Site icon Vistara News

Contaminated water | ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

belagavi Contaminated water 2

ಬೆಳಗಾವಿ: ರಾಮದುರ್ಗ ‌ತಾಲೂಕಿನ‌ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಐವತ್ತಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, ಸ್ಥಳೀಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ನಳಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಸೇರ್ಪಡೆಗೊಂಡಿದೆ ಎನ್ನಲಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ರಾಮದುರ್ಗ ‌ತಹಸೀಲ್ದಾರ್ ಸೇರಿ ಇತರ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Contaminated water belagavi

ಮೂರು ದಿನದಲ್ಲಿ ೫೦ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ ಐವತ್ತಕ್ಕೂ ಅಧಿಕ ಜನ ಗ್ರಾಮಸ್ಥರು ಅಸ್ವಸ್ಥಗೊಂಡಿರುವುದು ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದೆ. ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುವಂತಾಗಿದೆ.

ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ.

ಇದನ್ನೂ ಓದಿ | Contaminated water | ಇಲಿ ಸತ್ತು ಬಿದ್ದ ನೀರನ್ನೇ ಪೂರೈಕೆ ಮಾಡಿದ ಅಧಿಕಾರಿಗಳು!

Exit mobile version