ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಕ್ರಿಸ್ತುಜ್ಯೋತಿ ವಸತಿ ಶಾಲೆಯಲ್ಲಿ (Shivamogga News) ಏಕಾಏಕಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಾಹಾರ ಸೇವನೆಯೇ ಮಕ್ಕಳು ಅಸ್ವಸ್ಥರಾಗಲು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ವಿಷಾಹಾರ ಸೇವನೆ ಮಾಡಿರುವ ಅನುಮಾನಗಳಿದ್ದು, ಶನಿವಾರ ಬೆಳಗ್ಗೆ ಬಹುತೇಕರಲ್ಲಿ ವಾಂತಿ, ತಲೆ ಸುತ್ತುವಿಕೆ ಕಂಡು ಬಂದಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಸಂಜೆಯಾಗುತ್ತಲೇ ಇನ್ನುಳಿದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಕಂಡು ಬಂದಿದೆ. ಕೂಡಲೇ ವಿದ್ಯಾರ್ಥಿಗಳನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾದೆ.
ಇದನ್ನೂ ಓದಿ | Cyber Fraud: ನಿವೃತ್ತ ನ್ಯಾಯಾಧೀಶರಿಗೇ ಆನ್‌ಲೈನ್ ಮೂಲಕ 1.67 ಲಕ್ಷ ರೂ. ವಂಚಿಸಿದ ಕಳ್ಳರು
ಸ್ಥಳಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಡಾ.ವಿಕ್ರಂ, ಡಾ.ಗಜೇಂದ್ರ, ಡಾ.ಆಸಿಫಾ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬಂದ ಎಲ್ಲ ವಿದ್ಯಾರ್ಥಿಗಳನ್ನು ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದೆ, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.