ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಿದ್ರಿಸುತ್ತಿದ್ದವರ ಮೇಲೆ ಮನೆ ಗೋಡೆ ಕುಸಿದು ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಶಿಥಿಲಗೊಂಡಿದ್ದ ಮನೆ ಕುಸಿದು ಮೃತಪಟ್ಟ ತಾಯಿ ಮತ್ತು ಮಗಳನ್ನು ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಮೃತರು.
ಮಂಗಳವಾರ ಬೆಳಗಿನ ಜಾವ ದುರಂತ ಸಂಭವಿಸಿದ್ದು, ತಾಯಿ-ಮಗಳು ಗೋಡೆ ಪಕ್ಕದಲ್ಲಿ ನಿದ್ರಿಸುತ್ತಿದ್ದರು. ನಿರಂತರ ಮಳೆಗೆ ಮಣ್ಣಿನ ಮನೆಯಾಗಿದ್ದರಿಂದ ಗೋಡೆ ಕುಸಿದಿದೆ.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪ್ರಕಾಶ ಗಾಯಕವಾಡ ಹಾಗೂ ತಾಲೂಕು ಪಂಚಾಯಿತಿ ಇಒ ಪರಶುರಾಮ್ ಗಸ್ತಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Rain News | ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ ಇಂದು