Site icon Vistara News

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬಿಸಿಯೂಟ

ರಾಯಚೂರು: ಜಿಲ್ಲೆಯ ಅಮೀನಗಡ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ ವಾಂತಿ, ಭೇದಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾದ 20ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂದಿನಂತೆ ಮಕ್ಕಳು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಬಿಸಿಯೂಟ ಸೇವನೆ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣ ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಮನೆ ದೋಚಿದವ ಸಿಕ್ಕಿಬಿದ್ದ: Pubg Gameಗಾಗಿ ಹೊಸ ಮೊಬೈಲ್‌ಗೆ ದುಡ್ಡು ಬೇಕಿತ್ತಂತೆ!

Exit mobile version