Site icon Vistara News

Rain News: ಹರಪನಹಳ್ಳಿಯಲ್ಲಿ ಸಿಡಿಲಿಗೆ 30ಕ್ಕೂ ಹೆಚ್ಚು ಕುರಿಗಳ ಬಲಿ

lightning

Shivamogga

ವಿಜಯನಗರ: ಸಿಡಿಲಿಗೆ ಮೂವತ್ತಕ್ಕೂ ಹೆಚ್ಚು ಕುರಿಗಳು ಬಲಿಯಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಗಡಿಗುಡಾಳ್ ಗ್ರಾಮದಲ್ಲಿ ನಡೆದಿದೆ. ಮಳೆ (Rain News) ಬರುತ್ತಿದ್ದಾಗ ಮರದ ಕೆಳಗೆ ಇದ್ದ ಕುರಿ ಹಿಂಡಿಗೆ ಸಿಡಿಲು ಬಡಿದು ಅನಾಹುತ ಸಂಭವಿಸಿದೆ.

ನಾಲ್ವರು ಕುರಿಗಾಹಿಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಕಂದಾಯ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಕುರಿಗಾಹಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ | CM Siddaramaiah : ಬರ ಸಂಕಷ್ಟದ ನಡುವೆ ಸಿಎಂ ನಿವಾಸದ ನವೀಕರಣಕ್ಕೆ ಕೋಟಿ ಕೋಟಿ ಖರ್ಚು! ಬೇಕಿತ್ತಾ ದುಂದು ವೆಚ್ಚ?

ಸಿಡಿಲು ಬಡಿದು ಎರಡು ಹಸುಗಳು ಸಾವು

ಮೈಸೂರು: ಸಿಡಿಲು ಬಡಿದು ಎರಡು ಹಸುಗಳು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದೆ. ಹೀಗಾಗಿ ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಹಸುಗಳು ಮೃತಪಟ್ಟಿವೆ.
ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿತ್ತು. ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಚನ್ನಶೆಟ್ಟಿ ಮನವಿ ಮಾಡಿದ್ದಾರೆ.

5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಇಂದು ಸಿಕ್ಕಾಪಟ್ಟೆ ಮಳೆ

ಬೆಂಗಳೂರು: ಮಲೆನಾಡು, ಕರಾವಳಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಹಿತ (karnataka Weather Forecast) ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ, ಕೋಲಾರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಭರ್ಜರಿ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಬಳ್ಳಾರಿ, ವಿಜಯನಗರ ಮತ್ತು ಹಾವೇರಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಇದನ್ನೂ ಓದಿ | Three phase power : ರೈತರಿಗೆ ಗುಡ್‌ ನ್ಯೂಸ್‌; ಇನ್ನು ಪ್ರತಿ ದಿನ ಏಳು ತಾಸು ವಿದ್ಯುತ್‌ ಪೂರೈಕೆ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.

Exit mobile version