದ್ದಾರೆ. ಅಂಗಡಿಯಲ್ಲಿದ್ದ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಈಗ ಆಜಾನ್‌ ಟೈಮ್‌, ದೇವರ ಭಜನೆ ಹಾಕುವಂತಿಲ್ಲ ಎಂದು ಎಚ್ಚರಿಕೆ ನೀಡಿದರು. ಆದರೆ, ಮುಕೇಶ್‌ ಅವರ ಮಾತು ಕೇಳಿಲ್ಲ. ನಾನು ನಮ್ಮ ದೇವರ ಹಾಡು ಹಾಕಿದರೆ ನಿಮಗೇನು ತೊಂದರೆ ಎಂದು ಕೇಳಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಿಸಿಕೊಂಡಿರುವ ಸುಲೇಮಾನ್‌, ಷಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : Hanuman Chalisa: ನಗರ್ತಪೇಟೆಯಲ್ಲಿ ಗುಡುಗಿದ ‘ಕೇಸರಿ’; ಕಠಿಣ ಕ್ರಮದ ಭರವಸೆ, ಪ್ರತಿಭಟನೆಗೆ ವಿರಾಮ

ಬಂಧಿತರ ಪ್ರವರ ಹೀಗಿದೆ ನೋಡಿ..

ಮುಖೇಶ್ ಮೇಲೆ ಹಲ್ಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಲ್ಲಿ ಪ್ರಮುಖನಾಗಿರುವ ಸುಲೇಮಾನ್ ಬಾಡಿಗೆ ವಾಹನಕ್ಕೆ ಕಾರು ಚಾಲಕನಾಗಿ ಹೋಗುತ್ತಿದ್ದ. ಷಹನವಾಜ್‌ಗೆ ಯಾವುದೇ ಕೆಲಸವಿಲ್ಲ. ರೋಹಿತ್ ಮೆಡಿಕಲ್ ಸ್ಟೋರ್ ಗಳಿಗೆ ಔಷಧ ಸಪ್ಲೈ ಮಾಡೋ ಕೆಲಸ ಮಾಡುತ್ತಿದ್ದ. ತರುಣ್ ಖಾಸಗಿ ಆಸ್ಪತ್ರೆಯೊಂದರಲ್ಲಿ ವಾರ್ಡ್ ಬಾಯ್ ಆಗಿದ್ದ.

Hanuman Chalisa Accused೧

21 ದಿನದ ಹಿಂದೆ ಹೋಟೆಲ್‌ ಮಾಲೀಕನ ಮೇಲೆ ಹಲ್ಲೆ ಮಾಡಿದ್ದ ಗ್ಯಾಂಗ್‌

ಸುಲೇಮಾನ್‌ ಮತ್ತು ಗ್ಯಾಂಗ್‌ ಈ ಭಾಗದಲ್ಲಿ ಇಂಥ ದುಷ್ಟ ಕೃತ್ಯಗಳಲ್ಲಿ ಭಾಗಿಯಾಗುವುದು ಇದು ಮೊದಲ ಸಲವೇನೂ ಅಲ್ಲ. ಮುಕೇಶ್‌ ನ ಅಂಗಡಿಗೇ ಈ ಹಿಂದೆ ಹಲವು ಬಾರಿ ಬಂದು ಬೇರೆ ಬೇರೆ ವಸ್ತುಗಳನ್ನು ಕೇಳಿತ್ತು. ಅವರು ಹಣ ಕೊಡದೆ ದಬಾಯಿಸಿ, ಬೆದರಿಸಿ ಹೋಗುತ್ತಾರೆ ಎಂಬ ಕಾರಣಕ್ಕೆ ಮುಕೇಶ್‌ ಕೊಡುತ್ತಿರಲಿಲ್ಲ ಎನ್ನಲಾಗಿದೆ.

ಕಳೆದ 21 ದಿನಗಳ‌ ಹಿಂದೆಯಷ್ಟೇ ಹೋಟೆಲ್‌ ಬ್ಯುಸಿನೆಸ್‌ ನಡೆಸುತ್ತಿದ್ದ ಸತೀಶ್‌ ಎಂಬವರ ಮೇಲೆ ಈ ಗ್ಯಾಂಗ್‌ ಹಲ್ಲೆ ಮಾಡಿದೆ. ಈ ಗ್ಯಾಂಗ್‌ನ ಕೆಲವರು ಸತೀಶ್‌ ಅವರ ಹೋಟೆಲ್‌ಗೆ ಹೋಗಿ ಫ್ರೀಯಾಗಿ ಊಟ ಕೊಡಬೇಕು ಎಂದು ಕೇಳಿದ್ದಾರೆ. ಊಟ ಕೊಟ್ಟಿಲ್ಲ ಎಂದು ಹೋಟೆಲ್‌ ಮಾಲೀಕ ಸತೀಶ್ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದರು.

ಈ ಬಗ್ಗೆ ದೂರು ನೀಡಿದರೂ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎನ್ನಲಾಗಿದೆ. ಸಂಸದ ತೇಜಸ್ವಿ ಸೂರ್ಯ ಅವರ ಮುಂದೆ ಸಾರ್ವಜನಿಕರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಆರೋಪಿಗಳಿಗೆ ಪೊಲೀಸರ ಬೆಂಬಲವೂ ಇರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

Continue Reading
Advertisement
Aishwarya Rai
ಬಾಲಿವುಡ್5 mins ago

Aishwarya Rai: ತಂದೆ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಐಶ್ವರ್ಯಾ ರೈ!

Summer Fashion
ಫ್ಯಾಷನ್10 mins ago

Summer Fashion: ಸಮ್ಮರ್‌ ಸೀರೆಯಲ್ಲಿ ನಟಿ ನಿಮಿಕಾರಂತೆ ಆಕರ್ಷಕವಾಗಿ ಕಾಣಲು 5 ಟಿಪ್ಸ್ !

DV Sadananda Gowda Congress
ರಾಜಕೀಯ12 mins ago

DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

Karti Chidambaram
ಪ್ರಮುಖ ಸುದ್ದಿ19 mins ago

Chinese visa scam : ಚೀನಾ ವೀಸಾ ಹಗರಣ: ಕಾರ್ತಿ ಚಿದಂಬರಂ ಸೇರಿ ಹಲವರಿಗೆ ಕೋರ್ಟ್​​ ಸಮನ್ಸ್

Tough fight between BJP and Congress in Chamarajanagar
ರಾಜಕೀಯ33 mins ago

Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

Additional Special bus facility for Sri Marikamba Devi Jatra in Sirsi
ಉತ್ತರ ಕನ್ನಡ37 mins ago

Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್

Modi Speech
ಪ್ರಮುಖ ಸುದ್ದಿ40 mins ago

Narendra Modi : ಸೇಲಂ ರ್ಯಾಲಿಯ ಭಾಷಣದಲ್ಲಿ ಭಾವುಕರಾದ ಪ್ರಧಾನಿ ಮೋದಿ; ಅವರು ಹೇಳಿದ್ದೇನು?

Ondu Sarala Premakathe ott in amazon prime
ಸ್ಯಾಂಡಲ್ ವುಡ್49 mins ago

Ondu Sarala Premakathe: ಒಟಿಟಿಗೆ ಬಂದೇ ಬಿಡ್ತು ʻಒಂದು ಸರಳ ಪ್ರೇಮಕಥೆʼ; ಕನ್ನಡಿಗರ ಆಕ್ರೋಶ!

modi
Lok Sabha Election 202459 mins ago

Narendra Modi: ಕಾಂಗ್ರೆಸ್, ಡಿಎಂಕೆಯಿಂದ ಹಿಂದೂ ಧರ್ಮಕ್ಕೆ ನಿರಂತರ ಅವಮಾನ; ಮೋದಿ ವಾಗ್ದಾಳಿ

Sita Soren
ದೇಶ1 hour ago

Sita Soren : ಜಾರ್ಖಂಡ್ ಮಾಜಿ ಸಿಎಂ ಹೇಮಂತ್​ ಸೊರೆನ್​ ಅತ್ತಿಗೆ ಬಿಜೆಪಿಗೆ ಸೇರ್ಪಡೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು4 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು23 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ2 days ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ4 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ5 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌